ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ ಘೋಷಣೆ
ಕೊಲ್ಕೋತಾ, ಜ. ೨೪: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ನೊAದಿಗಿನ ಸೀಟು ಹಂಚಿಕೆ ಮಾತುಕತೆಯು ವಿಫಲಗೊಂಡಿರುವುದರಿAದ ಮಮತಾ ಬ್ಯಾನರ್ಜಿ ಮಹತ್ವದ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ನಾನು ಅವರಿಗೆ ನೀಡಿದ ಎಲ್ಲ ಪ್ರಸ್ತಾವನೆಗಳನ್ನೂ ಅವರು ತಿರಸ್ಕರಿಸಿದ್ದಾರೆ. ಹೀಗಾಗಿ ನಾವು ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ನ್ಯಾಯ ಯಾತ್ರೆಯ ಯೋಜನೆಯ ಕುರಿತು ಕಾಂಗ್ರೆಸ್ ತನಗೆ ಮಾಹಿತಿಯನ್ನೇ ನೀಡಿಲ್ಲ ಎಂದು ಟಿಎಂಸಿ ವರಿಷ್ಠೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೌಜನ್ಯಕ್ಕಾದರೂ ಅವರು ಪಶ್ಚಿಮ ಬಂಗಾಳದಲ್ಲಿನ ಯಾತ್ರೆ ಕುರಿತು ನನಗೆ ಮಾಹಿತಿ ನೀಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ವಿರುದ್ಧ ಐಕ್ಯತಾ ರಂಗವನ್ನು ರಚಿಸುವ ವಿರೋಧ ಪಕ್ಷಗಳ ಪ್ರಯತ್ನಕ್ಕೆ ಮಮತಾ ಬ್ಯಾನರ್ಜಿ ನಿರ್ಧಾರದಿಂದ ತೀವ್ರ ಧಕ್ಕೆಯಾಗಿದೆ.
ಜ್ಞಾನವಾಪಿ ಮಸೀದಿ ಪ್ರಕರಣ: ವರದಿಯನ್ನು ಎರಡೂ ಕಡೆಯವರಿಗೂ ನೀಡಲು ಆದೇಶ
ವಾರಣಾಸಿ, ಜ. ೨೪: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಮೂರು ತಿಂಗಳ ಸುದೀರ್ಘ ಎಎಸ್ಐ ವರದಿಯನ್ನು ಸಾರ್ವಜನಿಕಗೊಳಿಸಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ. ಸಮೀಕ್ಷಾ ವರದಿಯ ಪ್ರತಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೂ ನೀಡಲಾಗುವುದು ಎಂದು ಹೇಳಿದೆ. ಎಎಸ್ಐ ಡಿಸೆಂಬರ್ ೧೮ರಂದು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿತ್ತು. ಅದೇ ಸಮಯದಲ್ಲಿ ವರದಿಯನ್ನು ನೀಡುವಂತೆ ಹಿಂದೂ ಕಡೆಯವರು ಒತ್ತಾಯಿಸಿದ್ದರು. ಆದರೆ ಮುಸ್ಲಿಂ ಕಡೆಯಿಂದ ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಬಹಿರಂಗಪಡಿಸಲು ಸಾಧ್ಯವಾಗಿರಲಿಲ್ಲ. ವರದಿ ನೀಡಲು ನ್ಯಾಯಾಲಯ ಮೌಖಿಕ ಆದೇಶ ನೀಡಿದೆ ಎಂದು ಹಿಂದೂ ಪರ ವಕೀಲರು ಹೇಳುತ್ತಾರೆ. ಲಿಖಿತ ಆದೇಶವೂ ಶೀಘ್ರದಲ್ಲೇ ಬರಲಿದೆ. ಇದರ ನಂತರ, ವರದಿಯ ಪ್ರತಿಗಾಗಿ ಅರ್ಜಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯಾದ ಬಳಿಕ ಎರಡೂ ಕಡೆಯವರಿಗೂ ವರದಿ ಸಿಗಲಿದೆ ಎಂಬ ನಂಬಿಕೆ ಇದೆ. ವರದಿಗೆ ಸಂಬAಧಿಸಿದAತೆ ಎರಡೂ ಕಡೆಯವರು ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಹಿಂದೂ ಪರ ವಕೀಲ ವಿಷ್ಣು ಜೈನ್ ಪ್ರಕಾರ, ಎರಡೂ ಕಕ್ಷಿದಾರರಿಗೆ ಹಾರ್ಡ್ ಕಾಪಿಗಳನ್ನು ನೀಡಲಾಗುವುದು. ವರದಿಯನ್ನು ಬಹಿರಂಗಗೊಳಿಸುವAತೆ ಹಿಂದೂಗಳ ಕಡೆಯವರು ಒತ್ತಾಯಿಸಿದ್ದರು ಎಂದರು. ಬುಧವಾರದಂದು ಎಎಸ್ಐ ಕೂಡ ಇಲ್ಲಿನ ತ್ವರಿತ ನ್ಯಾಯಾಲಯಕ್ಕೆ ಸಮೀಕ್ಷಾ ವರದಿ ಸಲ್ಲಿಸಿತ್ತು. ೧೯೯೧ರಿಂದ ಇಲ್ಲಿ ಜ್ಞಾನವಾಪಿ ಮೂಲ ವಿವಾದ ನಡೆಯುತ್ತಿದೆ. ಡಿಸೆಂಬರ್ ೧೮ ರಂದು ಸುಮಾರು ಎರಡು ಸಾವಿರ ಪುಟಗಳ ಈ ವರದಿಯನ್ನು ನಾಲ್ಕು ಭಾಗಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ಎಎಸ್ಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದ ವಿರುದ್ಧ ರಾಜ್ಯ ಅಸಮಾಧಾನ
