ಹನುಮ ಧ್ವಜ ತೆರವು ವಿವಾದ: ಮಂಡ್ಯದಲ್ಲಿ ಘರ್ಷಣೆ - ಲಘು ಲಾಠಿಚಾರ್ಜ್

ಮಂಡ್ಯ, ಜ. ೨೯: ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಭಾನುವಾರ ಕೆರಗೋಡಿನಲ್ಲಿ ೧೦೮ ಅಡಿ ಎತ್ತರದ ಧ್ವಜಸ್ತಂಭದಿAದ ‘ಹನುಮ ದ್ವಜ’ವನ್ನು ಅಧಿಕಾರಿಗಳು ತೆಗೆದ ಬಳಿಕ ಗಲಾಟೆ ಆರಂಭವಾಗಿದ್ದು, ಸೋಮವಾರ ಕೂಡ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಗ್ರಾಮದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹನುಮ ಧ್ವಜ ಪುನಃಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆದಿದೆ. ಈ ಘಟನೆಯು ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷವಾದ ಬಿಜೆಪಿ-ಜೆಡಿಎಸ್ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿಯಿಂದ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ವಿಷಯದ ಬಗ್ಗೆ ಜನರನ್ನು ಪ್ರಚೋದಿಸಲು ಕುಮ್ಮಕ್ಕು ನೀಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ‘ಹನುಮ ಧ್ವಜ'ದ ಬದಲಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದನ್ನು ಪ್ರತಿಭಟಿಸಿ ಇಂದು ಕೆರಗೋಡಿನಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಘೋಷಣೆಗಳ ಮಧ್ಯೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಪ್ರೀತಂ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೆರವಣಿಗೆಯು ಮಂಡ್ಯ ನಗರಕ್ಕೆ ತಲುಪುತ್ತಿದ್ದಂತೆ, ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ಚಿತ್ರವಿರುವ ಫ್ಲೆಕ್ಸ್ನ್ನು ಗುರಿಯಾಗಿಸಲು ಪ್ರಯತ್ನಿಸಿದರು ಎಂದು ಆರೋಪಿಸಿ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

'ನಿತೀಶ್ ಕುಮಾರ್ ತಪ್ಪು ಮಾಡಿದ್ದಾರೆ - ಕೇಜ್ರಿವಾಲ್

ನವದೆಹಲಿ, ಜ. ೨೯: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದಿಂದ ನಿರ್ಗಮಿಸುವ ಮೂಲಕ ತಪ್ಪು ಮಾಡಿದ್ದಾರೆ. ಅವರ ಈ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಮತ್ತೆ ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ‘ಇದು ತಪ್ಪು ಎಂದು ನುಡಿದರು. ಕೇಜ್ರಿವಾಲ್ ನೇತೃತ್ವದ ಎಎಪಿ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ ಮತ್ತು ಐದು ರಾಜ್ಯಗಳಾದ ದೆಹಲಿ, ಪಂಜಾಬ್, ಗುಜರಾತ್, ಗೋವಾ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್‌ನೊAದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದೆ.

ಬೌದ್ಧ ಧರ್ಮ ಅಳವಡಿಸಿಕೊಳ್ಳುವಂತೆ ಮಕ್ಕಳಿಗೆ ಬೋಧಿಸಿದ ಮುಖ್ಯ ಶಿಕ್ಷಕನ ಬಂಧನ

ಬಿಲಾಸ್ಪುರ್, ಜ. ೨೯: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಛತ್ತೀಸ್‌ಗಢ ಪೊಲೀಸರು ಬಿಲಾಸ್‌ಪುರದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನÀನ್ನು ಬಂಧಿಸಿದ್ದಾರೆ. ರಾಮಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದ ದಿನದಂದು, ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಬೌದ್ಧ ಧರ್ಮವನ್ನು ಅಳವಡಿಸಿಕೊಳ್ಳುವುದಾಗಿ ಹೆಡ್ ಮಾಸ್ಟರ್ ಜನರಿಗೆ ಪ್ರಮಾಣ ವಚನ ಬೋಧಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ೬೦ ವರ್ಷದ ಮುಖ್ಯೋಪಾಧ್ಯಾಯ ರತನ್‌ಲಾಲ್ ಸರೋವರ್ ನಾನು ಹಿಂದೂ ದೇವರುಗಳನ್ನು ನಂಬುವುದಿಲ್ಲ. ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಎಂದು ಪ್ರಮಾಣ ವಚನ ಬೋಧಿಸಿದ ನಂತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧಿಸಲಾಗಿದೆ. ಹಿಂದೂ ಸಂಘಟನೆಯೊAದರ ಪದಾಧಿಕಾರಿ ರೂಪೇಶ್ ಶುಕ್ಲಾ ಎಂಬವರು ಹೆಡ್ ಮಾಸ್ಟರ್ ರತನ್‌ಲಾಲ್ ಸರೋವರ್ ವಿರುದ್ಧ ದೂರು ದಾಖಲಿಸಿದ್ದರು.