ಸಿದ್ದಾಪುರ, ಫೆ.೧: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯ ರ್ಥಿಯಾಗಿದ್ದ ಡಾ. ಮಂಥರ್ ಗೌಡ ಗೆಲುವು ಸಾಧಿಸಬೇ ಕೆಂದು ನೆಲ್ಲಿಹುದಿ ಕೇರಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯ ಕರ್ತರು ಶ್ರೀ ಸತ್ಯ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಶಾಸಕ ಮಂಥರ್ಗೌಡ ಶ್ರೀ ಸತ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸುವ ಮೂಲಕ ಹರಕೆ ತೀರಿಸಿದರು.
ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸುವ ಭರವಸೆ ನೀಡಿದರು. ಈ ಸಂದರ್ಭ ಮಾಜಿ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಿರ್ವಾಣಿ ವಿಜು, ವಸಂತ್ಕುಮಾರ್, ಗ್ರಾಮಸ್ಥರಾದ ಕೆ.ಎನ್. ವಾಸು, ರಘು, ದೇವಸ್ಥಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.