ಪಾಲಿಬೆಟ್ಟ, ಜ. ೩೧: ವಿದ್ಯಾರ್ಥಿ ಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು.
ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ೪೩ ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಯಕ್ತಿಕವಾಗಿ ಶಾಲಾ ಬ್ಯಾಗ್ಗಳನ್ನ ವಿತರಿಸಿ ಮಾತ ನಾಡಿದ ಅವರು, ಕಾಡು ಪ್ರಾಣಿಗಳ ಹಾವಳಿ ನಡುವೆ ಶಿಕ್ಷಣ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳು ಶಿಕ್ಷಕರುಗಳ ಮಾರ್ಗದರ್ಶನವನ್ನು ಮೈಗೂಡಿಸಿ ಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾ ಗಲಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉನ್ನತ ಶಿಕ್ಷಣ ದೊಂದಿಗೆ ಮುಂದೆ ಬರಬೇಕೆಂದರು.
ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಕಲಿಯುತ್ತಿರುವ ಶಾಲೆಗೆ ದಾನಿಗಳು ಹಲವು ರೀತಿಯಲ್ಲಿ ಸಹಕಾರ ನೀಡು ತ್ತಿದ್ದು, ವಿಜು ಸುಬ್ರಮಣಿ ಅವರು ಇದೀಗ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಬ್ಯಾಗ್ ಗಳನ್ನು ವಿತರಿಸಿದ್ದಾರೆ ಎಂದರು. ಸಮಾಜ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪಾಲಿಬೆಟ್ಟದ ಸಮಾಜ ಸೇವಕ ಡಾ. ಎ.ಸಿ. ಗಣಪತಿ ಮಾತನಾಡಿ, ಶಿಕ್ಷಕರ ಕಾಳಜಿಯಿಂದ ಶಾಲೆಯು ಸುಂದರ ಪರಿಸರದೊಂದಿಗೆ ಮಕ್ಕಳಿಗೆ ಶಿಕ್ಷಣ ಅಭ್ಯಾಸದ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲೆಯಾದರೂ ಮಕ್ಕಳ ಭವಿಷ್ಯ ರೂಪಿಸಲು ದಾನಿಗಳು ಹೆಚ್ಚಿನ ಸಹಕಾರ ನೀಡುತ್ತಿದ್ದು ವಿದ್ಯಾರ್ಥಿಗಳು ಕಲಿಕೆಯ ಮೂಲಕ ಉನ್ನತ ಶಿಕ್ಷಣ ಪಡೆದು ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬರಬೇಕೆಂದರು.
ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುತ್ರ ಪೂಣಚ್ಚ ಮಾತನಾಡಿ, ಕಾಡು ಪ್ರಾಣಿಗಳ ಭಯದ ನಡುವೆ ಶಾಲೆಗೆ ಆಗಮಿಸುತ್ತಿರುವ ವಿದ್ಯಾರ್ಥಿ ಗಳಿಗೆ ಅರಣ್ಯ ಇಲಾಖೆ ವಾಹನ ವ್ಯವಸ್ಥೆಯನ್ನು ಮಾಡಬೇಕಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕಾಗಿದೆ. ಶಾಲೆಗೆ ತಪ್ಪದೇ ಹಾಜರಾಗುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವೈಯಕ್ತಿಕವಾಗಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕ್ಲಸ್ಟರ್ ಸಿಆರ್ಪಿ ಕರುಂಬಯ್ಯ, ಬೆಳೆಗಾರ ಎಂ.ಎಸ್ ಠವಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೇಬಿ, ಆದಿವಾಸಿ ಮುಖಂಡ ಸಿದ್ದಪ್ಪ, ಶಾಲಾ ಮುಖ್ಯ ಶಿಕ್ಷಕಿ ಕೆ.ಕೆ. ಸುಷಾ, ಶಿಕ್ಷಕರುಗಳಾದ ಪ್ರತಿಮಾ, ಸತೀಶ್ ,ಮಂಜುಳ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.