ಕುಶಾಲನಗರ : ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಕುಶಾಲನಗರದ ಪಟ್ಟಣ ಹಾಗೂ ಸುತ್ತಮುತ್ತ ವ್ಯಾಪ್ತಿಯಲ್ಲಿ ಸಂಭ್ರಮದ ವಾತಾವರಣ ಕಂಡುಬAದಿತ್ತು.

ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ದೇವಾಲಯಗಳಲ್ಲಿ ಹೋಮ ಹವನ , ವಿಶೇಷ ಪೂಜಾ ಕಾರ್ಯಕ್ರಮಗಳು, ಕಾವೇರಿ ನದಿಗೆ ವಿಶೇಷ ಮಹಾ ಆರತಿ ಕಾರ್ಯಕ್ರಮ, ಕರಸೇವಕರಿಗೆ ಸನ್ಮಾನ ಮುಂತಾದ ಕಾರ್ಯಕ್ರಮಗಳು ಜರಗಿದವು.

ಪಟ್ಟಣದ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಬೆಳಗ್ಗಿನಿಂದಲೇ ಹೋಮ ಮತ್ತಿತರ ಪೂಜಾ ಕಾರ್ಯಕ್ರಮಗಳು ನಡೆದವು.

ಬೆಳಿಗ್ಗೆ ಒಂಬತ್ತು ಗಂಟೆಗೆ ಕುಶಾಲನಗರದ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿಗೆ ವಿವಿಧ ಧರ್ಮಗಳ ಗುರುಗಳ ಉಪಸ್ಥಿತಿಯಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ ಜರುಗಿತು.

ಕುಶಾಲನಗರ ಪಟ್ಟಣದ ದೇವಾಲಯಗಳ ಅಧ್ಯಕ್ಷರುಗಳಿಗೆ ಗೌರವ ಸಲ್ಲಿಕೆ ಕಾರ್ಯಕ್ರಮ ನಡೆಯಿತು. ಗಣ್ಯರು ದಿನದ ಮಹತ್ವದ ಬಗ್ಗೆ ಸಂದೇಶ ನೀಡಿದರು. ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಕುಶಾಲನಗರ ದೇವಾಲಯಗಳ ಒಕ್ಕೂಟ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ, ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪ ಭಾರತ ಮಾತಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾ. ಅಭಿನ್ ಮತ್ತು ನೆರೆಯ ಬೈಲಕುಪ್ಪೆ ಕರ್ಮಫ ಟಿಬೇಟಿಯನ್ ದೇವಾಲಯದ ಗುರುಗಳು ಪಾಲ್ಗೊಂಡು ನದಿಗೆ ಸಾಮೂಹಿಕವಾಗಿ ಮಹಾ ಆರತಿ ಬೆಳಗಿದರು.

ಈ ಸಂದರ್ಭ ಕಾವೇರಿ ಆರತಿ ಬಳಗದ ಪದಾಧಿಕಾರಿಗಳು, ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ವಿವಿಧ ದೇವಾಲಯಗಳ ಆಡಳಿತ ಮಂಡಳಿ ಸದಸ್ಯರು, ಮಾಜಿ ಸೈನಿಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಭಜನಾ ಮಂಡಳಿ ಸದಸ್ಯರು ಇದ್ದರು.

ಕುಶಾಲನಗರ ಆಂಜನೇಯ ದೇವಾಲಯ ಆವರಣದಲ್ಲಿ ಅಯೋಧ್ಯೆಯಿಂದ ಪ್ರಸಾರವಾದ ನೇರ ಕಾರ್ಯಕ್ರಮದ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಮಠ ಶ್ರೀ ಮಹಾಂತ ಸ್ವಾಮೀಜಿ ಅಮ್ಮತ್ತಿ ಕನ್ನಡ ಮಠದ ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ೧೧ ಮಂದಿ ಕರಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಕುಶಾಲನಗರ ಸೋಮವಾರಪೇಟೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಸೋಮವಾರಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಹಬ್ಬದ ಸಂಭ್ರಮ ಕಂಡುಬAತು.

