ಮಡಿಕೇರಿ, ಜ. ೨೨: ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಶ್ರೀ ಶಿವಯೋಗಿ ಸಿದ್ದರಾಮೇ ಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಲಮಪ್ರಭು ಸೇರಿದಂತೆ ಬಸವಾದಿ ಶರಣರು ಸಮಾನತೆಗಾಗಿ ಎಲ್ಲರನ್ನೂ ಒಟ್ಟುಗೂಡಿಸಿ ಸಮಾ ನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಬಸವೇಶ್ವರರ ಸಮಕಾ ಲೀನರಲ್ಲಿ ಶಿವಯೋಗಿ ಸಿದ್ದರಾಮೇ ಶ್ವರ ಹಾಗೂ ಅಂಬಿಗರ ಚೌಡಯ್ಯ ಅವರು ಕಾಯಕ ನಿಷ್ಠೆಯಿಂದ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶ ತತ್ವಗಳನ್ನು ತಿಳಿದುಕೊಂಡು ಬದಲಾವಣೆಯತ್ತ ಹೆಜ್ಜೆ ಇಡಬೇಕು ಎಂದು ಅವರು ಹೇಳಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲ ಕುಮಾರ ಅವರು ಮಾತನಾಡಿ ಶಿವಯೋಗಿ ಸಿದ್ದರಾಮೇ ಶ್ವರ ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು. ೧೨ ನೇ ಶತಮಾನದಲ್ಲೇ ಕಾಯಕದ ಮೂಲಕ ಆಧ್ಯಾತ್ಮ ಕಂಡು ಕೊಂಡವರು. ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ತಿಳಿದು ಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ಭೋವಿ ಸಮಾಜದ ಜಿಲ್ಲಾಧ್ಯಕ್ಷ ರಾದ ಡಿ.ಸುಜೀತ್ ಮಾತನಾಡಿ ಭೋವಿ ಸಮಾಜದವರು ಅಸಂಘ ಟಿತ ಕಾರ್ಮಿಕರಾಗಿ ದುಡಿಯುತ್ತಿ ದ್ದಾರೆ. ಭೋವಿ ಸಮಾಜಕ್ಕೆ ಕಲ್ಲು ಬಂಡೆ ಕೆಲಸಕ್ಕಾಗಿ ೯೪ಎಫ್ ಕಾಯ್ದೆ ಯಡಿ ಶೇ.೨೪ ರಷ್ಟು ಮೀಸಲಾತಿ ಒದಗಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲ. ನಿವೇಶನ ಒದಗಿಸಿಕೊಡಬೇಕು. ಜಾತಿ ಪ್ರಮಾಣ ಪತ್ರವನ್ನು ಸರಿಪಡಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನ ಕಲ್ಪಿಸಬೇಕು ಎಂದು ಕೋರಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರು ೧೨ ನೇ ಶತಮಾನ ದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದಾರೆ ಎಂದರು.
ತಹಶೀಲ್ದಾರ್ ಪ್ರವೀಣ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಇತ ರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.