ನಾಪೋಕ್ಲು, ಫೆ. ೨: ಕುಂಡ್ಯೋಳAಡ ಕೊಡವ ಕೌಟುಂಬಿಕ ಹಾಕಿ ಉತ್ಸವ ೨೦೨೪ ರ ಯಶಸ್ವಿಯಾಗಿ ಸಂಘಟಿಸಲು ಕುಂಡ್ಯೋಳAಡ ಕುಟುಂಬಸ್ಥರಿAದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹಾಕಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ್ ಮುದ್ದಯ್ಯ ಹೇಳಿದರು. ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮೈದಾನದ ಪೂರ್ವ ತಯಾರಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಕೊಡವ ಹಾಕಿ ಅಕಾಡೆಮಿಯ ಅನುಮತಿ ಮೇರೆಗೆ ಕೊಡವ ಕೌಟುಂಬಿಕ ಹಾಕಿ ಉತ್ಸವ ಏಪ್ರಿಲ್ ತಿಂಗಳಲ್ಲಿ ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಗ್ಯಾಲರಿ ನಿರ್ಮಾಣ ,ಮೈದಾನ ಸಿದ್ಧತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದಕ್ಕೂ ಮುನ್ನ ಮೈದಾನದ ಸಿದ್ಧತೆಗಾಗಿ ಭೂಮಿ ಪೂಜೆ ನೆರವೇರಿಸಿ ಯಾವುದೇ ವಿಘ್ನಗಳು ಬಾರದಂತೆ ಗುರು ಕಾರಣ ಹಾಗೂ ದೈವ ದೇವರುಗಳನ್ನು ಪ್ರಾರ್ಥಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಕುಟುಂಬದ ಪಟ್ಟೆದಾರ ಎಸ್ ಸುಬ್ಬಯ್ಯ ಅವರು ವಿಶೇಷ ಪ್ರಾರ್ಥನೆ ಮಾಡಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಹಾಕಿ ಉತ್ಸವದ ಸಂಚಾಲಕ ದಿನೇಶ್ ಕಾರ್ಯಪ್ಪ, ಖಜಾಂಚಿ ವಿಷು ಪೂವಯ್ಯ, ಕಾರ್ಯದರ್ಶಿ ಬಿಪಿನ್ ಬೆಳ್ಳಿಯಪ್ಪ, ಪಂದ್ಯಾವಳಿ ನಿರ್ದೇಶಕ ಅಂಜಪರವAಡ ಕುಶಾಲಪ್ಪ , ಕೆಪಿಎಸ್ ಶಾಲಾ ಪ್ರಾಂಶುಪಾಲರಾದ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲ ಶಿವಣ್ಣ ಎಂ.ಎಸ್, ಶಿಕ್ಷಕಿ
ಉಷಾರಾಣಿ ಹಾಗೂ ಕುಂಡ್ಯೋಳAಡ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಕೊಳಕೇರಿಯಲ್ಲಿರುವ ಕುಟುಂಬದ ಕೈಮಡ ಹಾಗೂ ಗ್ರಾಮ ದೇವತೆ ಶ್ರೀ ಭಗವತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು. ಪೂಜಾ ವಿಧಿ ವಿಧಾನಗಳನ್ನು ದೇವಾಲಯದ ಅರ್ಚಕ ಸೀತಾರಾಮ್ ಭಟ್ ನೆರವೇರಿಸಿದರು.