ಮಡಿಕೇರಿ, ಜ. ೨೮: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ವತಿಯಿಂದ ಫೆಬ್ರವರಿ ೧ ರಂದು ಬೆಂಗಳೂರಿನಲ್ಲಿ ಬಜೆಟ್ ಪೂರ್ವ ಜನಾಗ್ರಹ ಬೃಹತ್ ಪ್ರತಿಭಟನೆ ಮತ್ತು ಬಹಿರಂಗ ಅಧಿವೇಶನ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂದು ಬೆಳಿಗ್ಗೆ ೧೦.೩೦ ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದಲೂ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ರಾಜ್ಯ ಸದಸ್ಯ ಕೆ.ವಿ. ಸುನಿಲ್ ಮಾತನಾಡಿ, ಜಿಲ್ಲೆಯಲ್ಲಿ ಸಾವಿರಾರು ನಿವೇಶನ ರಹಿತರಿದ್ದು, ಇಂದಿಗೂ ಲೈನ್‌ಮನೆಯಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ವಸತಿ ಕಲ್ಪಿಸುವಂತೆ ಆಗ್ರಹಿಸಿದರು.

ಗೋಷ್ಠಿಯಲ್ಲಿ ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಪಿ.ಟಿ. ಸುಂದರ, ಸದಸ್ಯೆ ಶಭಾನ, ದಲಿತ್ ರೈಟ್ ಮೂವ್ಮೆಂಟ್ ರಾಜ್ಯ ಸಂಚಾಲಕ ರಮೇಶ್ ಹಾಜರಿದ್ದರು.