ನಾಪೋಕ್ಲು, ಫೆ. ೧: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಸಮೀಪದ ಹೊದ್ದೂರಿನಲ್ಲಿ ನಡೆಯಿತು.
ಗ್ರಾಮದ ಯುವಕರ ಬೈಕ್ ಜಾಥಾ ಹಾಗೂ ಸಂಜೀವಿನಿ ಒಕ್ಕೂಟದ ಕಳಶದೊಂದಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಜಾಥಾಕ್ಕೆ ಸ್ವಾಗತ ಕೋರಿದರು.
ಸಾರ್ವಜನಿಕ ಸಭೆಯನ್ನು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು. ಸಂವಿಧಾನದ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶೈಲ ದೇಸಾಯಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ, ತಾಲೂಕು ನೋಡಲ್ ಅಧಿಕಾರಿ ಹರ್ಷವರ್ಧನ್ ಸಂವಿಧಾನ ಜಾಥಾ ಮಹತ್ವದ ಕುರಿತು ಮಾತನಾಡಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರಾದ ಅನುರಾಧ, ಸದಸ್ಯರಾದ ಮೊಣ್ಣಪ್ಪ, ಹಮೀದ್, ಕುಸುಮಾವತಿ, ಪಾರ್ವತಿ, ಟೈನಿ, ಕೆ.ಆರ್. ಅನಿತಾ, ಚೌರೀರ ಅನಿತಾ, ಲಕ್ಷಿö್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎ. ಅಬ್ದುಲ್ಲ, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತರು, ಗ್ರಾಮಸ್ಥರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ವಿಭಾಗಗಳಲ್ಲಿ ನಡೆಸಲಾದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್ ಸ್ವಾಗತಿಸಿ, ತಾರಾವತಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.