ಮಡಿಕೇರಿ: ನೂತನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ೭೫ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಡಿಕೇರಿ ಉಪ ವಿಭಾಗದ ಉಪಾಧೀಕ್ಷಕರು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಲಿಪಿಕ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ವಾಲ್ಮೀಕಿ ಆಶ್ರಮ ಶಾಲೆಮುಳ್ಳೂರು: ವಿದ್ಯಾರ್ಥಿಗಳು ರಾಷ್ಟç ಕಟ್ಟುವ ರೂವಾರಿಗಳಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿದೇಶಕ ಮತ್ತು ಸಮಾಜ ಸೇವಕ ಹರಪಳ್ಳಿ ರವೀಂದ್ರ ಅಭಿಪ್ರಾಯಪಟ್ಟರು. ಅವರು ಸಮೀಪದ ಆಲೂರು-ಸಿದ್ದಾಪುರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಮಾನವಿಯ ಮೌಲ್ಯ, ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾದರಿ ವ್ಯಕ್ತಿಯಾಗಲು ಸಹಕಾರಿಯಾಗುತ್ತದೆ ಎಂದರು. ಪ್ರತಿಯೊಬ್ಬರು ಅಧ್ಯಾತ್ಮಿಕ ಚಿಂತನೆಯ ಜೊತೆಯಲ್ಲಿ ಸಾಮಾಜಿಕ ಚಿಂತನೆಯನ್ನು ಬೆಳೆಸಿಕೊಂಡರೆ ಸ್ವಾಸ್ಥö್ಯ ಸಮಾಜ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯ, ಕ್ರೀಡೆ, ಸಾಂಸ್ಕೃತಿಕ ಶಿಕ್ಷಣದ ಜೊತೆಯಲ್ಲಿ ಸಾಮಾಜಿಕ ಮೌಲ್ಯಗಳನ್ನು ಹೇಳಿಕೊಡಬೇಕೆಂದು ಸಲಹೆ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿನಯ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ರಾಜ್ಯ ಶಿಕ್ಷಕರ ಸಂಘಟನೆಯ ಮಾಜಿ ಕಾರ್ಯದರ್ಶಿ ಕೆ.ಕೆ. ಮಂಜುನಾಥ್ ಕುಮಾರ್, ಗ್ರಾ.ಪಂ. ಸದಸ್ಯರಾದ ಸತೀಶ್‌ಕುಮಾರ್, ದಮಯಂತಿ ಕರುಂಬಯ್ಯ, ಲೀಲಮ್ಮ, ಮಲ್ಲಪ್ಪ, ಪಿಡಿಓ ಹರೀಶ್, ಪ.ಪೂ. ಕಾಲೇಜು ಪ್ರಾಂಶುಪಾಲ ಕೆ.ಎಂ. ಚಂದ್ರಶೇಖರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಣಪತಿ, ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ಮ್ಯಾನೆಜಿಂಗ್ ಟ್ರಸ್ಟಿ ಹೆಚ್.ಕೆ. ಶಿವಪ್ರಕಾಶ್, ಸಿಆರ್‌ಪಿ ಆಶಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕರುಂಬಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸಿ.ಟಿ. ಸೋಮಶೇಖರ್, ಶಾಲಾ ಶಿಕ್ಷಕರು, ಪ.ಪೂ. ಕಾಲೇಜು ಉಪನ್ಯಾಸಕರು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ವಾರ್ಷಿಕೋತ್ಸವ ಅಂಗವಾಗಿ ಬೆಳಿಗ್ಗೆ ನಡೆದ ಸಾರ್ವಜನಿಕರ ಕ್ರೀಡಾಕೂಟವನ್ನು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಉದ್ಘಾಟಿಸಿದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವೀರಾಜಪೇಟೆ ಕರ್ನಾಟಕ ಸಂಘಹAಡ್ಲಿ: ಸರಕಾರಿ ಪ್ರೌಢಶಾಲೆ ಹಂಡ್ಲಿಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಮುಖ್ಯಶಿಕ್ಷಕರು ನೆರವೇರಿಸಿದ ನಂತರ ಊರಿನ ಪ್ರಮುಖ ಬೀದಿಗಳಲ್ಲಿ ವಿವಿಧ ಘೋಷಗಳೊಂದಿಗೆ ಮೆರವಣಿಗೆಯನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು.

ವಿದ್ಯಾರ್ಥಿಗಳು ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು. ದೇಶಭಕ್ತಿ ಗೀತೆಗಳಿಗೆ ನೃತ್ಯ ಹಾಗೂ ನಾಟಕ ಮಾಡಿದರು. ಕಳೆದ ಸಾಲಿನಲ್ಲಿ ಅತ್ಯಧಿಕ ಅಂಕಗಳಿಸಿದ್ದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಸೈನಿಕರು ಊರಿನ ಗಣ್ಯರು ಹಿರಿಯರು ಆದ ಕೆ.ಕೆ ಮಂಜುನಾಥ್ ಕುಮಾರ್ ರವರು ಮಾತನಾಡಿ ಮಕ್ಕಳು ದೇಶಪ್ರೇಮವನ್ನು ಬೆಳೆಸಿಕೊಳ್ಳುವ ಬಗ್ಗೆ ಕರೆನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಪುಷ್ಪಾ, ಸಹಶಿಕ್ಷಕರಾದ ಸಾಹಿರಾಭಾನು, ಸುನೀತಾ, ಅಬ್ದುಲ್ ನಝೀರ್, ಸೌಭಾಗ್ಯ, ವಿಕ್ರಾಂತ್, ಮೀರಾ ಸುಮನ್ ಕ್ಯಾಸ್ತಲಿನೋ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಶನಿವಾರಸಂತೆ ನಿವೃತ್ತ ಸೈನಿಕರ ಸಂಘ ಮಡಿಕೇರಿ: ಕೊಡಗು ಗೌಡ ವಿದ್ಯಾಸಂಘ ಮಡಿಕೇರಿ ವತಿಯಿಂದ ಗಣರಾಜ್ಯೋತ್ಸವದಂದು ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಪುದಿಯನೆರವನ ರೇವತಿ ರಮೇಶ್ ಹಾಗೂ ಸಂಘದ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಕಾಫಿ ಮಂಡಳಿ ಗೋಣಿಕೊಪ್ಪ ಐಗೂರು: ಐಗೂರು ವ್ಯಾಪ್ತಿಯ ಯಡವನಾಡು ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ, ಅತಿಥಿಗಳಿಗೆ ಸ್ವಾಗತ, ಧ್ವಜಾರೋಹಣದ ನಂತರ ಸಭಾ ಕಾರ್ಯಕ್ರಮದಲ್ಲಿ ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷೆ ಪ್ರೇಮ, ಶಾಲಾ ಉಸ್ತುವಾರಿ ಸಮಿತಿ ಉಪಾಧ್ಯಕ್ಷ ರವಿ, ಮುಖ್ಯೋಪಾಧ್ಯಾಯ ರಜನಿಕಾಂತ್, ಶಿಕ್ಷಕ ವೃಂದದವರು, ಹಾಡಿ ಮುಖಂಡರಾದ ನಂಜಯ್ಯ, ವಸಂತ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಉಸ್ತುವಾರಿ ಸಮಿತಿ ಅಧ್ಯಕ್ಷೆ ಪ್ರೇಮಾ ಅವರು ಈ ಶಾಲೆಯು ಬಡ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ಕೇಂದ್ರವಾಗಿದ್ದು ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳಿಗಿಂತ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಇದಕ್ಕೆ ಈ ಶಾಲೆಯ ಅಧ್ಯಾಪಕರು ಮತ್ತು ಪೋಷಕರು ಸಹಕಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಆಟದ ಜೊತೆಗೆ ಪಾಠ ಪ್ರವಚನಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಖ್ಯ ಶಿಕ್ಷಕ ರಜನಿಕಾಂತ್ ವಂದಿಸಿದರು.

ಹುಲುಗುAದ ಶಾಲೆ ವೀರಾಜಪೇಟೆ: ವೀರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಸಂಘದ ಅಧ್ಯಕ್ಷ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ಅವರು ಸಂಘದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗಡಿ ಭಾಗವಾದ ವೀರಾಜಪೇಟೆ ವ್ಯಾಪ್ತಿಯಲ್ಲಿ ಕನ್ನಡ ನಾಡು, ನುಡಿ, ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕನ್ನಡದ ಬಗ್ಗೆ ಹೆಚ್ಚಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಧ್ವಜಾರೋಹಣ ಸಂದರ್ಭ ಕರ್ನಾಟಕ ಸಂಘದ ಉಪಾಧ್ಯಕ್ಷ ಸಿ.ಈ. ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಎಂ. ಕುಸುಮ ಸೋಮಣ್ಣ, ಕೋಶಾಧಿಕಾರಿ ಕೆ.ಯು. ಗಣೇಶ್ ತಮ್ಮಯ್ಯ, ನಿರ್ದೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ. ಸುರೇಶ್ ನಾಣಯ್ಯ, ಎ.ಎಂ. ಜೋಯಪ್ಪ, ಎಂ. ರಾಣು ಮಂದಣ್ಣ, ಬಿ.ಎಂ. ಸುರೇಶ್, ಬಿ.ಆರ್. ಗಣೇಶ್, ಕೆ.ಎಂ. ಮೊಣ್ಣಪ್ಪ, ಎಂ.ಬಿ. ದೇವಯ್ಯ, ಕಚೇರಿ ಕಾರ್ಯದರ್ಶಿ ರಾಧ ಉಪಸ್ಥಿತರಿದ್ದರು.

ಚೆಟ್ಟಳ್ಳಿ ಪ್ರೌಢಶಾಲೆ

ಮಡಿಕೇರಿ: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕೆ. ತಿಲಕ್ ಅವರು ರಾಷ್ಟç ಧ್ವಜಾರೋಹಣವನ್ನು ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ಗಾಯನ ಹಾಗೂ ದಿನದ ಮಹತ್ವದ ಬಗ್ಗೆ ಭಾಷಣ ಸ್ಪರ್ಧೆ ನಡೆಯಿತು. ಶಿಕ್ಷಕರ ಪರವಾಗಿ ಹಿಂದಿ ಶಿಕ್ಷಕ ಮುಕ್ಕಾಟಿ ಈ. ಮನೋಜ್ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಶಿಕ್ಷಕಿ ಸುನಂದ ವಂದಿಸಿದರು.

ಕುಟ್ಟ ಸೆಂಟ್ ಮೇರೀಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಮಡಿಕೇರಿ: ಕೊಯನಾಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಸ್ಥಾನವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನವೀನ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್ ಎಸ್.ಪಿ., ಮುತ್ತೂಮಾರಿಯಮ್ಮ ದೇವಸ್ಥಾನ ಅಧ್ಯಕ್ಷ ಗಜೇಂದ್ರ, ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಜಾಕ್, ಚಾಮುಂಡೇಶ್ವರಿ ದೇವಸ್ಥಾನ ಅಧ್ಯಕ್ಷರಾದ ಯಶೋಧರ, ಶಾಲಾ ಮುಂಚೂಣಿ ಹೋರಾಟಗಾರರಾದ ಅಪ್ಪಣ್ಣ, ನಿಕಟಪೂರ್ವ ಮುಖ್ಯೊಪಾಧ್ಯಾಯಿನಿ ಸುಲೋಚನಾ, ಶಾಲಾ ನಾಯಕಿ ಸಫೂವಾನ, ಇನ್ನಿತರ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಹಂಸಕಲಾ ಸ್ವಾಗತಿಸಿದರು, ಶಿಕ್ಷಕಿ ಕವಿತಾ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಸದಸ್ಯರು, ಊರ-ಪರವೂರ ದಾನಿಗಳು, ಸರ್ವರ ಸಹಕಾರದಿಂದ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕೊಡ್ಲಿಪೇಟೆ ವಿದ್ಯಾಸಂಸ್ಥೆ ಮಡಿಕೇರಿ: ಕೊಯನಾಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಸ್ಥಾನವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನವೀನ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್ ಎಸ್.ಪಿ., ಮುತ್ತೂಮಾರಿಯಮ್ಮ ದೇವಸ್ಥಾನ ಅಧ್ಯಕ್ಷ ಗಜೇಂದ್ರ, ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಜಾಕ್, ಚಾಮುಂಡೇಶ್ವರಿ ದೇವಸ್ಥಾನ ಅಧ್ಯಕ್ಷರಾದ ಯಶೋಧರ, ಶಾಲಾ ಮುಂಚೂಣಿ ಹೋರಾಟಗಾರರಾದ ಅಪ್ಪಣ್ಣ, ನಿಕಟಪೂರ್ವ ಮುಖ್ಯೊಪಾಧ್ಯಾಯಿನಿ ಸುಲೋಚನಾ, ಶಾಲಾ ನಾಯಕಿ ಸಫೂವಾನ, ಇನ್ನಿತರ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಹಂಸಕಲಾ ಸ್ವಾಗತಿಸಿದರು, ಶಿಕ್ಷಕಿ ಕವಿತಾ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಸದಸ್ಯರು, ಊರ-ಪರವೂರ ದಾನಿಗಳು, ಸರ್ವರ ಸಹಕಾರದಿಂದ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕೊಡ್ಲಿಪೇಟೆ ವಿದ್ಯಾಸಂಸ್ಥೆ ಐಗೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸತೋಟ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವ ಸಂಭ್ರಮದಿAದ ಸೋಮವಾರಪೇಟೆ ಲಯನ್ಸ್ ಸೇವಾ ಸಂಸ್ಥೆಯ ಸಹಯೋಗದಿಂದ ನಡೆಸಲಾಯಿತು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭ ಲಯನ್ಸ್ ಖಜಾಂಚಿ ಕೆ.ಡಿ. ವೀರಪ್ಪ ಮತ್ತು ಲಯನ್ಸ್ ವಲಯ ಅಧ್ಯಕ್ಷ ಚೆಟ್ಟಿಮಾಡ ಕೆ. ರೋಹಿತ್ ಶಾಲೆಗೆ ನಿರ್ಮಿಸಿಕೊಟ್ಟಿದ್ದ ಗೇಟಿನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಲಯನ್ಸ್ಸ್ನ ಸೋಮವಾರಪೇಟೆ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಸಿ.ಕೆ. ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಶಾಲಾ ಮುಖ್ಯೋಪಾಧ್ಯಾಯಿನಿ ಪವಿತ್ರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ, ಶಿಕ್ಷಕ ವೃಂದ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಲಯನ್ಸ್ ವಲಯ ಅಧ್ಯಕ್ಷ ಚೆಟ್ಟಿಮಾಡ ಕೆ. ರೋಹಿತ್, ಖಜಾಂಚಿ ಕೆ.ಡಿ. ವೀರಪ್ಪ, ಸೋಮವಾರಪೇಟೆ ಲೈನ್ಸ್ನ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಸಿ.ಕೆ., ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ, ಶಿಕ್ಷಕ ವೃಂದ ಮತ್ತು ಗ್ರಾಮಸ್ಥರು ಹಾಜರಿದ್ದರು.ಗೋಣಿಕೊಪ್ಪಲು: ಗಣರಾಜ್ಯೋತ್ಸವದ ಅಮೃತ ಮಹೋತ್ಸವವನ್ನು ಕೂರ್ಗ್ ಪಬ್ಲಿಕ್ ಶಾಲೆ, ಗೋಣಿಕೊಪ್ಪಲಿನಲ್ಲಿ ಸಂಭ್ರಮದಿAದ ಆಚರಿಸಲಾಯಿತು.

ದೇಶದಲ್ಲಿ ಸಮಾನತೆಯ ಸಂದೇಶ ಸಾರಿದ, ‘ಸಂವಿಧಾನ ಶಿಲ್ಪಿ’ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಶಾಲಾ ಶಿಕ್ಷಕಿ ನಿಶಾ ಮಾಚಯ್ಯ ಕಾರ್ಯಕ್ರಮವನ್ನು ಉದ್ದೇಶಿಸಿ, ಭಾರತ ದೇಶದ ಸಂವಿಧಾನವು ಎಲ್ಲಾ ದೇಶಕ್ಕೂ ಮಾದರಿಯಾಗಿದೆ. ನಮ್ಮಲ್ಲಿ ಪ್ರೀತಿ -ವಿಶ್ವಾಸಗಳ ಅರುಣರಾಗ ಮೂಡಬೇಕು. ಕೋಮು ದಳ್ಳುರಿ, ಅಜ್ಞಾನ, ಅಂಧಕಾರ, ಭ್ರಷ್ಟಾಚಾರ ಎಲ್ಲವೂ ಅಳಿದು, ದಯೆ ಕುರುಣಿ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳು ಸಾಕಾರಗೊಳ್ಳಬೇಕು. ಸಕಾರಾತ್ಮಕ ಚಿಂತನೆಗಳು ಮೈದಾಳಬೇಕು. ನಾಡು-ನುಡಿಗಾಗಿ ಶ್ರಮಿಸಿರುವ ರಾಷ್ಟçಭಕ್ತರನ್ನು, ಸ್ವಾತಂತ್ರಕ್ಕಾಗಿ ಬಲಿದಾನಗೈದ ಹುತಾತ್ಮರನ್ನು ಸ್ಮರಿಸಬೇಕು. ಅವರ ಆದರ್ಶಗಳನ್ನು, ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಹಿತವಚನವನ್ನು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಪ್ರಾಂಶುಪಾಲ ಡಾ. ರಾಮಚಂದ್ರನ್ ಮಾತನಾಡಿ, ಭಾರತದ ನಾಗರಿಕರಾದ ನಾವು ಸಂವಿಧಾನದಲ್ಲಿ ಕೊಡಮಾಡಿದ ಮೂಲಭೂತ ಹಕ್ಕು- ಮೂಲಭೂತ ಕರ್ತವ್ಯಗಳ ಬಗ್ಗೆ ಚೆನ್ನಾಗಿ ತಿಳಿದುಕೊಳ್ಳಬೇಕು. ಅವುಗಳ ಬಗ್ಗೆ ಚಿಂತನೆ ನಡೆಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ದೇಶಭಕ್ತಿಯನ್ನು ಸಾರುವ ವಿದ್ಯಾರ್ಥಿಗಳ ಸುಮಧುರವಾದ ಗೀತ ಗಾಯನದ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.ಗೋಣಿಕೊಪ್ಪ ವರದಿ: ಕುಟ್ಟ ಸೆಂಟ್ ಮೇರೀಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಂದ ದೇಶಭಕ್ತಿ ಮೂಡಿಸುವ ಕಾರ್ಯಕ್ರಮ ಗಮನ ಸೆಳೆಯಿತು.

ಬಲೂನುಗಳ ಮೂಲಕ ಪುಟಾಣಿಗಳು ದೇಶಭಕ್ತಿ ನೃತ್ಯದಲ್ಲಿ ಭಾಗವಹಿಸಿದ್ದರು. ಕಿರು ನಾಟಕದ ಮೂಲಕ ಗಣರಾಜ್ಯೋತ್ಸವ ಮಹತ್ವ ಮತ್ತು ಆರಂಭದ ಬಗ್ಗೆ ಬೆಳಕು ಚೆಲ್ಲಲಾಯಿತು. ತ್ರಿವರ್ಣದಲ್ಲಿ ಯೋಗ, ನೃತ್ಯ ನಡೆಸಿಕೊಟ್ಟರು.

ಪಾಲಕರಿಗೆ ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯಿತು. ಕುಟ್ಟ ನಿರ್ಮಲ ಮಾಥೆ ಪರಿಶದ ಧರ್ಮಗುರು ಆಬಮಲೈ ಮುತ್ತು ಗಣರಾಜ್ಯೋತ್ಸವ ಆಚರಣೆ ಬಗ್ಗೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ ಮಾತನಾಡಿ, ದೇಶಾಭಿಮಾನ ಬೆಳೆಸಿಕೊಳ್ಳಲು ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟ ಎಂದರು. ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಮುಖ್ಯ ಶಿಕ್ಷಕಿ ಎಲಿಜಬಿತ್ ರಾಡ್ರಿಗಸ್ ಇದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಿದರು. ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಸಂವಿಧಾನದ ಮಹತ್ವವನ್ನು ತಿಳಿಸಿ, ಸಂವಿಧಾನದ ಧ್ಯೇಯ ಹಾಗೂ ಉದ್ದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು. ಉಪನ್ಯಾಸಕ ಅಭಿಲಾಷ್ ದಿನದ ಮಹತ್ವದ ಕುರಿತು ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಶಿವಪ್ರಸಾದ್, ಬಿ.ಕೆ.ಯತೀಶ್, ಪದವಿ ಕಾಲೇಜು ಪ್ರಾಂಶುಪಾಲ ನಿರಂಜನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪವಾರ್, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಅಬ್ದುಲ್ ರಬ್, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಶಿಕ್ಷಕ ಸುನೀಲ್ ಕಾರ್ಯಕ್ರಮ ನಿರ್ವಹಿಸಿದರು.ಐಗೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸತೋಟ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವ ಸಂಭ್ರಮದಿAದ ಸೋಮವಾರಪೇಟೆ ಲಯನ್ಸ್ ಸೇವಾ ಸಂಸ್ಥೆಯ ಸಹಯೋಗದಿಂದ ನಡೆಸಲಾಯಿತು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭ ಲಯನ್ಸ್ ಖಜಾಂಚಿ ಕೆ.ಡಿ. ವೀರಪ್ಪ ಮತ್ತು ಲಯನ್ಸ್ ವಲಯ ಅಧ್ಯಕ್ಷ ಚೆಟ್ಟಿಮಾಡ ಕೆ. ರೋಹಿತ್ ಶಾಲೆಗೆ ನಿರ್ಮಿಸಿಕೊಟ್ಟಿದ್ದ ಗೇಟಿನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಲಯನ್ಸ್ಸ್ನ ಸೋಮವಾರಪೇಟೆ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಸಿ.ಕೆ. ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಶಾಲಾ ಮುಖ್ಯೋಪಾಧ್ಯಾಯಿನಿ ಪವಿತ್ರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ, ಶಿಕ್ಷಕ ವೃಂದ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಲಯನ್ಸ್ ವಲಯ ಅಧ್ಯಕ್ಷ ಚೆಟ್ಟಿಮಾಡ ಕೆ. ರೋಹಿತ್, ಖಜಾಂಚಿ ಕೆ.ಡಿ. ವೀರಪ್ಪ, ಸೋಮವಾರಪೇಟೆ ಲೈನ್ಸ್ನ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಸಿ.ಕೆ., ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ, ಶಿಕ್ಷಕ ವೃಂದ ಮತ್ತು ಗ್ರಾಮಸ್ಥರು ಹಾಜರಿದ್ದರು.