ಸಿದ್ದಾಪುರ, ಜ. ೨೭: ಕಳೆದೆರಡು ದಿನಗಳ ಹಿಂದೆ ಬಾಡಗಬಾಣಂಗಾಲ ಗ್ರಾಮದ ಮಠ ಎಂಬಲ್ಲಿ ಹುಲಿಯೊಂದು ಗಬ್ಬದ ಹಸುವಿನ ಮೇಲೆ ದಾಳಿ ನಡೆಸಿ ಸಾಯಿಸಿದ ಘಟನೆ ಸಂಬAಧಿಸಿದAತೆ ಹುಲಿಯ ಚಲನವಲನವನ್ನು ಕಂಡುಹಿಡಿಯಲು ಅರಣ್ಯ ಇಲಾಖೆ ವತಿಯಿಂದ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ ಹುಲಿಯನ್ನು ಪತ್ತೆಹಚ್ಚಲು ಕೂಂಬಿAಗ್ ನಡೆಸಲಾಗುತ್ತಿದೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಕೂಡ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಪ್ರದೇಶಗಳ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿರುವ ಹಾಗೂ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ, ಉಪಟಳ ನೀಡುವ ಕಾಡಾನೆಗಳ ಚಲನವಲನವನ್ನು ಕಂಡುಹಿಡಿಯಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ವೀರಾಜಪೇಟೆ ತಾಲೂಕು ಡಿಸಿಎಫ್ ಶರಣಬಸಪ್ಪ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೊಸೂರು ಬೆಟ್ಟಗೇರಿಯಲ್ಲಿ ಕಾಡಾನೆ ದಾಳಿ ನಡೆಸಿ ಮಹಿಳೆಯನ್ನು ಸಾಯಿಸಿದ ಘಟನೆ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಫಿ ಕುಯ್ಲು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಬಳಿಕ ಹಾಸನ ಜಿಲ್ಲೆಗೆ ತೆರಳಿದ ಸಾಕಾನೆಗಳು ಬಂದ ನಂತರ ಪುಂಡಾನೆಗಳ ಸೆರೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿಸಿಎಫ್ ‘ಶಕ್ತಿ’ಗೆ ತಿಳಿಸಿದ್ದಾರೆ.