ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ವತಿಯಿಂದ ಮಸಗೋಡು ಚನ್ನಮ್ಮ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಎಸ್.ಆರ್. ವಸಂತ್ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗ ಳನ್ನು ಎತ್ತಿಹಿಡಿಯುವ ಪ್ರಮಾಣವನ್ನು ನಾವೆಲ್ಲರೂ ಮಾಡಬೇಕಿದೆ. ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹಾನ್ ಚೇತನಗಳನ್ನು ಸ್ಮರಿಸಬೇಕಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ದೇಶಭಕ್ತಿಗೀತೆ ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದ ಟಿ.ಎಸ್.ಅಫ್ರಾ, ಆಯುಷಾ ಎಸ್.ಎಸ್, ಬಿ.ಪಿ. ಸ್ಪಂದನ, ಟಿ.ಜೆ. ಸಿಮ್ರಾ, ಡಿ.ಎಸ್. ಸಾನಿಕ, ಟಿ.ವೈ. ಲಾವಣ್ಯ ಅವರುಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್, ಜೇಸಿಐ ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಸುದೀಪ್, ಸಹ ಶಿಕ್ಷಕರಾದ ಚಲುವರಾಜು, ಕಾಂಚನ ಇದ್ದರು.

ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಬ್ಲೂ ಸ್ಟಾರ್ ಹಾಕಿ ಕ್ಲಬ್ ಸೋಮವಾರಪೇಟೆ ಪ್ರಾಯೋಜಕತ್ವದಲ್ಲಿ ನೇರುಗಳಲೆ ಶಾಲಾ ಮಕ್ಕಳಿಗೆ ಗಣರಾಜ್ಯೋತ್ಸವ ಅಂಗವಾಗಿ ಹಾಕಿ ಸ್ಟಿಕ್ ಹಾಗೂ ಬಾಲ್ ವಿತರಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿನೋದ್ ಕುಮಾರ್, ರೋಟರಿ ಅಧ್ಯಕ್ಷ ನಂಗಾರು ವಸಂತ, ಕಾರ್ಯದರ್ಶಿ ಚೇತನ್ ಚಂದ್ರಾಜ್, ಪದಾಧಿಕಾರಿಗಳಾದ ಎಸ್.ಬಿ. ಯಶ್ವಂತ್, ರಮೇಶ್, ಮಂಜು ನೀಲಕಂಠ, ಎಸ್.ಎಂ. ಡಿಸಿಲ್ವ, ನೇರುಗಳಲೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿಲೀಪ್ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಇಲ್ಲಿನ ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದ ರಜತ ಮಹೋತ್ಸವ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಡ್ಯಾನ್ಸ್ಮೇಳ ಕಾರ್ಯಕ್ರಮವನ್ನು ಶಾಸಕ ಮಂಥರ್ ಗೌಡ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಆಟೋ ಚಾಲಕರು ಮತ್ತು ಮಾಲೀಕರು ಅರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಕೂಡ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಜನಸ್ನೇಹಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ ವಿಚಾರ. ೨೫ ವರ್ಷಗಳಿಂದ ಸಂಘವನ್ನು ಹುಟ್ಟುಹಾಕಿ ಜನಮೆಚ್ಚುವ ರೀತಿಯಲ್ಲಿ ನಡೆಸಿಕೊಂಡು ಬಂದಿರುವುದು ಅಭಿನಂದಾರ್ಹ ಎಂದು ಶಾಸಕರು ನುಡಿದರು.

