ಮಡಿಕೇರಿ, ಫೆ. ೧: ಮರಗೋಡುವಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಮೊದಲನೇ ವರ್ಷದ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜದ ಏಳು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಿವೃತ್ತ ಯೋಧ ಹಾಗೂ ಫುಟ್ಬಾಲ್ ಆಟಗಾರ ಶ್ರೀನಿವಾಸ್ (ಸತ್ಯ), ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಮಡಿಕೇರಿ, ಫೆ. ೧: ಮರಗೋಡುವಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಮೊದಲನೇ ವರ್ಷದ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜದ ಏಳು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಿವೃತ್ತ ಯೋಧ ಹಾಗೂ ಫುಟ್ಬಾಲ್ ಆಟಗಾರ ಶ್ರೀನಿವಾಸ್ (ಸತ್ಯ), ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಆಟಗಾರ ಅಮ್ಮತ್ತಿಯ ವಿಜೇಶ್ ಎಂ.ಎA. (ವಿಜು) ಹಾಗೂ ರಾಷ್ಟಿçÃಯ ಮಟ್ಟದ ಅಥ್ಲೀಟ್ ಮರಗೋಡುವಿನ ಮಿಲನ್ ಎಂ.ಸಿ. ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸಂಸ್ಥಾಪಕ ದರ್ಶನ್ ಸುಕುಮಾರ್ ಮರಗೋಡು, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್ ಕಂಡಕರೆ, ಮಡಿಕೇರಿ ತಾಲೂಕು ಮಲಯಾಳಿ ಸಮಾಜದ ಅಧ್ಯಕ್ಷ ಕೆ.ಎಸ್. ರಮೇಶ್, ಕೊಡಗು ಹಿಂದೂ ಮಲಯಾಳಿ ಸಮಾಜದ ಟಿ.ಆರ್. ವಾಸುದೇವ್ ಕಡಗದಾಳು, ಎಸ್.ಎನ್.ಡಿ.ಪಿ. ಅಧ್ಯಕ್ಷ ವಿ.ಕೆ. ಲೋಕೇಶ್, ಸಿದ್ದಾಪುರ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಮರಗೋಡು ಹಾಗೂ ಇತರ ಪ್ರಮುಖರು ಇದ್ದರು.