ಶ್ರೀಮಂಗಲ, ಜ. ೨೧: ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೊಡವ ಪೊಮ್ಮಕ್ಕಡ ಕೂಟವನ್ನು ಈಗಾಗಲೇ ಸ್ಥಾಪಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ತಾ. ೩೦ರಂದು ಪೂರ್ವಾಹ್ನ ೧೦:೩೦ ಗಂಟೆಗೆ ಕೊಡವ ಸಮಾಜದಲ್ಲಿ ನಡೆಯಲಿದೆ.
ಸಮಾಜದ ಅಧ್ಯಕ್ಷರಾದ ಕಾಳಿಮಾಡ ಎಂ. ಮೋಟಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪೊಮ್ಮಕ್ಕಡ ಕೂಟವು ಕೊಡವ ಸಮಾಜದ ಅಂಗ ಸಂಸ್ಥೆಯಾಗಿದ್ದು ಸಮಾಜದ ಏಳಿಗೆಗೆ ಸಹಾಯವಾಗಲಿದೆ. ಅಲ್ಲದೆ ಹೆಣ್ಣು ಮಕ್ಕಳ ಸಾಮಾಜಿಕ, ನೈತಿಕ, ಆರ್ಥಿಕ ಸವಲತ್ತುಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಕೊಡವ ಭಾಷೆ ,ಸಾಹಿತ್ಯ, ಸಂಸ್ಕೃತಿಯನ್ನು ಬೆಳೆಸುವುದು ಇದರ ಉದ್ದೇಶವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಸಮಾಜದ ಕಚೇರಿಯನ್ನು ಸಂಪರ್ಕಿಸಬಹುದೆAದು ಪ್ರಕಟಣೆ ತಿಳಿಸಿದೆ.