ಕುಶಾಲನಗರ, ಜ. ೨೮: ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ವಿವಿಧೋದ್ದೇಶ ಸಹಕಾರ ಸಂಘದ ಮುಂದಿನ ಸಾಲಿನ ಅವಧಿಯ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಟಿ.ಆರ್.ಶರವಣಕುಮಾರ್ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಜೋಸೆಫ್ ವಿಕ್ಟರ್ ಸೋನ್ಸ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ನೇತೃತ್ವದ ೧೫ ಮಂದಿಯ ತಂಡ ಗೆಲವು ಸಾಧಿಸಿತ್ತು.

ಗುರುವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭ ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು ಇದ್ದರು.