ಕಣಿವೆ, ಜ. ೨೯: ತಂಬಾಕು ಹಾಗೂ ಗುಟ್ಕಾ ಸೇವನೆಯಿಂದಾಗಿ ಬಹಳಷ್ಟು ಮಂದಿಗೆ ಬಾಯಿ ಕ್ಯಾನ್ಸರ್ ಎಂಬ ಮಾರಕ ರೋಗ ಉಲ್ಬಣಿಸುತ್ತಿದ್ದು ಸಾರ್ವಜನಿಕರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ (ಪ್ರಬಾರ) ಡಾ. ಇಂದೂಧರ್ ಕರೆಕೊಟ್ಟರು.
ಕೊಡಗು ಜಿಲ್ಲಾಡಳಿತ, ಜಿ.ಪಂ. ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಶಾಲನಗರದ ತಾಲೂಕು ಆಸ್ಪತ್ರೆಯ ಕಚೇರಿ ಸಭಾಂಗಣದಲ್ಲಿ ತಾಲೂಕಿನ ವಸತಿ ನಿಲಯಗಳ ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿಗಳಿಗೆ ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಡಾ. ಇಂದೂಧರ್, ಮಹಿಳೆಯರಲ್ಲಿ ಇತ್ತೀಚಿನ ದಿನಗಳಲ್ಲಿ ಗರ್ಭಕೋಶ ಹಾಗೂ ಸ್ತನದ ಕ್ಯಾನ್ಸರ್ ಕೂಡ ಮಾರಕವಾಗಿ ಪರಿಣಮಿಸುತ್ತಿರುವುದರಿಂದ ಮಹಿಳೆಯರು ಎಚ್ಚರಿಕೆ ವಹಿಸಬೇಕು. ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಜೊತೆಗೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿರುವ ಹೃದಯಾಘಾತವನ್ನು ತಡೆಗಟ್ಟಲು ಕ್ರಮಬದ್ಧವಾಗಿ ಆಗಿಂದಾಗ್ಗೆ ಬಿ.ಪಿ. ಹಾಗೂ ಶುಗರ್ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕೆAದು ಕರೆಕೊಟ್ಟರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ಅಡುಗೆ ಸಿಬ್ಬಂದಿಗಳು ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಶಿಸ್ತು ಕಾಪಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಆರೋಗ್ಯದ ಹಿತ ಕಾಪಾಡಬೇಕಿದೆ. ಅಲ್ಲದೇ ನಿಲಯ ಪಾಲಕರು ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಕರೆಕೊಟ್ಟರು.