ಮಡಿಕೇರಿ, ಜ. ೨೯: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಮಂಡೇಪAಡ ಅಪ್ಪಚ್ಚು ರಂಜನ್ ಮಾತನಾಡಿ, ಹನುಮ ಧ್ವಜ ದಿಢೀರ್ ತೆರವು ಮಾಡುವ ಮೂಲಕ ರಾಜ್ಯದಲ್ಲಿ ಘರ್ಷಣೆ ಸೃಷ್ಟಿಸಲು ಸರಕಾರ ಮುಂದಾಗಿದೆ. ೧೪೪ ಸೆಕ್ಷನ್ ಹಾಕುವ ಮೂಲಕ ಧÀಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ಇದು ಸರಕಾರದ ದುರಹಂಕಾರದ ಪರಮಾವಧಿ. ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ಅಲ್ಪಸಂಖ್ಯಾತರನ್ನು ಮೆಚ್ಚಿಸುವ ಕೆಲಸಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಅಧಿಕಾರ ದುರುಪಯೋಗಪಡಿಸಿ ಕೊಂಡು ಹನುಮ ಧ್ವಜ ತೆರವು ಮಾಡಲಾಗಿದೆ ಇದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತು ಮಾಜಿ ಸದಸ್ಯ ಮಂಡೇಪAಡ ಸುನಿಲ್ ಸುಬ್ರಮಣಿ, ಮಾಜಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ನಗರಾಧ್ಯಕ್ಷ ಮನು ಮಂಜುನಾಥ್, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರುಗಳಾದ ಅರುಣ್ ಶೆಟ್ಟಿ, ಕಾಳಚಂಡ ಅಪ್ಪಣ್ಣ, ಉಮೇಶ್ ಸುಬ್ರಮಣಿ, ಎಸ್.ಸಿ. ಸತೀಶ್, ಕೆ.ಎಸ್. ರಮೇಶ್, ಚಂದ್ರಶೇಖರ್, ಮಂಜುಳಾ ಸೇರಿದಂತೆ ಇನ್ನಿತರರು ಹಾಜರಿದ್ದರು.