ಮಡಿಕೇರಿ, ಜ. ೨೨: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾ. ೨೩, ೨೫ ಮತ್ತು ೨೬ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ತಾ.೨೩ ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ನಂತರ ಸಂಜೆ ೩.೩೦ ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ೪ ಗಂಟೆಗೆ ನೂತನವಾಗಿ ನಿರ್ಮಿಸಿ ಉದ್ಘಾಟನೆಗೆ ಸಿದ್ಧವಿರುವ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡದ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ತಾ.೨೫ ರಂದು ಬೆಳಿಗ್ಗೆ ೧೦ ಗಂಟೆಗೆ ವೀರಾಜಪೇಟೆಯ ಅಂಬಟ್ಟಿ ಗ್ರಾಮದ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ ೨.೩೦ ಗಂಟೆಗೆ ಮುಖ್ಯಮಂತ್ರಿಯವರೊAದಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ತಾ.೨೬ ರಂದು ಬೆಳಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.