ಮಡಿಕೇರಿ, ಜ. ೨೨: ಲೋಕಸಭಾ ಚುನಾವಣೆ ಹಿನ್ನೆಲೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿಶೇಷ ಅಭಿಯಾನ ಮೂಲಕ ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ನಮೂನೆ-೬, ನಮೂನೆ-೭ ಮತ್ತು ನಮೂನೆ-೮ ರಲ್ಲಿ ಯುವ ಮತದಾರರ ಸೇರ್ಪಡೆ ಮತ್ತಿತರ ಕಾರ್ಯಗಳನ್ನು ಬಿಎಲ್‌ಒ ಮೂಲಕ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ತಯಾರಿ ಸಲಾಗಿದೆ ಎಂದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಮತದಾರರು ಹೆಸರು ಸೇರ್ಪಡೆ ಮಾಡಬಹುದಾಗಿದೆ. ಸದ್ಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸಂಬAಧಿಸಿದAತೆ ವೋಟರ್ ಆ್ಯಪ್ ಮೂಲಕ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬ ಹುದಾಗಿದೆ ಎಂದು ಹೇಳಿದರು.

ಅಂತಿಮ ಮತದಾರರ ಪಟ್ಟಿ ಯಂತೆ ಜಿಲ್ಲೆಯಲ್ಲಿ ೫೪೬ ಮತಗಟ್ಟೆಗ ಳಿದ್ದು, ಒಟ್ಟು ೪,೬೩,೪೧೪ ಮತದಾರರು ಇದ್ದಾರೆ. ಅದರಲ್ಲಿ ೨,೨೭,೩೩೯ ಪುರುಷ ಮತದಾರರು, ೨,೩೬,೦೫೯ ಮಹಿಳಾ ಮತದಾರರು ಇದ್ದಾರೆ ಹಾಗೂ ೧೬ ಮಂದಿ ಇತರ ಮತದಾರರು ಇದ್ದಾರೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ೨೭೩ ಮತ ಗಟ್ಟೆಗಳಿದ್ದು, ಒಟ್ಟು ೨,೩೫,೧೩೯ ಮತದಾರರು ಇದ್ದಾರೆ. ಇವರಲ್ಲಿ ೧,೧೪,೫೮೦ ಪುರುಷ ಮತದಾರರು, ೧,೨೦,೫೫೦ ಮಹಿಳಾ ಮತದಾರರು ಹಾಗೂ ೯ ಮಂದಿ ಇತರೆ ಮತದಾರರು ಇದ್ದಾರೆ.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ೨೭೩ ಮತಗಟ್ಟೆಗಳಿದ್ದು, ಒಟ್ಟು ೨,೨೮,೨೭೫ ಮಂದಿ ಮತದಾರರು ಇದ್ದಾರೆ. ಇವರಲ್ಲಿ ೧,೧೨,೭೫೯ ಪುರುಷ ಮತದಾರರು, ೧,೧೫,೫೦೯ ಮಹಿಳಾ ಮತದಾರರು ಹಾಗೂ ೭ ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸೋಮವಾರ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯನ್ನು ತಾ.೨೭ ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಗೆ ಹೊಲಿಸಿದ್ದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಂದ ೩೪೯೮ ಮತದಾರರು ನಿವ್ವಳ ಬದಲಾ ವಣೆ ಆಗಿದೆ ಎಂದು ತಿಳಿಸಿದರು.

ಪ್ರಸ್ತುತ ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ನಡೆಯುತ್ತಿದ್ದು, ಈ ಅವಧಿಯಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-೬ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-೭ ರಲ್ಲಿ ಅರ್ಜಿಯನ್ನು ಸಲ್ಲಿಸಬಹುದಾ ಗಿರುತ್ತದೆ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-೮ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-೬ಎ ರಲ್ಲಿ ಅರ್ಜಿಗಳನ್ನು ಸಲ್ಲಿಸಬಹು ದಾಗಿದೆ ಎಂದರು.

ನಮೂನೆ-೬, ೬ಎ, ೭ ಮತ್ತು ೮ರ ಅರ್ಜಿಗಳನ್ನು ಭಾರತ ಚುನಾ ವಣಾ ಆಯೋಗವು ಅಭಿವೃದ್ಧಿ ಪಡಿಸಿ ರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆ್ಯಪ್ ಹಾಗೂ hಣಣಠಿs://voಣeಡಿs.eಛಿi. gov.iಟಿ/ / ಗಿಔಖಿಇಖS’ SಇಖಗಿIಅಇ Pಔಖಖಿಂಐ ಮೂಲಕ ಆನ್‌ಲೈನ್‌ನಲ್ಲಿ ನೇರವಾಗಿ ಸಲ್ಲಿಸಬೇಕಿದೆ ಎಂದು ವೆಂಕಟ್ ರಾಜಾ ತಿಳಿಸಿದರು.

ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿ ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆ್ಯಪ್ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದ್ದು ಎಲ್ಲಾ ಮತದಾರರು / ನಾಗರಿಕರು ತಮ್ಮ ಮೊಬೈಲ್‌ನಲ್ಲಿ ಮತದಾರರ ಸಹಾಯವಾಣಿ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳು ವಂತೆ ಕೋರಿದರು.

ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ವೆಬ್‌ಸೈಟ್‌ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.