ಸೋಮವಾರಪೇಟೆ, ಜ. ೨೨: ತಾಲೂಕು ಆಡಳಿತ ಇಲ್ಲಿನ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. ೨೬ರಂದು ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಲು ತೀರ್ಮಾನಿಸಲಾಯಿತು.

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರತಿ ಪೂರ್ವಭಾವಿ ಸಭೆಯಲ್ಲೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಹಶೀಲ್ದಾರ್, ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ತಿಳಿಸಿದರು.

ಧ್ವಜಾರೋಹಣ, ಮೈದಾನ ಸ್ವಚ್ಪತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿ, ಬೆಳಗ್ಗಿನ ಉಪಹಾರ, ಕವಾಯತು, ಕುಡಿಯುವ ನೀರು ಮತ್ತಿತರ ವ್ಯವಸ್ಥೆಯ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆ ನಿರ್ವಹಿಸುವಂತೆ, ಮೈದಾನ ಸ್ವಚ್ಛತೆಗೆ ಸಂಬAಧಿಸಿದAತೆ ಲೋಕೋಪಯೋಗಿ ಇಲಾಖೆಯವರು ಒಂದು ದಿನ ಮೊದಲೇ ಗಮನ ಹರಿಸಬೇಕೆಂದು ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಈರ್ವರು ನಿವೃತ್ತ ಯೋಧರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ರಾಷ್ಟಿçÃಯ ಹಬ್ಬಗಳ ಸಮಿತಿ ಸದಸ್ಯರುಗಳು,ವಿವಿಧ ಇಲಾಖೆ ಅಧಿಕಾರಿಗಳು,ಶಾಲಾ ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು.