ಕುಶಾಲನಗರ, ಜ. ೩೧: ಗುಡ್ಡೆಹೊಸೂರು ಗ್ರಾಮ ಪಂಚಾ ಯಿತಿಯ ಗ್ರಾಮ ಸಭೆ ಮುಂದೂ ಡಿಕೆಗೆ ಸಂಬAಧಿಸಿದAತೆ ಪಂಚಾ ಯಿತಿ ಆಡಳಿತ ಮಂಡಳಿಯ ಬಗ್ಗೆ ಅವಹೇಳನಕಾರಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿ ರುವ ಬಗ್ಗೆ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಖಂಡನೆ ವ್ಯಕ್ತಪಡಿಸಿ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ತಾ.೩೦ ರಂದು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಅಧಿಕಾರಿಗಳ ಗೈರು ಹಾಜರಿಯಿಂದ ಮುಂದೂಡಲ್ಪಟ್ಟಿದ್ದು, ಈ ಬಗ್ಗೆ ಹೆಚ್.ಎಂ. ರಘು ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಪಂಚಾಯಿತಿ ಆಡಳಿತ ಮಂಡಳಿಯ ಗೌರವಕ್ಕೆ ಧಕ್ಕೆ ತರುವಂತೆ ವರದಿ ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬAಧ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ತುರ್ತು ಸಭೆ ಸೇರಿ ಅನಾವಶ್ಯಕ ಗೊಂದಲದ ಹೇಳಿಕೆಗಳನ್ನು ನೀಡಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಸಂಬAಧಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಅಧ್ಯಕ್ಷೆ ರುಕ್ಮಿಣಿ ದೂರಿನಲ್ಲಿ ಮನವಿ ಮಾಡಿದ್ದಾರೆ.