ಪೆರಾಜೆ, ಜ. ೨೯: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪೆರಾಜೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಶಾಲಾ ಕೊಠಡಿ, ಬಿ.ಎಸ್.ಎನ್.ಎಲ್.ಇಂಟರ್ನೆಟ್ ಸೌಲಭ್ಯ ಹಾಗೂ ಸ್ಮಾರ್ಟ್ ಕ್ಲಾಸ್ ,ನೀರಿನ ಘಟಕ ಉದ್ಘಾಟಿಸಿ, ಬಳಿಕ ಶಾಲಾ ರಂಗಮAದಿರದಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಕ್ಕಳು ದೇಶದ ಭವಿಷ್ಯ, ಮಕ್ಕಳಲ್ಲಿ ಸ್ವತಂತ್ರವಾಗಿ ಆಲೋಚನೆ ಮಾಡುವಂತಹ ಸಾಮರ್ಥ್ಯವನ್ನು ಬೆಳೆಸುವುದೇ ನಿಜವಾದ ಶಿಕ್ಷಣ. ಸರ್ಕಾರಿ ಶಾಲೆಗಳಿಗೆ ತಮ್ಮದೇ ಆದ ಸಾಧನೆ, ಹಿನ್ನೆಲೆಗಳಿದ್ದು ಸರ್ಕಾರಿ ಶಾಲೆಗಳು ದೇಶಕ್ಕೆ ನೀಡಿದ ಕೊಡುಗೆ ಅಪಾರವಾದುದ್ದು. ಸರಕಾರಿ ಶಿಕ್ಷಣ ಸಂಸ್ಥೆಗಳಿAದ ತೇರ್ಗಡೆಯಾದ ವಿದ್ಯಾರ್ಥಿಗಳು ಇಂದು ಸಾಧನೆ ಗೈದಿದ್ದಾರೆ ಎಂದರು. ಇಂದು ಬದಲಾಗುತ್ತಿರುವ ಶಿಕ್ಷಣದಲ್ಲಿ ನಾವು ಕೂಡ ಬದಲಾಗಬೇಕಾದ ಅನಿವಾರ್ಯತೆ ಇದೆ. ಈ ಸಂಸ್ಥೆಗೆ ಕೊಡುಗೆಯಾಗಿ ನೀಡಿರುವ ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಯುಗದಲ್ಲಿ ಬದಲಾವಣೆಯ ದಿಕ್ಕಿನಲ್ಲಿ ಸಾಗಲು ಪ್ರಮುಖ ಹೆಜ್ಜೆಯಾಗಿದೆ.
ಇಂತಹ ಸಂಸ್ಥೆಗಳನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರ ಶ್ರಮಿಸುತ್ತಿದ್ದು ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ಕೊಟ್ಟು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ರಾಜ್ಯದಲ್ಲಿ ಬೆಳೆಸುವ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿರುತ್ತದೆ. ನಾನು ಈ ಭಾಗದ ಶಾಸಕನಾಗಿ ಎಲ್ಲಾ ರೀತಿಯ ಸಹಕಾರವನ್ನು ಶಾಲೆಗಳಿಗೆ ,ಶಿಕ್ಷಣ ಸಂಸ್ಥೆಗಳಿಗೆ ನೀಡಲು ಸಿದ್ಧನಿದ್ದು ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡಲು ಪೋಷಕರು ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕಡಬದ ಸರಸ್ವತಿ ವಿದ್ಯಾಲಯದ ಸಂಚಾಲಕÀ ವೆಂಕಟರಮಣ ರಾವ್ ಮಂಕುಡೆ ಅವರು ಮಾತನಾಡಿ ನಳಂದ ತಕ್ಷಶಿಲಾದಂತಹ ಶ್ರೇಷ್ಠ ವಿಶ್ವವಿದ್ಯಾಲಯಗಳನ್ನು ಹೊಂದಿದ ದೇಶ ನಮ್ಮದು. ವಿದ್ಯೆಯಿಂದ ವಿನಯತೆಯನ್ನು ಅಳವಡಿಸಿಕೊಳ್ಳಬೇಕು,ಮಕ್ಕಳಿಗೆ ತಮ್ಮ ಬಾಲ್ಯದಲ್ಲಿಯೇ ಸಂಸ್ಕಾರಯುತ ಜೀವನ ಪಾಠಗಳನ್ನು ನೀಡಿದಾಗ ಆ ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಪ್ರಮೀಳಾ ಭಾರದ್ವಾಜ್ , ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ ದೊಡ್ಡೆಗೌಡ , ಕೊಡಗು ಆಡಳಿತ ಮತ್ತು ಅಭಿವೃದ್ಧಿಯ ಉಪನಿರ್ದೇಶಕÀ ಚಂದ್ರಕಾAತ್ , ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಅಮೃತ ಮಹೋತ್ಸವ ಸಮಿತಿಯ ಗೌರವ ಸಲಹೆಗಾರ ಸುರೇಶ್ ಪೆರುಮುಂಡ ಹಾಗೂ ಜಿತೇಂದ್ರ ನಿಡ್ಯಮಲೆ, ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಉದಯಚಂದ್ರ ಕುಂಬಳಚೇರಿ, ಪೂರ್ಣಿಮ ಕುಂಡಾಡು, ಪ್ರವೀಣ್ ಮಜಿಕೋಡಿ, ಐ.ಎಸ್.ಎಫ್ ಮತ್ತು ಐಇಇಇ ಡಿಜಿಟಲ್, ಬೆಂಗಳೂರು ಇದರ ಸಿಬ್ಬಂದಿಗಳಾದ ಸ್ವರಾಜ್ ಹೆಚ್.ವಿ ಹಾಗೂ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘ, ಅಮೃತ ಮಹೋತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಸಭಾ ಕಾರ್ಯಕ್ರಮಕ್ಕೂ ಮುಂಚಿತವಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿ ತೆರಳಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಾಜು ಅವರು ಸ್ವಾಗತಿಸಿ, ಶಾಲಾ ಶಿಕ್ಷಕರಾದ ಚಂದ್ರಶೇಖರ್ ಗುಡ್ಡೆಮನೆ ಅವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಸಂದರ್ಭ ಶಾಲಾ ಅಮೃತ ಮಹೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. -ಕಿರಣ್ ಕುಂಬಳಚೇರಿ