ಕೋವರ್ಕೊಲ್ಲಿ ಇಂದ್ರೇಶ್
ಬೆAಗಳೂರು, ಜ. ೨೦: ಪೌರಕಾರ್ಮಿಕರನ್ನು ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಬೇರೆ ಕೆಲಸಗಳಿಗೆ ನಿಯೋಜನೆ ಮಾಡುವಂತಿಲ್ಲ ಎಂದು ರಾಜ್ಯ ಪೌರಾಡಳಿತ ನಿರ್ದೇಶನಾಲಯ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ. ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸ ಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶ ನಾಲಯ ಇಲಾಖೆ ಸುತ್ತೋಲೆ ಹೊರಡಿಸಿದ್ದು ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜನೆಗೆ ಸೂಚಿಸಿದವರು ಮತ್ತು ಅವರಿಂದ ಸೇವೆ ಪಡೆದವರ ಮೇಲೂ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ. ರಾಜ್ಯದ ಎಲ್ಲಾ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅಧಿಕಾರಿಗಳು , ಸಿಬ್ಬಂದಿಗಳ ಮನೆ ಕೆಲಸ ಮತ್ತು ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುತ್ತಿರುವ ಕುರಿತು ನಿರ್ದೇಶನಾಲಯಕ್ಕೆ ಸಾಕಷ್ಟು ದೂರುಗಳು ಬಂದಿವೆ. ಪೌರಕಾರ್ಮಿಕರನ್ನು ಅವರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೆ ಕೆಲಸಗಳಿಗೆ ನಿಯೋಜಿಸುವುದು ನಿಯಮಬಾಹಿರ ವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಒಂದು ವೇಳೆ ಪೌರಕಾರ್ಮಿಕರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೇ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುವುದು ಕಂಡು ಬಂದಲ್ಲಿ ಅಥವಾ ನಿರ್ದೇಶನಾಲಯಕ್ಕೆ ದೂರು ಸ್ವೀಕೃತವಾದಲ್ಲಿ, ಅನ್ಯ ಕಾರ್ಯಗಳಿಗೆ ನಿಯೋಜಿಸಿದ ಸಂಬAಧಿಸಿದ ಅಧಿಕಾರಿ/ಸಿಬ್ಬಂದಿಯನ್ನು ಮತ್ತು ಅವರ ಪೌರಕಾರ್ಮಿಕರಿಂದ ಸೇವೆಯನ್ನು ಪಡೆದವರ ಮೇಲೂ ನಿರ್ದಾಕ್ಷಿಣ್ಯವಾಗಿ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ತಿಳಿಸಿದೆ.