ಕಲಬುರಗಿ, ಜ. ೨೪: ಹಲವು ಬಾರಿ ಮನವಿ ಮಾಡಿದ ಬಳಿಕವೂ ಬರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ರಾಜ್ಯದ ಹಲವು ಜಿಲ್ಲೆಗಳನ್ನು ಬರ ಪೀಡಿತ ಎಂದು ಸೆ.೧೩ ರಂದೇ ಸರ್ಕಾರ ಘೋಷಿಸಿ ಈ ಸಂಬAಧ ಜ್ಞಾಪಕ ಪತ್ರವನ್ನು ಸೆ. ೨೩ ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು. ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಅಧ್ಯಯನ ತಂಡ ಕರ್ನಾಟಕಕ್ಕೆ ಭೇಟಿ ನೀಡಿತ್ತು. ತಮ್ಮನ್ನೂ ಸೇರಿ ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಇತರ ಸಚಿವರ ತಂಡ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಕೇವಲ ಪ್ರಧಾನಿಯನ್ನಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳನ್ನೂ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಎಂದು ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಜ್ಞಾಪಕ ಪತ್ರ ಸಲ್ಲಿಸಿರುವ ರಾಜ್ಯಗಳಿಗೆ ಬರ ಪರಿಹಾರ ಪರಿಹಾರವನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಡಿಸೆಂಬರ್ ೧೩ ರಂದು ಕ್ಯಾಬಿನೆಟ್ ಉಪ ಸಮಿತಿ ಸಭೆ ನಡೆಸಲಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದರು. ಅಂದು ಸಭೆ ನಡೆದಿಲ್ಲ. ಮತ್ತೆ ಜನವರಿ ೧೬ ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದೆ ಎಂದು ಹೇಳಲಾಗಿತ್ತಾದರೂ ಅದು ಕೂಡ ನಡೆದಿಲ್ಲ. ಕೆಲ ದಿನಗಳ ಹಿಂದೆ ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಗ್ಗೆ ನೆನಪಿಸಿದ್ದಾರೆ ಎಂದು ಕೃಷ್ಣ ಬೈರೇಗೌಡ ಹೇಳಿದರು. ಕೂಡಲೇ ಸಭೆ ಕರೆಯುವಂತೆ ಸಂಬAಧಪಟ್ಟವರಿಗೆ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳಿಗೆ ತಿಳಿಸಿದರೂ ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ; ಆರೋಪಿ ನಿತೀಶ್ ಬಂಧನ
ಮAಡ್ಯ, ಜ. ೨೪: ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿವೈಎಸ್ಪಿ ಮುರಳಿ ನೇತೃತ್ವದಲ್ಲಿ ಆರೋಪಿ ನಿತೀಶ್ನನ್ನು ವಿಜಯನಗರ ಹೊಸಪೇಟೆಯಲ್ಲಿ ಬಂಧಿಸಲಾಗಿದೆ. ವಿಚಾರಣೆ ವೇಳೆ ದೀಪಿಕಾಳನ್ನು ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಆರೋಪಿ ನಿತೀಶ್ ಕೊಲೆಗೂ ಮುನ್ನ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು. ಘಟನೆ ನಡೆದ ಎರಡು ದಿನಗಳವರೆಗೂ ಏನು ನಡೆಯದಂತೆ ಸುಮ್ಮನಿದ್ದ ನಿತೀಶ್ ದೀಪಿಕಾಳ ಮೃತದೇಹ ಪತ್ತೆಯಾಗುತ್ತಿದಂತೆ ನಾಪತ್ತೆಯಾಗಿದ್ದನು. ಈ ಸಂಬAಧ ದೀಪಿಕಾ ಪತಿ ಸಹ ನಿತೀಶ್ ಮೇಲೆ ಸಂಶಯ ವ್ಯಕ್ತಪಡಿಸಿದ್ದರಿಂದ ಆತನ ಜಾಡುಹಿಡಿದ ಪೊಲೀಸರು ವಿಜಯನಗರಲ್ಲಿ ತಲೆಮರೆಸಿಕೊಂಡಿರುವದು ತಿಳಿದುಬಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಹೊಸಪೇಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮೇಲುಕೋಟೆ ಠಾಣೆಗೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಹತ್ಯೆ ದಿನ ದೀಪಿಕಾ ಮತ್ತು ನಿತೀಶ್ ನಡುವೆ ಜಗಳ ನಡೆದಿದೆ. ಈ ಜಗಳದ ದೃಶ್ಯವನ್ನು ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಪ್ರವಾಸಿಗರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದರು. ಘಟನೆ ಬಳಿಕ ಪ್ರವಾಸಿಗರು ಪೊಲೀಸರಿಗೆ ವೀಡಿಯೋವನ್ನು ನೀಡಿದ್ದರು.