ಮಡಿಕೇರಿ, ಜ. ೨೮: ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಒದಗಿಸುವ ನಿಟ್ಟಿನಲ್ಲಿ ೧೯೯೩ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ ೨ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಅಂದು ನಗರದಲ್ಲಿ ವಿಚಾರಣೆ ನಡೆಸಲಿದೆ. ವಿಚಾರಣೆ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದೆ. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬAಧಿಸಿದAತೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ದೂರುಗಳು/ ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಆಯಾಯ ಜಿಲ್ಲೆಗಳಲ್ಲಿ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.