ಸುಂಟಿಕೊಪ್ಪ ಜನತೆಯ ಪರವಾಗಿ ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್ ನೀಡಿದ ಮನವಿ ಪತ್ರಕ್ಕೆ ಉತ್ತರಿಸಿದ ಶಾಸಕರು ಕುಶಾಲನಗರದ ಬಸವನಹಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಪ್ರಾರಂಭಕ್ಕೆ ಭೂಮಿ ಪೂಜೆ ನೇರವೇರಿದ್ದು, ಡಿಪೋ ಆರಂಭದ ಬಳಿಕ ಕನಿಷ್ಟ ೧೦೦ ಮಾರ್ಗಗಳು ಹೆಚ್ಚಾಗುತ್ತವೆ. ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ಹೇಳಿದರು. ಸದ್ಯದ ಪರಿಸ್ಥಿತಿಗೆ ಮುಖ್ಯವಾಗಿ ಶಾಲಾ ಮಕ್ಕಳಿಗೆ ಪರೀಕ್ಷೆಗಳಿಗೆ ಹಾಜರಾಗುವ ನಿಟ್ಟಿನಲ್ಲಿ ವಿಶೇಷ ಬಸ್ ವ್ಯವಸ್ಥೆಗೆ ಡಿಪೋ ವ್ಯವಸ್ಥಾಪಕರಿಗೆ ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ ಎಂದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯನ್ನು ಜನಸಂಖ್ಯೆ ಆಧಾರದ ಮೇರೆ ಕಾನೂನಿನ ಚೌಕಟ್ಟಿನಲ್ಲಿ ಪುರಸಭೆ ಮಾಡುವ ಬಗ್ಗೆ ಸರಕಾರದೊಂದಿಗೆ ವ್ಯಹರಿಸಲಾಗುವುದು ಎಂದರು. ಸುಂಟಿಕೊಪ್ಪ ಆಸ್ಪತ್ರೆಯನ್ನು ಮೇಲ್ದದರ್ಜೆಗೇರಿಸುವ ಬದಲು ಒಳ್ಳೆಯ ವೈದ್ಯರನ್ನು ನೇಮಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಸುಂಟಿಕೊಪ್ಪ ಪಟ್ಟಣವು ಕುಡಿಯುವ ನೀರಿನ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿದ್ದು, ಜಲಜೀವನ್ ಯೋಜನೆಯಡಿಯಲ್ಲಿ ಪರಿಹಾರ ಕಂಡು ಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅದೇ ರೀತಿ ಕಸ ವಿಲೇವಾರಿಗೆ ಟ್ರಾಕ್ಟರ್ ಬೇಡಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ಸದ್ಯಕ್ಕೆ ೨ ಬೋಲೆರೋ ಪಿಕಪ್ ವಾಹನಗಳನ್ನು ಪೂರೈಸುವ ಬಗ್ಗೆ ಪರಿಶೀಲಿಸಲಾಗುವುದೆಂದು ಭರವಸೆ ನೀಡಿದರು.

ಮುಖ್ಯ ಅತಿಥಿ ವಿ.ಪಿ. ಶಶಿಧರ್ ಮಾತನಾಡಿ, ರಿಕ್ಷಾ ಚಾಲಕರ ಮಾಲೀಕರ ಸಂಘವು ಸಂವಿಧಾನದ ಆಶಯಗಳಿಗೆ ಪೂರಕವಾಗಿ ಪಕ್ಷಾತೀತವಾಗಿ ಜಾತ್ಯಾತೀತ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಅಭಿನಂದನಾರ್ಹ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿನ್ನೆಲೆಯಲ್ಲಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎಲ್ಲರನ್ನು ಒಳಗೊಂಡ ಸಂಘ ಅತ್ಯುತ್ತಮವಾಗಿ ಜನರಿಗೆ ಸ್ಪಂದಿಸಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು. ಮತ್ತೋರ್ವ ಅತಿಥಿ ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್‌ಕುಮಾರ್ ಮಾತನಾಡಿ, ಸಂವಿಧಾನ ಜಾರಿಗೆ ಬಂದ ದಿನದಂದು ಸಮಾನತೆ ಒಗ್ಗಟ್ಟು ಸಹಬಾಳ್ವೆಯನ್ನು ಪ್ರದರ್ಶಿಸುವ ಸಂಘದ ನಡೆ ಅತ್ಯಂತ ಅಭಿನಂದನೆಗೆ ಪಾತ್ರವಾಗಿದೆ. ಇದೇ ಸಂದರ್ಭದಲ್ಲಿ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಒದಗಿಸಿಕೊಟ್ಟಿರುವುದು ಒಂದು ಅನುಕರಣೀಯ ಮಾದರಿ ಎಂದು ಹೇಳಿದರು. ಆರ್ಥಿಕವಾಗಿ ದುರ್ಬಲರಾಗಿರುವ ಆಟೋಚಾಲಕರಿಗೆ ಜೀವವಿಮಾ ಸೌಲಭ್ಯವನ್ನು ವೈಯಕ್ತಿಕವಾಗಿ ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್‌ಗೌಡ ಭರವಸೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹರಪಳ್ಳಿ ರವೀಂದ್ರ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಸಾದ್‌ಕುಟ್ಟಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಡಿಕೇರಿ ಶಾಸಕ ಮಂಥರ್‌ಗೌಡ ಅವರನ್ನು ಸನ್ಮಾನಿಸಲಾಯಿತು. ೬೦ ವರ್ಷ ಮೇಲ್ಪಟ್ಟ ಹಿರಿಯ ಆಟೋಚಾಲಕರು ಮತ್ತು ಮಾಲೀಕರುಗಳಾದ ಸಂಜೀವ, ಕುಂಞಮಹ್ಮದ್, ಮೋನು ಹಮೀದ್ ಹಾಗೂ ಸ್ಥಾಪಕ ಅಧ್ಯಕ್ಷ ಗ್ಯಾಬ್ರಿಯಲ್ ಡಿಸೋಜ, ಸ್ಥಾಪಕ ಕಾರ್ಯದರ್ಶಿ ವಿಶ್ವನಾಥ್ ಪೂಜಾರಿ, ಹಾಲಿ ಅಧ್ಯಕ್ಷ ಎ.ಎಂ. ಶರೀಫ್ ಅವರುಗಳನ್ನು ಸನ್ಮಾನಿಸಲಾಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪರಿಷತ್ ಭವನದಲ್ಲಿ ಧ್ವಜಾರೋಹಣ ನೆರವೇರಿತು. ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಸಾಪ ಗೌರವ ಕಾರ್ಯದರ್ಶಿಗಳಾದ ಜ್ಯೋತಿ, ಎ.ಪಿ. ವೀರರಾಜು, ಪದಾಧಿಕಾರಿಗಳಾದ ತಿಮ್ಮಶೆಟ್ಟಿ, ರುಬೀನಾ, ಜೋಕಿಂ ವಾಸ್, ಸಿ.ಸಿ. ನಂದ, ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಶನಿವಾರಸಂತೆ: ಕಳಲೆ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ - ಪ್ರತಿಭಾ ಪುರಸ್ಕಾರ ಜರುಗಿತು. ಧ್ವಜಾರೋಹಣ ನೆರವೇರಿಸಿದ ವಿದ್ಯಾಸಂಸ್ಥೆಯ ಅಧ್ಯಕ್ಷ ಆರ್.ಪಿ. ಲಕ್ಷö್ಮಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ರಚಿಸಲು ಶ್ರಮಿಸಿದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಇತರ ಮಹನೀಯರನ್ನು ಸ್ಮರಿಸಿ, ಸಂವಿಧಾನದ ಮಹತ್ವವನ್ನು ತಿಳಿಸಿದರು. ಸಂಸ್ಥೆ ಕಾರ್ಯದರ್ಶಿ ಎಚ್.ಪಿ.ರವಿಕುಮಾರ್ ಹೊಸೂರು ಗ್ರಾಮದ ದಾನಿ ಎಚ್.ಎಂ. ಗುಂಡಪ್ಪನವರ ಸೇವೆಯನ್ನು ಸ್ಮರಿಸಿ ಮಾತನಾಡಿದರು.

