ವೀರಾಜಪೇಟೆ, ಜ. ೩೧: ವೀರಾಜಪೇಟೆ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಮಹಾಗಣಪತಿ ಆಂಜನೇಯ ದೇವಸ್ಥಾನ ಬಳಿಯ ನಾಟ್ಯಮಯೂರಿ ನೃತ್ಯ ಶಾಲೆಯ ವತಿಯಿಂದ ಫೆ. ೪ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣ ಕನ್ನಡ ಭವನ ನಯನ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಹಾಗೂ ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ನಾಟ್ಯಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ವಿದುಷಿ ಪ್ರೇಮಾಂಜಲಿ ಆಚಾರ್ಯ ತಿಳಿಸಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವೀರಾಜಪೇಟೆ, ಹುಣಸೂರು, ಪಿರಿಯಾಪಟ್ಟಣ ಸೇರಿದಂತೆ ವಿವಿಧ ಕಡೆಗಳಿಂದ ನೃತ್ಯ ತಂಡಗಳು ಆಗಮಿಸಲಿದ್ದು, ನೃತ್ಯ ಪ್ರದರ್ಶನ ನೀಡಲಿವೆ. ಗೋಷ್ಠಿಯಲ್ಲಿ ಟ್ರಸ್ಟಿ ಎಂ.ಪಿ. ಪುಷ್ಪಲತಾ ಶಿವಪ್ಪ, ಶಿಕ್ಷಕರಾದ ಲವಿನ್ ಲೋಪೆಸ್, ದೀಪಕ್ ವಿ.ಪಿ, ಧರ್ಮದರ್ಶಿ ಬಾಬಾಶಂಕರ್ ಇದ್ದರು.