ಮಡಿಕೇರಿ: ಹೊದ್ದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ವಿನೋದಿನಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಗೌರವಿಸಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಮೂಡಿಸಬೇಕೆಂದರು.

ಶಾಲಾ ಮುಖ್ಯ ಶಿಕ್ಷಕಿ ಕೆ.ಎಂ. ಪಾರ್ವತಿ ಸ್ವಾಗತಿಸಿ, ದಿನದ ಮಹತ್ವದ ಕುರಿತು ಮಾತನಾಡಿದರು. ಶಿಕ್ಷಕಿ ಯು.ಆರ್. ಲತಾ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಭಾಷಣ ಮತ್ತು ದೇಶಭಕ್ತಿ ಗೀತೆಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪೋಷಕರು, ಮಕ್ಕಳು ಹಾಜರಿದ್ದರು.

ಮುಳ್ಳೂರು ಶಾಲೆೆ ಮುಳ್ಳೂರು: ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಸುರೇಶ್ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್ ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಕುರಿತು ವಿವರಿಸಿದರು.

ಗಣರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಭಾಷಣ ಮಾಡಿದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಪ್ರೇಮ ಪ್ರದರ್ಶಿಸುವಂತಹ ನೃತ್ಯಕ್ಕೆ ಹೆಜ್ಜೆ ಹಾಕಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಪೋಷಕರು, ಗ್ರಾಮದ ಪ್ರಮುಖರು ಹಾಜರಿದ್ದರು.

ಕೊಡಗು ಜಿಲ್ಲಾ ಬಸ್ ಕಾರ್ಮಿಕ ಸಂಘಕೂಡಿಗೆ: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜುವಿನಲ್ಲಿ ೭೫ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ ನೆರವೇರಿಸಿದರು. ನಂತರ ನಡೆದ ಸಭೆಯ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ವಹಿಸಿದ್ದರು. ದಿನದ ಮಹತ್ವವನ್ನು ಕುರಿತು ಅಭಿವೃದ್ಧಿ ಸಮಿತಿಯ ಸದಸ್ಯ ಜನಾರ್ಧನ್ ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ಮತ್ತು ದೇಶಭಕ್ತಿ ಗೀತೆಗಳು ಸೇರಿದಂತೆ ಸಾಂಸ್ಕೃತಿಗಳ ಕಾರ್ಯಕ್ರಮಗಳು ನಡೆದವು.

ಬೋಟೋಳಿ ಗ್ರಾಮ ಪಂಚಾಯಿತಿ ವೀರಾಜಪೇಟೆ: ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಬೇಟೋಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ ಹೇಳಿದರು.

ಬೋಟೋಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಹೆಗ್ಗಳ ಗ್ರಾಮದ ನಿರ್ಮಲಗಿರಿ ನಿವಾಸಿ ಬಿ.ವೈ. ಜನಾರ್ಧನ ಅವರಿಗೆ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮಣಿ, ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಜಾಗೃತಿ ಕಾರ್ಯಕ್ರಮಗಳು ಅವಶ್ಯಕವೆಂದರು.

ಸನ್ಮಾನ ಸ್ವೀಕರಿಸಿದ ಜನಾರ್ಧನ ಅವರು ಮಾತನಾಡಿ, ಎಲ್ಲಿ ಕಸಗಳು ಕಾಣುತ್ತದೆಯೋ ಅದನ್ನು ಸಂಗ್ರಹಿಸಿ ಪಂಚಾಯಿತಿಯ ಕಸ ಸಂಗ್ರಹ ಘಟಕಕ್ಕೆ ನೀಡುತ್ತೇನೆ. ಅವರು ಹಸಿ ಕಸ, ಒಣ ಕಸ ಎಲ್ಲವನ್ನು ವಿಂಗಡಣೆ ಮಾಡಿ ಸೂಕ್ತ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೆ. ದಿನ ದಿನಕ್ಕೆ ಕಸ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜು ಮಕ್ಕಳಿಗೆ ಕಂಡ ಕಂಡಲ್ಲಿ ಕಸ ಬಿಸಾಡದಂತೆ ಜಾಗೃತಿ ಮೂಡಿಸುವುದು ಉತ್ತಮ ಎಂದರು.

ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಂ. ಬೋಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಕೆ.ಹೆಚ್. ಅಲೀಮಾ, ಸದಸ್ಯರುಗಳಾದ ಎ.ಎ. ವಸಂತ ಕಟ್ಟಿ, ಪಿ.ಬಿ. ಚಂಗಪ್ಪ, ಎಂ.ಎA. ರಜಾಕ್, ಬಿ.ಜೆ. ಯಶೋಧ, ಎಂ.ಎA. ರಂಜಿತ್, ಸಿ.ಎಸ್. ಸುದೀಶ್, ಪಿ.ಕೆ. ಗೀತಾ, ಕೆ.ಆರ್. ಲತಾ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಂಥಾಲಯ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.