ಮಡಿಕೇರಿ, ಜ. ೨೬: ಬಸವ ಪಥಕ್ಕೆ ಅಗ್ರಸ್ಥಾನ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಬಸವೇಶ್ವರರು ಕನ್ನಡ ನಾಡಿನ ಸಂಸ್ಕೃತಿ ಪ್ರತಿಪಾದಿಸಿದ ಮೌಲ್ಯಗಳ ರೂಪಕವಾಗಿ ನೋಡುವುದರಿಂದ ನಾಡಿಗೆ ಹೆಚ್ಚಿನ ಅನುಕೂಲವಾಗಿದೆ. ಅನ್ನಭಾಗ್ಯ ಸೇರಿದಂತೆ ಐದು ಗ್ಯಾರಂಟಿಗಳ ಮೂಲಕ ಸರ್ವೋದಯ ಪರಿಕಲ್ಪನೆಯನ್ನು ಕಾರ್ಯರೂಪಕ್ಕೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬಸವಣ್ಣನವರ ದಾಸೋಹದ ಪರಿಕಲ್ಪನೆಗೆ ಪೂರಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.

ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ೭೫ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದರು.

ಸ್ವಾತಂತ್ರö್ಯ ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಮಂಡಳಿಯ ದೀರ್ಘ ಅಧ್ಯಯನ ಚಿಂತನ ಮಂಥನಗಳ ಫಲವಾಗಿ ನಮ್ಮ ಸಂವಿಧಾನ ರೂಪುಗೊಂಡಿತು. ಭಾರತದಂತಹ ಬಹುಭಾಷೆ, ಬಹುಧರ್ಮ ಹಾಗೂ ವಿಭಿನ್ನ ಸಂಸ್ಕೃತಿಯ ದೇಶಕ್ಕೆ ಸರ್ವರಿಗೂ ಸಮ್ಮತವಾಗುವ ಸಂವಿಧಾನ ರಚಿಸುವುದು ಸುಲಭದ ಕೆಲಸವಾಗಿ ರಲಿಲ್ಲ. ಬ್ರಿಟಿಷರ ವಶವಾಗಿದ್ದ ಭಾರತದ ಅಂದಿನ ರಾಜಕೀಯ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ತೀರ ಗೊಂದಲಮಯವಾಗಿತ್ತು, ಈ ಎಲ್ಲಾ ಸಮಸ್ಯೆಗಳ ನಿವಾರಣೆ ಒಂದು ದೊಡ್ಡ ಸವಾಲಾಗಿತ್ತು. ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಸೂಕ್ತ ರಾಜಕೀಯ ವ್ಯವಸ್ಥೆಯನ್ನು ನಾವು ರೂಪಿಸಬೇಕಿತ್ತು ಎಂದು ಸ್ಮರಿಸಿದರು.

ಭಾರತವನ್ನು ಒಂದು ಜಾತ್ಯತೀತ, ಸಾರ್ವಭೌಮ ಗಣರಾಜ್ಯವನ್ನಾಗಿ ರೂಪಿಸಿ ಆ ಮೂಲಕ ಭಾರತ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಲು ಸಾಧ್ಯವಾಯಿತು. ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತÄ ನ್ಯಾಯ ಕ್ಷೇತ್ರಗಳಲ್ಲಿ ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಹಕ್ಕುಗಳು ಇರುವ ಲೋಕ ಸಮ್ಮತವಾದ ಸಂವಿಧಾನವಾಗಿದೆ.. ಪ್ರಜಾಪ್ರಭುತ್ವದ ತಳಹದಿಯಾದ ಸಂವಿಧಾನವನ್ನು ಹಾಗೂ ಮಾನವ ಹಕ್ಕುಗಳನ್ನು ನೀಡಿದ ಈ ಸುದಿನದ ನೆನಪು ಅವಿಸ್ಮರಣೀಯ. ರಾಷ್ಟçದ ಪ್ರಥಮ ಮಹಾ ದಂಡ ನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರು

(ಮೊದಲ ಪುಟದಿಂದ) ರಾಷ್ಟçದ ಸೇನಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವುದು ಸ್ಮರಣೀಯವಾಗಿದೆ ಎಂದರು.

ಕಳೆದ ೭೫ ವರ್ಷಗಳಲ್ಲಿ ದೇಶಕ್ಕೆ ಎದುರಾದ ಸಮಸ್ಯೆ, ಸವಾಲುಗಳನ್ನು ಒಮ್ಮನಸ್ಸಿನಿಂದ ಎದುರಿಸಿ ಗಣತಂತ್ರವನ್ನು ಸಂರಕ್ಷಿಸಿದ್ದೇವೆ, ‘ವ್ಯಕ್ತಿಯ ಹಿತಕ್ಕಿಂತ ಸಮಾಜದ ಹಿತವೇ ಮುಖ್ಯ’ ಎಂಬ ನಮ್ಮ ಪೂರ್ವಿಕರ ಜೀವನ ತತ್ವವನ್ನು ನಾವಿಂದು ಅರ್ಥಮಾಡಿಕೊಂಡು ಅನುಸರಿಸಬೇಕಿದೆ. ಪರಸ್ಪರ ಸಹಕಾರ ಭಯಮುಕ್ತ ವಾತಾವರಣದಲ್ಲಿ ನಾವು ಬದುಕಬೇಕಾಗಿದೆ. ನಮ್ಮ ದೇಶದ ರೈತಾಪಿವರ್ಗ, ಸೈನಿಕರು ಹಾಗೂ ಶ್ರಮಿಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ. ಆ ಮೂಲಕ ಒಂದು ಶ್ರೀಮಂತ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ನಾವೆಲ್ಲರೂ ದೀಕ್ಷೆ ತೊಡಬೇಕಾದ ದಿನ ಇಂದು ಎಂದು ತಿಳಿಸಿದರು.