ಸದಸ್ಯ ಮೋಹನ್, ಸ್ಪಂದನ ಸಿರಿ ವೇದಿಕೆ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಹಾಗೂ ಮುಖ್ಯಶಿಕ್ಷಕಿ ಇಂದಿರಮ್ಮ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಸರ್ವರ ಪರಿಶ್ರಮ ಅಗತ್ಯವಾಗಿದ್ದು ಸಹಕಾರ ಮನೋಭಾವದಿಂದ ಸೇವೆ ಸಲ್ಲಿಸಬೇಕು. ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಬೇಕು ಎಂದರು. ದಾನಿ ಗುಂಡಪ್ಪನವರ ಪುತ್ರಿ ಸುಧಾ ನಟರಾಜ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ ನೀಡಿ ಪುರಸ್ಕರಿಸಿದರು. ಸ್ಪಂದನ ಸಿರಿ ವೇದಿಕೆ ಅರಕಲಗೂಡು ತಾಲೂಕು ಅಧ್ಯಕ್ಷೆ ದಾಕ್ಷಾಯಿಣಿ ಮುರುಗನ್, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು.

ನಾಪೋಕ್ಲು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ್ ಕುಶಾಲಪ್ಪ ಧ್ವಜಾರೋಹಣವನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಶಾಲಾ ಉಪ ಪ್ರಾಂಶುಪಾಲರಾದ ಶಿವಣ್ಣ ಎಂ.ಎಸ್, ಉಪನ್ಯಾಸಕಿ ಗೋಪಮ್ಮ ಮಾತನಾಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ದೇಶಭಕ್ತಿಗೀತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ನಂತರ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿ ಉಷಾರಾಣಿ ಕಾರ್ಯಕ್ರಮವನ್ನು ನಿರೂಪಿಸಿ, ರೇಖಾ ಶಿವಣ್ಣ ವಂದಿಸಿದರು. ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು.ನಾಪೋಕ್ಲು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ್ ಕುಶಾಲಪ್ಪ ಧ್ವಜಾರೋಹಣವನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಶಾಲಾ ಉಪ ಪ್ರಾಂಶುಪಾಲರಾದ ಶಿವಣ್ಣ ಎಂ.ಎಸ್, ಉಪನ್ಯಾಸಕಿ ಗೋಪಮ್ಮ ಮಾತನಾಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ದೇಶಭಕ್ತಿಗೀತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ನಂತರ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿ ಉಷಾರಾಣಿ ಕಾರ್ಯಕ್ರಮವನ್ನು ನಿರೂಪಿಸಿ, ರೇಖಾ ಶಿವಣ್ಣ ವಂದಿಸಿದರು. ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು.