ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟçದ ಕೂಗು ಎತ್ತಿದ ಸಂಸದ ಡಿ.ಕೆ. ಸುರೇಶ್

ಬೆಂಗಳೂರು, ಫೆ. ೧: ಕೇಂದ್ರ ಸರ್ಕಾರದಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು, ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟçದ ಕೂಗು ಎತ್ತಿದ್ದಾರೆ. ಈ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಇಂದು ಕೇಂದ್ರ ಬಜೆಟ್ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ. ಸುರೇಶ್ ಅವರು, ದಕ್ಷಿಣ ಭಾರತದ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ಅನ್ಯಾಯವಾಗುತ್ತಿದೆ ಎಂದರು. ನಮ್ಮ ರಾಜ್ಯಗಳ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟçದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟçದ ಕೂಗು ಎತ್ತಬೇಕಾಗುತ್ತದೆ ಮತ್ತು ಮುಂದೆ ದಕ್ಷಿಣ ಭಾರತದ ರಾಜ್ಯಗಳು ಪ್ರತ್ಯೇಕ ರಾಷ್ಟçದ ಕೂಗು ಎತ್ತಲಿವೆ ಎಂದು ಕಾಂಗ್ರೆಸ್ ಸಂಸದ ಹೇಳಿದ್ದಾರೆ. ಪ್ರತ್ಯೇಕ ರಾಷ್ಟçದ ಕೂಗು ಏಳುವ ಮುನ್ನವೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ತೆರಿಗೆ ಹಣವನ್ನು ದಕ್ಷಿಣ ಭಾರತಕ್ಕೇ ಖರ್ಚು ಮಾಡಬೇಕು. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.

ಹೇಮಂತ್ ಸೋರೆನ್‌ಗೆ ಒಂದು ದಿನ ನ್ಯಾಯಾಂಗ ಬಂಧನ

ರಾAಚಿ, ಫೆ. ೧: ಭೂ ಹಗರಣಕ್ಕೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆರೋಪಿಯನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡುವ ಬಗ್ಗೆ ಶುಕ್ರವಾರ ನಿರ್ಧರಿಸಲಿದೆ. ತೀವ್ರ ವಿಚಾರಣೆಯ ಬಳಿಕ ನಿನ್ನೆ ತಡರಾತ್ರಿ ಸೋರೆನ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ರಾಂಚಿ ವಿಶೇಷ ಕೋರ್ಟ್ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ಆರೋಪಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಶುಕ್ರವಾರದ ನಂತರ ೧೦ ದಿನಗಳ ಕಸ್ಟಡಿಗೆ ನೀಡುವ ಇಡಿ ಕೋರಿಕೆಯ ಕುರಿತು ನ್ಯಾಯಾಲಯ ಆದೇಶ ನೀಡುವ ಸಾಧ್ಯತೆಯಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೋರೆನ್ ಅವರು ರಾಜ್ಯದಲ್ಲಿ ನಡೆದ ೬೦೦ ಕೋಟಿ ಭೂ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ.

ಬೈಯಪ್ಪನಹಳ್ಳಿ ಮೇಲ್ಸೇತುವೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಬೆಂಗಳೂರು, ಫೆ. ೧: ಬೆಂಗಳೂರಿನ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ಮತ್ತು ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹೆಚ್ಚುವರಿ ದ್ವಿಪಥದ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಅಂದಾಜು ೨೬೩ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎರಡು ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು, ಬೆಂಗಳೂರು ನಗರದ ರಸ್ತೆಗಳ ವೈಟ್‌ಟಾಪ್‌ಗೆ ೧,೨೦೦ ಕೋಟಿ ರೂಪಾಯಿ ನೀಡಲು ಅನುಮೋದನೆ ನೀಡಲಾದೆ ಎಂದರು. ಬಿಬಿಎಂಪಿ ವ್ಯಾಪ್ತಿಗೆ ಹೊಸ ಸೇರ್ಪಡೆಗೊಂಡಿರುವ ೧೧೦ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಗ್ರಾಮಗಳನ್ನು ೨೦೦೬ರಲ್ಲಿಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಲಾಗಿತ್ತು ಎಂದರು.

ಆನ್‌ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ

ಬೆಂಗಳೂರು, ಫೆ. ೧: ಆನ್‌ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ ಕಲ್ಪಿಸಲು ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಗುರುವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಹೆಚ್.ಕೆ. ಪಾಟೀಲ್, ವಿವಾಹ ನೋಂದಣಿ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ನೀಡಿದ್ದು, ಹಿಂದೂ ವಿವಾಹ ನೊಂದಣಿ ಕಾಯ್ದೆ ೨೦೨೪ಕ್ಕೆ ಒಪ್ಪಿಗೆ ಸೂಚಿಸಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮೊದಲು ವಿವಾಹ ನೋಂದಣಿ ಆಗುತ್ತಿದ್ದವು. ಈಗ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶವಿದೆ. ಗ್ರಾಮ ೧, ಕಾವೇರಿ ೨, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಬಹುದು. ಇನ್ನು ಮುಂದೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ ಎಂದು ಹೇಳಿದ್ದಾರೆ. ಇನ್ನು ರಾಯಚೂರು ವಿವಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ೧೦೪ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ರೂ. ೨೬ ಕೋಟಿ ಅನುಮೋದನೆ ಮತ್ತು ಅಸ್ತಿತ್ವದಲ್ಲಿರುವ ೮೨ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೂ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆಗಳಲ್ಲಿ ೧೦ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ೨೪ ಸೇರಿದಂತೆ ಒಟ್ಟು ೩೪ ಆಧುನಿಕ ಅನಿಲ ವಿದ್ಯುತ್ ಚಿತಾಗಾರ ಸ್ಥಾಪನೆಗೆ ರೂ. ೩೬ ಕೋಟಿ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ ರೂ. ೧೪೨ ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.