ವಿವಿಧ ಹಿಂದೂಪರ ಸಂಘಟನೆ ಗಳ ಕಾರ್ಯಕರ್ತರು, ಶ್ರೀರಾಮ ಭಕ್ತರು, ದೇವಾಲಯ ಸಮಿತಿ ಪದಾಧಿಕಾರಿಗಳು ವಿಶೇಷ ಪೂಜೆಗಳನ್ನು ನೆರವೇರಿಸುವ ಮೂಲಕ ಶ್ರೀ ರಾಮ ಮಂದಿರ ಲೋಕಾರ್ಪಣೆಯನ್ನು ಸ್ಥಳೀಯವಾಗಿ ಆಚರಿಸಿದರು.

ಪಟ್ಟಣದ ಪ್ರಮುಖ ಜಂಕ್ಷನ್‌ಗಳಲ್ಲಿ ತಳಿರುತೋರಣ, ಕೇಸರಿ ಬಾವುಟ, ಬಂಟಿAಗ್ಸ್, ಬ್ಯಾನರ್‌ಗಳನ್ನು ಅಳವಡಿಸಿ ಶುಭಕೋರಲಾಯಿತು. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಯಾಗುತ್ತಿದ್ದ ಸಂದರ್ಭ ಪಟ್ಟಣ ಸೇರಿದಂತೆ ಸುತ್ತಮುತ್ತಲ ದೇವಾಲಯ ಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಜೈ ಶ್ರೀ ರಾಮ್ ಘೋಷಣೆಗಳನ್ನು ಮೊಳಗಿಸಲಾಯಿತು.

ಪ್ರಮುಖವಾಗಿ ದೇವಾಲಯಗಳಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ನಡೆದವು. ಶ್ರೀರಾಮ ತಾರಕ ಹೋಮ ಸಹಿತ ದಿನದ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಶ್ರೀರಾಮನ ಕುರಿತಾದ ಭಜನೆ, ಸಂಕೀರ್ತನೆಗಳಲ್ಲಿ ಭಕ್ತರು ಭಾಗವಹಿಸಿದ್ದರು.

ಇಲ್ಲಿನ ಕಕ್ಕೆಹೊಳೆ ಜಂಕ್ಷನ್ ಸಂಪೂರ್ಣ ಕೇಸರಿಮಯವಾಗಿತ್ತು. ಸ್ಥಳೀಯ ಶ್ರೀರಾಮ ಭಕ್ತರು ಬೃಹತ್ ಬ್ಯಾನರ್, ಕೇಸರಿ ಬಂಟಿAಗ್ಸ್, ತಳಿರು ತೋರಣ, ಬಾಳೆ ಕಂಬಗಳನ್ನು ಕಟ್ಟಿ ಕಕ್ಕೆಹೊಳೆ ಜಂಕ್ಷನನ್ನು ಸಿಂಗರಿಸಿದ್ದರು. ಬೃಹತ್ ಶ್ರೀರಾಮನ ಮೂರ್ತಿಯನ್ನು ಅಳವಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀಆಂಜನೇಯ ದೇವಾಲಯ ದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ಅರ್ಚಕ ನಂಜುAಡೇಶ್ವರ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಜೆ ಸಾರ್ವಜನಿಕ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ದೇವಾಲಯ ಸಮಿತಿಯ ಸೀತಾರಾಮ್, ನಂದಕುಮಾರ್, ರಾಘವ, ಬನ್ನಳ್ಳಿ ಗೋಪಾಲ್, ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶ್ರೀರಾಮ ಮಂದಿರದಲ್ಲಿ ದಿನದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು, ಶ್ರೀರಾಮ ತಾರಕ ಹೋಮ, ಭಜನೆ ನೆರವೇರಿತು. ದೇವಾಲಯದ ಅರ್ಚಕ ಮೋಹನ್ ಮೂರ್ತಿ ಶಾಸ್ತಿçಗಳ ಪೌರೋಹಿತ್ಯದಲ್ಲಿ ವಿಶೇಷ ಅಲಂಕಾರ, ಸೇವೆಗಳು ನಡೆದವು. ಸೀತಾ ಬಳಗದ ಸದಸ್ಯೆಯರು ಭಜನೆಯಲ್ಲಿ ಭಾಗಿಯಾಗಿದ್ದರು.

