ಚೆಯ್ಯಂಡಾಣೆ: ಎಡಪಾಲದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಬಶೀರ್ ಪಿ.ಎ. ನೆರವೇರಿಸಿದರು. ಈ ಸಂದರ್ಭ ದಿನದ ಮಹತ್ವದ ಕುರಿತು ಮುಖ್ಯ ಶಿಕ್ಷಕಿ ಶ್ಯಾಮಲಾ ಮಾತನಾಡಿದರು. ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಮಮ್ಮದ್, ಶಿಕ್ಷಕರುಗಳಾದ ಅಪ್ಪಣ್ಣ, ದೇಚಮ್ಮ, ಮರಿಯಂಬಿ, ಪೋಷಕರು, ಮತ್ತಿತರರು ಉಪಸ್ಥಿತರಿದ್ದರು.

ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗುಡ್ಡೆಹೊಸೂರು: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ನಡೆಯಿತು. ಜೊತೆಗೆ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಉದ್ಘಾಟನೆಯನ್ನು ಗ್ರಾ.ಪಂ. ಮಾಜಿ ಅಧ್ಯಕ್ಷೆ ನಂದಿನಿ ಮಾಡಿದರು. ಮಕ್ಕಳ ಕ್ರೀಡಾಕೂಟವನ್ನು ಗ್ರಾ.ಪಂ. ಸದಸ್ಯೆ ಉಷಾ ಯತೀಶ್ ಉದ್ಘಾಟಿಸಿದರು.

ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಆರ್. ನಾಗೇಂದ್ರ ನೆರವೇರಿಸಿದರು. ಈ ಸಂದರ್ಭ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ಎಸ್.ಡಿ.ಎಂ.ಸಿ. ಸದಸ್ಯರ ನಡುವೆ ಕ್ರೀಡಾಕೂಟ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಆರ್. ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭದ ಮುಖ್ಯ ಭಾಷಣಕಾರರಾಗಿ ಕನ್ನಡ ಅಧ್ಯಾಪಕ ವೆಂಕಟರಾಜು, ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ, ಆರೋಗ್ಯ ಇಲಾಖಾಧಿಕಾರಿ ಆಮೆಮನೆ ಪಾರ್ವತಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರಾದ ಬಿ.ಎನ್. ಕಾಶಿ, ಬಿ.ಎಸ್. ದಿನೇಶ್, ರಾಮಕೃಷ್ಣ, ಕೆ.ಎನ್. ಚಂದ್ರಶೇಖರ್, ಸದಸ್ಯೆ ಗಂಗಮ್ಮ ಹಾಜರಿದ್ದರು.

ಕರಿಕೆ ಗ್ರಾಮ ಪಂಚಾಯಿತಿ ಚೆಯ್ಯಂಡಾಣೆ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಸೈನ್ಯಕ್ಕೆ ಸೇರುವವರಾಗಬೇಕೆಂದು ನಿವೃತ ಕರ್ನಲ್ ನಾರಾಯಣ ಮೂರ್ತಿ ಹೇಳಿದರು.

ಚೆಯ್ಯಂಡಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರ ಮೂಲಕ ಉತ್ತಮ ಪ್ರಜೆಗಳಾಗಬೇಕು. ಪೋಷಕರು ಕೂಡ ಶಾಲೆಗಳಿಗೆ ಬಂದು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಓದಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಬೇಕೆಂದು ಕಿವಿಮಾತು ಹೇಳಿದರು.

ಧ್ವಜಾರೋಹಣವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ನೆರವೇರಿಸಿದರು. ಅತಿಥಿ ಪತ್ರಕರ್ತ ಅಶ್ರಫ್ ಹಾಗೂ ಸ್ಥಳೀಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ದಿನದ ಮಹತ್ವದ ಕುರಿತು ಮಾತನಾಡಿದರು.

ಶಾಲೆಯ ಗ್ರಂಥಾಲಯಕ್ಕೆ ನಿವೃತ ಕರ್ನಲ್ ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ ರೂ. ೧೦ ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನೀಡಿದರು.

ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿಗೀತೆ, ನಾಡಗೀತೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಅತಿಥಿಗಳು ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಹುಮಾನ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರತ್ನ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನೋದ್ ನಾಣಯ್ಯ, ಸದಸ್ಯರಾದ ರಾಜೇಶ್ ಅಚ್ಚಯ್ಯ, ಈರಪ್ಪ, ಪುಷ್ಪ, ವಾಣಿ, ಮಂಜುಳಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಭವ್ಯ, ಶಿಕ್ಷಕಿ ದಮಯಂತಿ, ಪೋಷಕರು, ವಿದ್ಯಾರ್ಥಿಗಳು ಮತಿತ್ತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಜಯಪ್ರದ ನಿರೂಪಿಸಿ, ಸತ್ಯಮ್ಮ ವಂದಿಸಿದರು.

ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆ ಸೋಮವಾರಪೇಟೆ: ಕರ್ನಾಟಕ ಟ್ಯಾಕ್ಸಿ ಡ್ರೆöÊರ‍್ಸ್ ಆರ್ಗನೈಜೇಷನ್ ವತಿಯಿಂದ ೭೫ನೇ ಗಣರಾಜ್ಯೋತ್ಸವ ಸಮಾರಂಭ ಹಾಗೂ ಚಾಲಕ ಚೈತನ್ಯೋಭವ ಸಮಾವೇಶ, ರಾಜ್ಯಮಟ್ಟದ ಮುಕ್ತ ನೃತ್ಯ ಸ್ಪರ್ಧೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು.

ಚಾಲಕ ಚೈತನ್ಯೋಭವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಕೆಟಿಡಿಓ ರಾಜ್ಯ ಸಮಿತಿ ಸಹಕಾರ್ಯದರ್ಶಿ ಮಹಮ್ಮದ್ ಹುಸೇನ್ ಮಾತನಾಡಿ, ಇಂದಿಗೂ ಹೆಚ್ಚಿನವರು ಬಿಳಿ ಬೋರ್ಡ್ ವಾಹನಗಳನ್ನು ಬಾಡಿಗೆಗೆ ಕೊಂಡೊಯ್ಯುತ್ತಿರುವುದು ಕಂಡುಬರುತ್ತಿದೆ. ಇದು ಕಾನೂನು ಬಾಹಿರವಾಗಿದ್ದು, ಬಾಡಿಗೆ ಹೋಗುವ ಸಂದರ್ಭ ಅಪಘಾತವಾದಲ್ಲಿ ಅಪಘಾತಕ್ಕೀಡಾದವರಿಗೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂದರು.

ಬಾಡಿಗೆಗಾಗಿ ಹಳದಿ ಬೋರ್ಡ್ ವಾಹನಗಳಿದ್ದು, ಒಂದು ವೇಳೆ ಅಪಘಾತ ಸಂಭವಿಸಿದರೂ ಹೆಚ್ಚಿನ ಪರಿಹಾರ ಲಭಿಸಲಿದೆ. ಇದರಿಂದಾಗಿ ಸಾಕಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ ಎಂದರು.

