ಮಡಿಕೇರಿ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಲ್ಲಿನ ಸುದರ್ಶನ ಬಡಾವಣೆಯ ಮುನೀಶ್ವರ ದೇವಾಲಯ ಸಮಿತಿ ಮತ್ತು ಮುನೀಶ್ವರ ಯುವಕ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮ ಜರುಗಿತು.

ಸೋಮವಾರ ಬೆಳಿಗ್ಗೆ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ ಜರುಗಿತು. ಬಳಿಕ ಬಡಾವಣೆ ನಿವಾಸಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಆಂಜನೇಯ ದೇವಾಲಯಕ್ಕೆ ಕಾಲ್ನಡಿಗೆ ಮೂಲಕ ತೆರಳಿ ಅಲ್ಲಿ ಜರುಗಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾಮೋತ್ಸವ ಪ್ರಯುಕ್ತ ದೇವಾಲಯದಲ್ಲಿ ಸಂಜೆ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು. ಮಕ್ಕಳು ರಾಮ, ಸೀತೆಯ ವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯರು ಭಕ್ತಿಗೀತೆಗಳನ್ನು ಹಾಡಿದರು. ನಂತರ ಸಮಿತಿ ಅಧ್ಯಕ್ಷ ಬಿ.ಡಿ. ಜಗದೀಶ್ ರೈ ಅಧ್ಯಕ್ಷತೆಯಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಯೋಧ್ಯೆ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಸ್ವಯಂ ಸೇವಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

೧೯೯೨ರ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಬಡಾವಣೆ ನಿವಾಸಿಗಳಾದ ಎಂ.ಪಿ. ಸುನೀಲ್ ಸುಬ್ರಮಣಿ, ಮನು ಮಂಜುನಾಥ್, ಕೆ.ಆರ್. ರಮೇಶ್ ಅವರಿಗೆ ಫಲ ತಾಂಬೂಲ, ಅಯೋಧ್ಯೆ ರಾಮಮಂದಿರದ ಪ್ರತಿರೂಪವನ್ನು ನೀಡಿ ಸಮಿತಿ ಪದಾಧಿಕಾರಿಗಳು ಗೌರವಿಸಿದರು.

ಸಮಿತಿ ಉಪಾಧ್ಯಕ್ಷ ಎಂ.ಕೆ. ಕಾವೇರಪ್ಪ, ಕಾರ್ಯದರ್ಶಿ ಕೆ.ಆರ್. ಪ್ರಸಾದ್, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲ, ನಗರಸಭೆ ಸದಸ್ಯೆ ಉಷಾ ಕಾವೇರಪ್ಪ, ದೇವಾಲಯ ಸಮಿತಿ ಮಾಜಿ ಅಧ್ಯಕ್ಷರಾದ ತಳೂರು ಆನಂದ, ಪಿ.ಟಿ. ಉಣ್ಣಿಕೃಷ್ಣ, ಸಲಹೆಗಾರ ತಮ್ಮಪ್ಪ, ಉದ್ಯಮಿ ಜಗದೀಶ್ ರೈ ವೇದಿಕೆಯಲ್ಲಿದ್ದರು. ವೈಷ್ಣವಿ ಶೆಟ್ಟಿ ಮತ್ತು ತಂಡದವರು ರಾಮನ ಕುರಿತ ಹಾಡು ಹಾಡಿದರು. ಶ್ರೀ ರಾಮಾಂಜನೇಯ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಕಿಶೋರ್ ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿದರು.ಬಜೆಗುಂಡಿಯ ಅಯ್ಯಪ್ಪ ಸ್ವಾಮಿ ದೇವಾಲಯ

ಸೋಮವಾರಪೇಟೆ: ಸಮೀಪದ ಬಜೆಗುಂಡಿಯ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆ ಮತ್ತು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಲೋಕಾರ್ಪಣೆ ಸಂಭ್ರಮವನ್ನು ವಿಶೇಷ ಪೂಜೆ, ಅನ್ನದಾನ ಸೇರಿದಂತೆ ಸಂಜೆ ವೇಳೆ ದೀಪಗಳನ್ನು ಬೆಳಗುವುದರ ಮೂಲಕ ಆಚರಿಸಲಾಯಿತು.ಪೊನ್ನಂಪೇಟೆ: ಇಲ್ಲಿಗೆ ಸಮೀಪದ ನಡಿಕೇರಿ ಗೋವಿಂದಸ್ವಾಮಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಎಲ್‌ಇಡಿ ಪ್ರೊಜೆಕ್ಟರ್ ಮೂಲಕ ನೇರ ಪ್ರಸಾರ ಮಾಡಲಾಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.ಕಣಿವೆಯ ರಾಮಲಿಂಗೇಶ್ವರ ಸನ್ನಿಧಿ

ಕಣಿವೆ: ಕೂಡಿಗೆಯಲ್ಲಿ ಶ್ರೀರಾಮ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಭಾವಚಿತ್ರವನ್ನು ಹೊತ್ತ ಆಟೋ ಕಣಿವೆಯ ರಾಮಲಿಂಗೇಶ್ವರ ಸನ್ನಿಧಿಯಲ್ಲಿ ಕಾಣಿಸಿಕೊಂಡಿತು.ಐಗೂರು: ಐಗೂರು ಮತ್ತು ಎಡವಾರೆ ವ್ಯಾಪ್ತಿಯ ಶ್ರೀ ರಾಮನ ಪೂಜೆಯನ್ನು ಸ್ಥಳೀಯ ಮಾರಿಯಮ್ಮ ದೇವಾಲಯದಲ್ಲಿ ದೇವಾಲಯದ ಆಡಳಿತ ಮಂಡಳಿಯವರು ಮತ್ತು ಗ್ರಾಮದ ರಾಮನ ಭಕ್ತರು ಸೇರಿ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಲಿಂಗೇರಿರಾಜೇಶ, ಸುದೇವ, ಜಯರಾಮ್, ಪ್ರಮೋದ್, ಪೂವಯ್ಯ, ಜೋಯಪ್ಪ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಕುಶಾಲನಗರ ದೊಡ್ಡಮ್ಮ ದೇವಾಲಯ ಕುಶಾಲನಗರ: ಕುಶಾಲನಗರ ಪಟ್ಟಣದ ಇಂದಿರಾ ಬಡಾವಣೆಯ ಶ್ರೀ ದೊಡ್ಡಮ್ಮ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಅಯೋಧ್ಯೆ ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಪ್ರಮುಖರು, ಬಡಾವಣೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.