ಶ್ರೀರಾಮ ಮಂದಿರದಲ್ಲಿ ಬೆಳಿಗ್ಗೆ ಶ್ರೀರಾಮ ತಾರಕ ಹೋಮ, ಅಭಿಷೇಕಾಧಿ ಸೇವೆಗಳು, ಅಷ್ಟೋತ್ತರ ನಡೆಯಿತು. ನಂತರ ಭಕ್ತಾದಿಗಳಿಂದ ಅಕ್ಷತಾರೋಹಣ, ರಾಜೋಪಚಾರ, ಶ್ರೀ ದೇವರಿಗೆ ಮಹಾಮಂಗಳಾರತಿ ನಂತರ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿದ್ದರು.

ಪೂಜಾ ಕಾರ್ಯದಲ್ಲಿ ಕುರುಹಿನ ಶೆಟ್ಟಿ ಸಮಾಜದ ಕಾರ್ಯದರ್ಶಿ ಬಿ.ಎನ್. ಮಂಜುನಾಥ್, ಯುವಕ ಸಂಘದ ಅಧ್ಯಕ್ಷ ಬಿ.ಜಿ. ರವಿ, ಸಲಹಾ ಸಮಿತಿ ಸದಸ್ಯ ಎನ್.ಎಂ. ರಮೇಶ್, ಸೀತಾ ಬಳಗದ ಅಧ್ಯಕ್ಷೆ ಯಶೋಧಾ ಪ್ರಶಾಂತ್ ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.

ಇಲ್ಲಿನ ಶ್ರೀ ಸೋಮೇಶ್ವರ ಮತ್ತು ಬಸವೇಶ್ವರ ದೇವಾಲಯಗಳಲ್ಲಿ ದಿನದ ಅಂಗವಾಗಿ ವಿಶೇಷ ಪೂಜೆಗಳು ನಡೆದವು. ದೇವಾಲಯ ಸಮಿತಿಯ ಪ್ರಮುಖರಾದ ಬಿ.ಪಿ. ಶಿವಕುಮಾರ್, ಮೃತ್ಯುಂಜಯ, ಶ್ರೀನಿವಾಸ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

ಅಬ್ಬೂರುಕಟ್ಟೆಯಲ್ಲಿ ನೇರಪ್ರಸಾರ -ಅನ್ನದಾನ: ಪಟ್ಟಣ ಸಮೀಪದ ಅಬ್ಬೂರುಕಟ್ಟೆ ಗ್ರಾಮದಲ್ಲಿ ನೇರುಗಳಲೆ ಗ್ರಾ.ಪಂ. ವ್ಯಾಪ್ತಿಗೊಳಪಡುವ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ಬಸ್ ನಿಲ್ದಾಣದ ಮುಂಭಾಗ ಎಲ್‌ಇಡಿ ಪರದೆಯನ್ನು ಅಳವಡಿಸಿ ಸಾರ್ವಜನಿಕರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಪ್ರಾಣ ಪ್ರತಿಷ್ಠಾಪನೆಯ ನೇರ ದೃಶ್ಯಾವಳಿಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ ನೂರಾರು ಮಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಪ್ರಮುಖರಾದ ಪ್ರದೀಪ್, ಅರೆಯೂರು ಜಯಣ್ಣ, ಸಂಭ್ರಮ್, ತಿಮ್ಮಯ್ಯ, ಮಸಗೋಡು ಸುರೇಶ್, ಪಿ.ಡಿ. ಪ್ರಕಾಶ್ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.