ಕೆ.ಟಿ.ಡಿ.ಓ ಜಿಲ್ಲಾ ಗೌರವಾಧ್ಯಕ್ಷ ಪರಶುರಾಮ್ ಕಳ್ಳಿಚಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ದೇಶ ನಮಗೇನು ಮಾಡಿದೆ ಎನ್ನವುದಕ್ಕಿಂತಲೂ ದೇಶಕ್ಕಾಗಿ ನಾವೇನು ಮಾಡಿದ್ದೇವೆ ಎಂಬುದು ಮುಖ್ಯ. ಸಮಾಜಸೇವೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಿದಲ್ಲಿ ಮಾತ್ರ ನೊಂದವರ ಕಣ್ಣೀರು ಒರೆಸಲು ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಟಿಡಿಓ ತಾಲೂಕು ಘಟಕದ ಉಪಾಧ್ಯಕ್ಷ ಪಿ.ವಿ. ಕೃಷ್ಣ ವಹಿಸಿದ್ದರು. ವೇದಿಕೆಯಲ್ಲಿ ಸಾಹಿತಿಗಳಾದ ಜಲಾ ಕಾಳಪ್ಪ, ರಾಣಿ ರವೀಂದ್ರ, ಕೆ.ಟಿ.ಡಿ.ಓ. ರಾಜ್ಯ ಸಮಿತಿ ಕಾರ್ಯದರ್ಶಿಗಳಾದ ಎಸ್.ಆರ್. ಪ್ರಸನ್ನ, ವೀರಾಜಪೇಟೆ ಸಲಹೆಗಾರರಾದ ರಫೀಕ್, ಪ್ರಮುಖರಾದ ರಾಧ, ಮಂಜುನಾಥ್, ಗುರು ಕುಂದಾಪುರ, ರೆಜೀನ ಹಣಕೋಡು, ತಮಿಳುನಾಡು, ಕೇರಳ ಹಾಗೂ ಪಾಂಡಿಚೇರಿಯ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೆಟಿಡಿಓ ಸಂಘಟನೆಯ ತಾಲೂಕು ಅಧ್ಯಕ್ಷ ಬಿ.ವಿ. ರವಿ, ಖಜಾಂಚಿ ಕೆ.ಎನ್. ದೀಪಕ್, ಸಹ ಕಾರ್ಯದರ್ಶಿ ಭರತ್ ಮಾದಪ್ಪ, ಗೌರವಾಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಆರ್. ಪ್ರಸನ್ನ ಸೇರಿದಂತೆ ಇತರರು ಕಾರ್ಯಕ್ರಮ ನಿರ್ವಹಿಸಿದರು.

ನಂತರ ಸ್ಥಳೀಯ ಕಲಾವಿದರನ್ನು ಒಳಗೊಂಡಿರುವ ವಿಶ್ವರೂಪ ವಾದ್ಯಗೊಷ್ಠಿ ಕಲಾ ತಂಡದವರಿAದ ರಸಮಂಜರಿ ಕಾರ್ಯಕ್ರಮ ಹಾಗೂ ೧೪ ವರ್ಷ ಒಳಪಟ್ಟ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ನೃತ್ಯೋತ್ಸವ ಕಾರ್ಯಕ್ರಮಗಳು ನಡೆದವು.

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕೂಡಿಗೆ: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಕಾವಲು ಪಡೆ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಕೃಷ್ಣ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಂಡು ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಂಜೆ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಮಡಿಕೇರಿ ಕ್ಷೇತ್ರ ಶಾಸಕರು ಮಂಥರ್ ಗೌಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ನಂತರ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಗ್ರಾಮದ ಜನರು ಕೈ ಜೋಡಿಸಬೇಕೆಂದು ಕರೆ ನೀಡಿದರು.

ಕಾವಲುಪಡೆ ಜಿಲ್ಲಾಧ್ಯಕ್ಷ ಶಾಸಕರಲ್ಲಿ ಖಾಸಗಿ ಶಾಲೆಯ ವ್ಯಾಮೋಹದಿಂದ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಕಡಿಮೆಯಾಗುತ್ತಿವೆ. ಆದ್ದರಿಂದ ಮುಂದಿನ ವರ್ಷದಿಂದ ಮುಳ್ಳುಸೋಗೆ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದ ಎಲ್.ಕೆ.ಜಿ. ಪ್ರಾರಂಭ ಮಾಡಲು ಸಹಕಾರ ನೀಡಬೇಕೆಂದು ಮನವಿ ಸಲ್ಲಿಸಿದರು. ಶಾಸಕರು ಸ್ಪಂದಿಸಿ ಮುಂದಿನ ವರ್ಷದಿಂದ ಪ್ರಾರಂಭ ಮಾಡುವುದಕ್ಕೇ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಭಾಗ್ಯ, ಸಹ ಶಿಕ್ಷಕರ ವೃಂದ ಹಾಜರಿದ್ದರು. ರಾಗಿಣಿ ಸ್ವಾಗತಿಸಿ, ಶಿಕ್ಷಕಿ ಮೇರಿ ಮಾರ್ಗರೇಟ್ ವಂದಿಸಿದರು.

