ವೀರಾಜಪೇಟೆ, ಜ. ೨೭: ವೀರಾಜಪೇಟೆ ಪಟ್ಟಣದಲ್ಲಿರುವ ೮೦ ವರ್ಷಗಳಷ್ಟು ಹಳೆಯದಾದ ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘಕ್ಕೆ ಇತ್ತೀಚಿಗೆ ಚುನಾವಣೆ ಪ್ರಕ್ರಿಯೆ ನಡೆದು ಒಟ್ಟು ೧೫ ಸದಸ್ಯರು ಅವಿರೋಧವಾಗಿ ಆಯ್ಕೆಗೊಂಡಿದ್ದರು.
ನೂತನ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು ಸಂಘದ ಅಧ್ಯಕ್ಷರಾಗಿ ಬೇಟೋಳಿ ರಾಮನಗರದವರಾದ ಬಿ.ಜಿ. ನಟರಾಜ್ ಬೋರ್ಕರ್ ಹಾಗೂ ಉಪಾಧ್ಯಕ್ಷರಾಗಿ ಬೇಟೋಳಿ ಗ್ರಾಮದವರೇ ಆದ ಬಿ.ಪಿ. ಸ್ವಾತಿ ಪ್ರಕಾಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಆಶಾ ನಡೆಸಿಕೊಟ್ಟರು.
ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸಂಘದ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಸದಸ್ಯರಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎಂದು ಹೇಳಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಬಿ.ಆರ್. ಉದಯ ಶಂಕರ್ ಸೇರಿಂತೆ ಸದಸ್ಯರುಗಳು ಹಾಜರಿದ್ದರು.