ಇಲ್ಲಿನ ಶ್ರೀ ವಿದ್ಯಾ ಗಣಪತಿ ದೇವಾಲಯದಲ್ಲಿ ಅರ್ಚಕ ಚಂದ್ರಶೇಖರ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಭಕ್ತರಿಗೆ ಕೋಸಂಬರಿ, ಪಾನಕ ವಿತರಿಸಲಾಯಿತು. ದೇವಾಲಯ ಸಮಿತಿಯ ಈಶ್ವರಚಂದ್ರ ಸಾಗರ್, ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಿಬ್ಬೆಟ್ಟ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗ್ರಾಮಸ್ಥರು ದಿನದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯ ನಂತರ ಸಾಮೂಹಿಕ ಪ್ರಾರ್ಥನೆ ಹಾಗೂ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ತಾಲೂಕಿನ ಸಿದ್ದಲಿಂಗಪುರ ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥ್ ಸ್ವಾಮಿ ಮತ್ತು ನವನಾಗನಾಥ ಸನ್ನಿಧಿಯಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಅಂಗವಾಗಿ ವಿಶೇಷ ಪೂಜೆ, ಹೋಮ ಹವನಾದಿ ಪೂಜಾ ಕೈಂಕರ್ಯಗಳು ನಡೆದವು. ಪ್ರಧಾನ ಅರ್ಚಕ ಜಗದೀಶ್ ಉಡುಪ ಪೌರೋಹಿತ್ವದಲ್ಲಿ ಪೂಜೆಗಳು ನಡೆದವು. ಮಧ್ಯಾಹ್ನ ನೂರಾರು ಭಕ್ತಾದಿಗಳಿಗೆ ಅನ್ನದಾನ ನೆರವೇರಿತು.

ಹಿಂದೂಪರ ಸಂಘಟನೆಗಳಿAದ ಇಲ್ಲಿನ ಆಲೇಕಟ್ಟೆ ರಸ್ತೆಯಲ್ಲಿರುವ ಶ್ರೀಲಕ್ಷಿö್ಮÃ ವೆಂಕಟೇಶ್ವರ ದೇವಾಲಯ ದಲ್ಲಿ ವಿಶೇಷ ಪೂಜೆ ನಡೆಯಿತು. ಅಯೋಧ್ಯೆ ಕರ ಸೇವೆಯಲ್ಲಿ ಭಾಗಿಯಾಗಿದ್ದ ಸ್ಥಳೀಯರಾದ ಉದಯ್ ಸಿಂಗ್, ಸಿ.ಬಿ. ದೇವರಾಜು, ರಾಜು ಅವರುಗಳನ್ನು ಸನ್ಮಾನಿಸ ಲಾಯಿತು. ಪ್ರಮುಖರಾದ ಎಂ.ಬಿ. ಉಮೇಶ್, ಮನು ರೈ, ಮಹೇಶ್ ತಿಮ್ಮಯ್ಯ, ರವಿಕುಮಾರ್, ಧರ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು..ಪೊನ್ನಂಪೇಟೆ : ದಕ್ಷಿಣ ಕೊಡಗಿನ ಪುರಾಣ ಪ್ರಸಿದ್ಧ ಇರ್ಪು ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಅಯೋದ್ಯ ಶ್ರೀ ಶ್ರೀರಾಮ ಪ್ರತಿಷ್ಠಾಪನೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಏಕಾದಳ ರುದ್ರಾಭಿಷೇಕ ಪೂಜೆ, ಅಖಂಡ ಶ್ರೀ ರಾಮ ಭಜನೆ ಮತ್ತು ಶ್ರೀ ರಾಮ ವಿಶೇಷ ಪೂಜೆ ನಡೆಸಲಾಯಿತು. ಮಹಾ ಪೂಜೆಯ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮದ್ರೀರ ವಿಷ್ಣು, ಉಪ ತಹಶೀಲ್ದಾರ್ ಅಕ್ಕಮ್ಮ, ಕಂದಾಯ ಇಲಾಖೆ ಅಧಿಕಾರಿಗಳು, ದೇವಸ್ಥಾನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.