ಬೆಂಗಳೂರು, ಜ. ೨೪: ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಪೂರಕವಾಗಿರುವ ಜಿಲ್ಲೆಯಲ್ಲಿ ಮಡಿಕೇರಿ ಸಮೀಪದ ಕರ್ಣಂಗೇರಿ ಗ್ರಾಮದ ೩ ಎಕರೆ ಜಾಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು ೧೨.೨೬ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾ.೨೫ ರಂದು (ಇಂದು) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರ ಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ

(ಮೊದಲ ಪುಟದಿಂದ) ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನು ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ. ಸ್ವಚ್ಛ ಆಕಾಶ (ಅಟeಚಿಡಿ Sಞಥಿ), ಹೆಚ್ಚಿನ ವಾಯುಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನು ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್‌ನ ಪಂಗೋAಗ್ ತ್ಸೋ ಸರೋವರ, ಗುಜರಾತ್‌ನ ರನ್ ಅಫ್ ಕಚ್, ಅಂಡಮಾನ್ ಮತ್ತು ನಿಕೋಬಾರ್‌ನ ನೀಲ್ ದ್ವೀಪ ಹಾಗೂ ಮಹಾರಾಷ್ಟçದ ಜಿಲ್ಲೆ ಮಾಥೇರಾನ್‌ನಂತೆಯೇ ಕೊಡಗು ಜಿಲ್ಲೆಯು ಕೂಡ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ. ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಡೋಮ್ ಹೊಂದಿರುವ ತಾರಾಲಯವನ್ನು ಸ್ಥಾಪಿಸಲಾಗುವುದಾಗಿ ಸಚಿವರು ಮಾಹಿತಿ ಇತ್ತಿದ್ದಾರೆ.