ಅರ್ಹರು ಅರ್ಜಿ ಸಲ್ಲಿಸಲು ಸೂಚನೆ

ಮಡಿಕೇರಿ, ಜ. ೨೮: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ ೨೬ ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ೨೦೨೩ ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ ೬ ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ hಣಣಠಿ://sevಚಿsiಟಿಜhugs. ಞಚಿಡಿಟಿಚಿಣಚಿಞಚಿ. gov.iಟಿ ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು ೩ ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ ೧,೫೦೦ ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ೨ ವರ್ಷಗಳವರೆಗೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಸಹಾಯ ವಾಣಿ ಸಂಖ್ಯೆ ೧೮೦೦೫೯೯೯೯೧೮ / ೯೧೧೩೯೩೫೨೨೦ ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಯನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.