ನಿವೃತ್ತ ಸೈನಿಕರಿಗೆ ಸನ್ಮಾನ ಕರಿಕೆ: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ೭೫ನೇ ವರ್ಷದ ಗಣರಾಜೋತ್ಸವ ಧ್ವಜಾರೋಹಣ ಅದ್ದೂರಿಯಾಗಿ ಆಚರಿಸಲಾಯಿ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ನಂತರ ಜಿಲ್ಲೆಯ ಗಡಿ ಪ್ರದೇಶದ ಚೆಂಬೇರಿಯಿAದ ಎಳ್ಳುಕೊಚ್ಚಿವರೆಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹತ್ತಾರು ವಾಹನಗಳ ಜಾಥಾ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕಲ್ಪನಾ ಜಗದೀಶ್, ಅಭಿವೃದ್ಧಿ ಅಧಿಕಾರಿ ಗಣಪತಿ ಪಿ.ಪಿ., ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷ ಬೇಕಲ್ ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕರು, ಶಾಲಾ ಸಲಹಾ ಸಮಿತಿ ಪದಾಧಿಕಾರಿಗಳು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಸೋಮವಾರಪೇಟೆ: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು.

ಸೋಮವಾರಪೇಟೆ ಪಟ್ಟಣದ ನಿವೃತ್ತ ಕ್ಯಾಪ್ಟನ್ ಪಿ.ಎನ್. ಮುತ್ತಣ್ಣ, ಕರ್ಕಳ್ಳಿ ಗ್ರಾಮದ ಹವಾಲ್ದಾರ್ ದಿ. ನಾರಾಯಣ ಬಿ.ವಿ. ಅವರ ಪತ್ನಿ ಶಶಿಕಲಾ ಎನ್. ರೈ ಅವರುಗಳನ್ನು ಪ್ರಮುಖರು ಸನ್ಮಾನಿಸಿದರು.

ಈ ಸಂದರ್ಭ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್, ತಾ.ಪಂ. ಇ.ಓ. ಜಯಣ್ಣ, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ಗೀತಾ, ಬಿ.ಇ.ಓ. ಭಾಗ್ಯಮ್ಮ ಸೇರಿದಂತೆ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.ಶನಿವಾರಸಂತೆ: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿAದ ಆಚರಿಸಲಾಯಿತು.

ಸಂಸ್ಥೆಯ ಹಿರಿಯ ಶಿಕ್ಷಕಿ ಆಶಾ ಧ್ವಜಾರೋಹಣ ನೆರವೇರಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ನಂತರ ನಡೆದ ಸರಳ ಸಮಾರಂಭದಲ್ಲಿ ಶಿಕ್ಷಕ ಯೋಗೇಶ್ ಮಾತನಾಡಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿ, ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ ಮಾತನಾಡಿದರು. ಶಿಕ್ಷಕ ವೃಂದದವರು ಹಾಗೂ ಪೋಷಕರು ಹಾಜರಿದ್ದರು.

ಕುಶಾಲಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೂಡಿಗೆ: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲೆಯ ಹಿರಿಯ ಶಿಕ್ಷಕಿ ರೇಖಾ ಫರ್ನಾಂಡಿಸ್, ನೆರವೇರಿಸಿದರು. ದಿನದ ಮಹತ್ವದ ಕುರಿತು ಶಾಲಾ ಮುಖ್ಯ ಶಿಕ್ಷಕಿ ವೀಣಾ ವಿಜಯ ಕಾಸ್ಟಲಿನೋ ಮಾತನಾಡಿದರು.

