ನಾಪೋಕ್ಲು, ಜ. ೨೭: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ನೆಲಜಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ನೆಲಜಿ ಗ್ರಾಮದ ಮುಂಡAಡ ಪ್ರಭು ಪೆಮ್ಮಯ್ಯ ಅವರ ಪತ್ನಿ ಡೀನ (ತೀರ್ಥ-೨೭) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಪತಿ ಪ್ರಭು ಪೆಮ್ಮಯ್ಯ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಇವರಿಗೆ ೮ ವರ್ಷದ ಹೆಣ್ಣು ಮಗಳಿದ್ದು ಕಳೆದ ಕೆಲವು ದಿನಗಳಿಂದ ಡೀನ ಹೊದ್ದೂರಿನಲ್ಲಿ ಪೋಷಕರೊಂದಿಗೆ ವಾಸವಾಗಿದ್ದರು. ಶನಿವಾರ ಬೆಳಿಗ್ಗೆ ತಮ್ಮ ಕಾರಲ್ಲಿ ನೆಲಜಿ ಗ್ರಾಮದಲ್ಲಿರುವ ಮನೆಗೆ ತೆರಳಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಕ್ರೆöÊಂ ಪಿಎಸ್‌ಐ ಬಿ. ಶ್ರೀಧರ್, ಮಹಿಳಾ ಸಿಬ್ಬಂದಿ ಪೂರ್ಣಿಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.