ಕರಿಕೆ, ಜ. ೨೮: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಭಾರತ ಸ್ವಾತಂತ್ರö್ಯ ಅಮೃತ ಮಹೋತ್ಸವ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಸಾಹಿತ್ಯ ಪರಿಷತ್, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್, ಕರಿಕೆ ಗಡಿ ಸಾಂಸ್ಕೃತಿಕೋತ್ಸವ ಆಚರಣಾ ಸಮಿತಿ, ಕರಿಕೆ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಕರಿಕೆಯಲ್ಲಿ ನಡೆದ ಗಡಿ ಉತ್ಸವದಲ್ಲಿ ಮೊದಲ ವಿಚಾರ ಗೋಷ್ಠಿಯಲ್ಲಿ ಕರಿಕೆ ಗ್ರಾಮ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರ ಬಗ್ಗೆ ಗಡಿ ಸಾಂಸ್ಕೃತಿಕ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೇಕಲ್ ರಮಾನಾಥ್ ವಿಷಯ ಮಂಡನೆ ಮಾಡಿದರು.
ಗೋಷ್ಠಿಯ ಅಧ್ಯಕ್ಷತೆಯನ್ನು ಭಾಗಮಂಡಲ ಹೋಬಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುನಿಲ್ ಪತ್ರಾವೊ ವಹಿಸಿದ್ದರು. ಅಥಿತಿಗಳಾಗಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೊಸಮನೆ ಹರೀಶ್, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಪತ್ರಕರ್ತ ಹೊದ್ದೆಟ್ಟಿ ಸುಧೀರ್ ಕುಮಾರ್, ಗ್ರಾ.ಪಂ. ಸದಸ್ಯರಾದ ಬಿ.ಕೆ. ಪುರುಷೋತ್ತಮ ಉಪಸ್ಥಿತರಿದ್ದರು. ಎರಡನೇ ಗೋಷ್ಠಿಯ ಅಧ್ಯಕ್ಷತೆಯನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ್ ವಹಿಸಿದ್ದರು. ಗಡಿ ನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ಮಡಿಕೇರಿಯ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕೆ. ಜಯಲಕ್ಷಿö್ಮ ವಿಷಯ ಮಂಡಿಸಿದರು. ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ. ಮುನೀರ್ ಅಹಮ್ಮದ್, ಬೇಂಗೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುದುಪಜೆ.ಜಿ. ಬಿಪಿನ್ ಪಾಲ್ಗೊಂಡಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಗಡಿ ಭಾಗಗಳ ಸಮಸ್ಯೆಗಳ ಕುರಿತು ನಿರ್ಣಯ ಮಂಡಿಸಿದರು. ಸಮಾರೋಪ ಸಮಾರಂಭವು ಗ್ರಾಮ ಪಂಚಾಯಿತಿ ಅಧ್ಯಕ್ಷ, ಗಡಿ ಉತ್ಸವ ಆಚರಣಾ ಸಮಿತಿ ಅಧ್ಯಕ್ಷರಾದ ಎನ್. ಬಾಲಚಂದ್ರ ನಾಯರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಭಾಷಣಕಾರರಾಗಿ ಕವಿ, ಸಾಹಿತಿ ಹಾಗೂ ಮೂಡಬಿದಿರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಅರವಿಂದ ಚೊಕ್ಕಾಡಿ ಪಾಲ್ಗೊಂಡು ಮಾತನಾಡಿದರು.
ಗ್ರಾಮೀಣ ಭಾಗದ ಆರ್ಥಿಕ ಚೇತರಿಕೆ ಹೇಗೆ ಮಾಡಬಹುದು ಎನ್ನುವ ಕುರಿತು ವಿವರಿಸಿದರು. ವೇದಿಕೆಯಲ್ಲಿ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್, ಬೇಕಲ್ ದೇವರಾಜ್, ಕುದುಪಜೆ ಕಲ್ಪನಾ ಜಗದೀಶ್, ಕಟ್ಟಕೋಡಿ ಸುಬ್ರಮಣ್ಯ, ಬೇಕಲ್ ಹರಿಪ್ರಸಾದ್, ಶಿಕ್ಷಕರಾದ ನಿಂಗಪ್ಪ ಹನುಮಣ್ಣನವರ್, ಅಶೋಕ .ಕೆ.ಎಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣಪತಿ ಪಿ.ಪಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಸಂಪತ್ ಕುಮಾರ್, ಆಯುರ್ವೇದ ವೈದ್ಯಾಧಿಕಾರಿ ಡಾ.ಪಲ್ಲವಿ, ಪಂಚಾಯ್ತಿ ಉಪಾಧ್ಯಕ್ಷೆ ಕಲ್ಪನಾ ಜಗದೀಶ್, ಶ್ರೀನಿವಾಸ್ ಟಿ.ಆರ್, ಪಂಚಾಯಿತಿ ಸದಸ್ಯರಾದ ಎಂ.ಎಚ್. ಆಯಿಷಾ, ಜಯಶ್ರೀ, ಸುಮಾ ವಿನೋದ್, ದೀಪಿಕಾ, ರಾಜ್ ಕುಮಾರ್, ಚೆಸ್ಕಾಂ ಕಿರಿಯ ಅಭಿಯಂತರರಾದ ಹರಿಣಾಕ್ಷಿ, ಕರಿಕೆ ಆರೋಗ್ಯ ವಿಸ್ತರಣಾ ಕೇಂದ್ರದ ವೈದ್ಯಾಧಿಕಾರಿ ಡಾ. ಪುಂಡಲಿಕ ಲಮಾಣಿ, ಪ್ರಮುಖರಾದ ಎಂ.ಎA.ರೆಲ್ಸನ್, ಕೆ.ಎನ್.ಸತ್ಯನಾಥ, ಕವನ್ ಕುಮಾರ್ ಆಲತ್ತಿಕಡವು ಸೇರಿದಂತೆ ಪ್ರಮುಖರು, ಉತ್ಸವ ಆಚರಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಇದ್ದರು. ಸಂಜೆಯಿAದ ತಡ ರಾತ್ರಿವರೆಗೆ ಸರಕಾರಿ ಪ್ರೌಢಶಾಲೆ, ಪ್ರಾಥಮಿಕ ಶಾಲೆ, ಆಶ್ರಯ ಶಾಲೆ, ಕಾಟೂರು ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. -ಸುಧೀರ್