ಕುಶಾಲನಗರ, ಜ. ೨೬: ಸಂವಿಧಾನದಲ್ಲಿ ಉಲ್ಲೇಖಿಸಿದ ಅಂಶಗಳನ್ನು ಪಾಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಹಶೀಲ್ದಾರ್ ಹಾಗೂ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ಕಿರಣ್ ಜಿ. ಗೌರಯ್ಯ ಕರೆ ನೀಡಿದ್ದಾರೆ.

ಅವರು ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ವೇದಿಕೆಗಳು ಕೇವಲ ಭಾಷಣಗಳಿಗೆ ಮೀಸಲಾಗಿರಬಾರದು. ಭವ್ಯ ಭಾರತ ರೂಪಿಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಲ್ಲರಿಗೂ ಸಮಾನ ಶಿಕ್ಷಣ, ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಮೂಲಕ ರಾಷ್ಟçದ ಅಭಿವೃದ್ಧಿ ಸಾಧ್ಯ, ಯುವ ಪೀಳಿಗೆ ಸಮಾನತೆ ಸಹಿಷ್ಣುತೆ ರೂಢಿಸಿಕೊಂಡು ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿ ಬಲಿದಾನಗೈದ ಮಹಾ ಚೇತನಗಳ ಬಗ್ಗೆ ಸ್ಮರಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಒಟ್ಟಾಗಿ ಸೇರಿ ಒಗ್ಗಟ್ಟಿನ ಕೊರತೆಯನ್ನು ನೀಗಿಸುವ ಕೆಲಸ ಮತ್ತು ಸ್ವಚ್ಛ ಪರಿಸರ ಉಳಿಸುವುದು ಆ ಮೂಲಕ ಸರ್ವಾಂಗೀಣ ಪ್ರಗತಿಗೆ ತಮ್ಮೆಲ್ಲರ ಪಾತ್ರ ಅಮೂಲ್ಯವಾಗಿದೆ ಎಂದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ, ಇಂತಹ ಕಾರ್ಯಕ್ರಮಗಳ ಮೂಲಕ ಸಂವಿಧಾನ ರೂಪುಗೊಂಡ ದಿನ ನೆನಪಿಸುವ ಅವಕಾಶ ಲಭ್ಯವಾಗುತ್ತದೆ ಎಂದರಲ್ಲದೆ ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.

ಪೊಲೀಸ್ ಎನ್‌ಸಿಸಿ ಸೇರಿದಂತೆ ಶಾಲಾ-ಕಾಲೇಜುಗಳ ಸುಮಾರು ೧೬ ತಂಡಗಳಿAದ ಆಕರ್ಷಕ ಪಥಸಂಚಲನ ನಡೆಯಿತು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಪೆರೇಡ್ ಕಮಾಂಡರ್ ಆಗಿ ಕಾರ್ಯನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ಕುಶಾಲನಗರ ಎಪಿಸಿಎಂಎಸ್ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಉಪಾಧ್ಯಕ್ಷ ಎಚ್.ಜೆ. ದೊಡ್ಡಯ್ಯ, ಪುರಸಭೆ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು, ಶಾಲಾ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪ್ರಮುಖರು ಇದ್ದರು. ಕಾರ್ಯಕ್ರಮದಲ್ಲಿ ಪತ್ರಕರ್ತೆ ವನಿತಾ ಚಂದ್ರಮೋಹನ್, ಸಮಾಜ ಸೇವಕಿ ಸಲೀನಾ ಡಿಕುನ್ನ, ಪೌರಕಾರ್ಮಿಕ ರಘು, ಕಲಾವಿದ ಭರಮಣ್ಣ ಬೆಟಗೇರಿ, ಸಮಾಜ ಸೇವಕ ಕೆ.ಬಿ. ರಾಜು ಅವರುಗಳನ್ನು ಗೌರವಿಸಿ, ಸನ್ಮಾನಿಸಲಾಯಿತು.

ಶಾಲಾ ಕಾಲೇಜು ಸಂಘ ಸಂಸ್ಥೆಗಳ ಪ್ರಮುಖರು ರಾಷ್ಟçಗೀತೆ, ನಾಡಗೀತೆ, ರೈತ ಗೀತೆ ಹಾಡಿದರು. ಮಹೇಶ್ ಅಮೀನ್ ವಂದೇ ಮಾತರಂ ಗೀತೆ ಹಾಡಿದರು. ಶಾಲಾ ಕಾಲೇಜು ತಂಡಗಳಿAದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.