ಚೆಯ್ಯಂಡಾಣೆ, ಜ. ೨೨: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿರಾಜಪೇಟೆ ಚೆಯ್ಯಂಡಾಣೆ ಮುಖ್ಯರಸ್ತೆಯ ಕರಡ ಗ್ರಾಮದಲ್ಲಿ ನಡೆದಿದೆ.

ವಿರಾಜಪೇಟೆ ಕಡೆಯಿಂದ ಚೆಯ್ಯಂಡಾಣೆಗೆ ತೆರಳುತ್ತಿದ್ದ ಕಾರು ಕರಡ ಗ್ರಾಮಕ್ಕೆ ತಲುಪಿದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.