೧೨ ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಿಸಿರುವುದು ವಿಶೇಷವಾಗಿದೆ. ಬಸವಣ್ಣನವರ ಕತೃತ್ವ ಶಕ್ತಿಯಿಂದ ರೂಪುಗೊಂಡ ವಚನಕಾರರ ಅನುಭವ ಮಂಟಪ ಇಂದಿನ ಪ್ರಜಾಪ್ರಭುತ್ವದ ಅಡಿಗಲ್ಲೇ ಆಗಿದೆ. ನಾಡಿನ ಸಾಂಸ್ಕೃತಿಕ, ಸಾಹಿತ್ಯಕ, ಪರಂಪರೆ ವಿಶ್ವಕ್ಕೆ ಕೊಡುಗೆ ನೀಡಿರುವ ವಿಶ್ವ ಮಾನವ ಪರಂಪರೆಯ ಬಹುಮುಖ್ಯವಾದ ಕೊಂಡಿಯಾಗಿ ದ್ದಾರೆ ಎಂದು ಬಣ್ಣಿಸಿದರು.

ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಮೇಲ್ದರ್ಜೆ ಗೇರಿಸಿರುವುದು ವಿಶೇಷವಾಗಿದೆ. ಹಾಗೆಯೇ ರಾಷ್ಟç ಮಟ್ಟದ ಹಾಕಿ ಕ್ರೀಡಾಕೂಟವು ಕೊಡಗು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿರುವುದು ದಾಖಲೆ. ಕೊಡಗಿನ ಕ್ಯಾಪ್ಟನ್ ಶರಣ್ಯ ರಾವ್ ಅವರು ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭೂಸೇನೆಯ ಅಗ್ನಿವೀರರ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸೇನೆಯ ಮೂರು ವಿಭಾಗಗಳು ಒಟ್ಟಿಗೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ. ಅಲ್ಲದೆ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಅವರ ಸಾಧನೆಯನ್ನು ಶ್ಲಾಘಿಸಿದರು.

ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯು ಜೂನ್, ೧೧ ರಂದು ಪ್ರಥಮ ಯೋಜನೆಯಾಗಿ ಜಾರಿಗೊಂಡಿದೆ. ಜಿಲ್ಲೆಯಲ್ಲಿ ಜನವರಿ, ೨೦ ರವರೆಗೆ ೩೩,೨೧,೪೦೬ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಸುಮಾರು ೧೨.೮೩ ಕೋಟಿ ರೂ. ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ೧,೫೦,೩೪೮ ಕುಟುಂಬಗಳು ಹೆಸರು ನೋಂದಾಯಿಸಿದ್ದಾರೆ.

ಈ ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ೪೮ ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಎಲ್‌ಟಿ ೨ ಗ್ರಾಹಕರಿಗೆ ಹೆಚ್ಚುವರಿ ಶೇ.೧೦ ಬದಲು ಹೆಚ್ಚುವರಿ ೧೦ ಯೂನಿಟ್ ಅರ್ಹತಾ ಯೂನಿಟ್‌ಗಳಾಗಿ ಒದಗಿಸಲು ನಿರ್ಧರಿಸಿರುವುದು ಗಮನಾರ್ಹ ಎಂದು ಬೋಸರಾಜು ಹೇಳಿದರು.

ಯುವನಿಧಿ ಯೋಜನೆಯಡಿ ಡಿಸೆಂಬರ್ ೨೬ ರಿಂದ ನೋಂದಣಿ ಪ್ರಕ್ರಿಯೆ ಚಾಲನೆಗೊಂಡಿದ್ದು, ಪ್ರತೀ ತಿಂಗಳು ೩,೦೦೦ ಮತ್ತು ೧೫೦೦ ರೂ. ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ ಆಗಿದೆ. ಜನವರಿ ೧೨ ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದೆ. ಯುವನಿಧಿ ಯೋಜನೆಗೆ ಅರ್ಹತೆ ಹೊಂದಿರುವವರು ೧೪೩೨ ಅಭ್ಯರ್ಥಿಗಳು ಇದ್ದು, ಜನವರಿ ೧೯ ರ ಅವಧಿಗೆ ಜಿಲ್ಲೆಯಲ್ಲಿ ೭೭೮ ಅಭ್ಯರ್ಥಿಗಳು ಯುವನಿಧಿ ಹೆಸರು ನೋಂದಾಯಿಸಿದ್ದಾರೆ. ರಾಜ್ಯ ಸರ್ಕಾರವು ಭಾರತ ಸಂವಿಧಾನದ ಶ್ರೇಷ್ಟತೆ ಮತ್ತು ಗಣತೆಯನ್ನು ರಾಷ್ಟಿçÃಯ ಮತ್ತು ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಪ್ರಚಾರ ಪಡಿಸುವ ಸಲುವಾಗಿ ``ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮ ರೂಪಿಸಿದೆ. ಜಿಲ್ಲೆಯಾದ್ಯಂತ ಫೆಬ್ರವರಿ ೨೩ ರ ವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಉಪವಿಭಾಗಧಿಕಾರಿ ವಿನಾಯಕ ನರ್ವಾಡೆ, ಎನ್.ಸಿ.ಸಿ. ಕಮಾಂಡಿAಗ್ ಅಧಿಕಾರಿ ಕರ್ನಲ್ ಜಫ್ರಿನ್ ಅರನ್ಹಾ ಹಾಜರಿದ್ದರು.

ಕೊಡಗು ವಿದ್ಯಾಲಯ ವಿದ್ಯಾರ್ಥಿಗಳಿಂದ ನಾಡಗೀತೆ, ರೈತಗೀತೆ ಹಾಡಿದರು.