ಮಡಿಕೇರಿ, ಜ. ೨೧: ಬಹುನಿರೀಕ್ಷಿತ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಮುಂದಿನ ತಿಂಗಳು ಚಾಲನೆ ದೊರೆಯಲಿದೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು.
ನಗರದ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಶತಮಾನೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ತಾ. ೨೯ ರಂದು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿ ಸಂಬAಧ ರಾಜ್ಯ ಪರಿಸರ ಇಲಾಖೆಯಿಂದ ಒಪ್ಪಿಗೆ ದೊರೆಯಲಿದೆ. ರೂ. ೪,೧೩೦ ಕೋಟಿ ವೆಚ್ಚದಲ್ಲಿ ಉದ್ದೇಶಿಸಿರುವ ಯೋಜನೆ ಮುಂದಿನ ತಿಂಗಳು ಆರಂಭಗೊAಡು ೧೫ ತಿಂಗಳ ಕಾಲಾವಧಿಯೊಳಗೆ ಮುಕ್ತಾಯಗೊಳ್ಳಲಿದೆ. ಇದಕ್ಕೆ ಪೂರಕ ಆಡಳಿತಾತ್ಮಕ ಕೆಲಸಗಳು ಬಹುತೇಕ ಮುಗಿದಿವೆ. ಕುಶಾಲನಗರ-ಸಂಪಾಜೆ ರಸ್ತೆ ಉನ್ನತೀಕರಣ, ಸಂಪಾಜೆ-ಮಾಣಿ ಚತುಷ್ಪಥ ಹೆದ್ದಾರಿಗೂ ಸದ್ಯದಲ್ಲಿಯೇ ಮುನ್ನುಡಿ ಇಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.