ಈ ಸಂದರ್ಭ ವಿದ್ಯಾರ್ಥಿಗಳಿಂದ ಅತ್ಯಾಕರ್ಷಕ ಪಥಸಂಚಲನ ನಡೆಯಿತು. ವಿದ್ಯಾರ್ಥಿಗಳಿಂದ, ವಿವಿಧ ಸಂಸ್ಕೃತಿಗಳ ಕಲಾ ತಂಡಗಳಿAದ ಭಾಷಣ ಸೇರಿದಂತೆ ನೃತ್ಯ ಪ್ರದರ್ಶನ ನೀಡಿದರು. ವಿದ್ಯಾರ್ಥಿಗಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ಸಂದರ್ಭ ಶಾಲಾ ಶಿಕ್ಷಕರ ವೃಂದ, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಸಿದ್ದಾಪುರ ಗ್ರಾಮ ಪಂಚಾಯಿತಿ *ಗೋಣಿಕೊಪ್ಪ: ಬಾಳೆಲೆ ವಿಜಯಲಕ್ಷಿö್ಮ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಧ್ವಜಾರೋಹಣ ನೆರವೇರಿಸಿದರು. ಬಾಳೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುಕ್ಕಾಟಿರ ಜಾನಕಿ ಕಾವೇರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಅದೇಂಗಡ ವಿನು ಉತ್ತಪ್ಪ, ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಉಪಾಧ್ಯಕ್ಷರುಗಳಾದ ಕಿರುದಂಡ ದೇವಯ್ಯ, ಕಾಯಮಾಡ ರಾಜ, ಸಹ ಕೋಶಾಧಿಕಾರಿ ಅಲೇಮಾಡ ಕರುಂಬಯ್ಯ, ಪ್ರಾಂಶುಪಾಲ ಪ್ರಭು, ಮುಖ್ಯ ಶಿಕ್ಷಕ ಚಂದ್ರಶೇಖರ್ ಇದ್ದರು.

ಸಂಪಾಜೆ ಜಿಲ್ಲಾ ಕೇಂದ್ರ ಬ್ಯಾಂಕ್ ನಿವೃತ್ತ ಸರ್ಕಾರಿ ನೌಕರರ ಸಂಘ

ಮಡಿಕೇರಿ: ಕೊಡಗು ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ ಮತ್ತು ಬಳಕೆದಾರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಸಂಘದ ಅಧ್ಯಕ್ಷರಾದ ಬಿ.ಬಿ. ಮಾದಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು.

ರಾಮ ಟ್ರಸ್ಟ್ ವಿದ್ಯಾಸಂಸ್ಥೆನಾಪೋಕ್ಲು: ಇಲ್ಲಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೊ. ಕಲ್ಯಾಟಂಡ ಪೂಣಚ್ಚ ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ದೇಶಕ ಅಪ್ಪಾರಂಡ ಅಪ್ಪಯ್ಯ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಕಲ್ಯಾಟಂಡ ಶಾರದಾ ಅಪ್ಪಣ್ಣ ಉಪಸ್ಥಿತರಿದ್ದು ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ರಸಪ್ರಶ್ನೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ನಾಪೋಕ್ಲು: ಇಲ್ಲಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೊ. ಕಲ್ಯಾಟಂಡ ಪೂಣಚ್ಚ ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ದೇಶಕ ಅಪ್ಪಾರಂಡ ಅಪ್ಪಯ್ಯ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಕಲ್ಯಾಟಂಡ ಶಾರದಾ ಅಪ್ಪಣ್ಣ ಉಪಸ್ಥಿತರಿದ್ದು ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ರಸಪ್ರಶ್ನೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರೇಮ ಗೋಪಾಲ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪಳನಿ ಸ್ವಾಮಿ, ಕಾರ್ಯದರ್ಶಿ ಮೋಹನ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು.ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕ್ ಸಂಪಾಜೆಯ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಬ್ಯಾಂಕಿನ ಆವರಣದಲ್ಲಿ ೭೫ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಪಯಸ್ವಿನಿ ಸೊಸೈಟಿ ಅಧ್ಯಕ್ಷ ಅನಂತ್ ಊರುಬೈಲು ಧ್ವಜಾರೋಹಣ ಮಾಡಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಕೆ.ಜಿ. ಶ್ರೀನಿವಾಸ್ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಸೊಸೈಟಿ ಉಪಾಧ್ಯಕ್ಷ ರಾಜಾರಾಮ ಕಳಗಿ, ನಿರ್ದೇಶಕರಾದ ಯಶವಂತ, ಡಿಸಿಸಿ ಬ್ಯಾಂಕ್ ಸಿಬ್ಬಂದಿಗಳು, ಸೊಸೈಟಿ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.