ಮಡಿಕೇರಿ: ಮಡಿಕೇರಿ ಮಹದೇವಪೇಟೆಯ ಸೋಮವಾರಪೇಟೆ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಬೆಳಿಗ್ಗೆ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಪ್ರಿಯಾ ಗುರುಕಿರಣ್ ಅವರು ಧ್ವಜಾರೋಹಣ ಮಾಡಿದರು. ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಹಾಗೂ ಟಿ.ಆರ್. ಜೀವನ್, ಸೀತಾ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಶಿಕ್ಷಕಿ ಸುಮಿತ್ರಾ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಮಕ್ಕಳಿಗೆ ಸಿಹಿಯನ್ನು ಹಂಚಲಾಯಿತು.
ದೇವಣಗೇರಿ ಬಿ.ಸಿ. ಪ್ರೌಢಶಾಲೆಕಡಂಗ: ಕಡಂಗ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಿತು. ಸ್ಥಳೀಯ ದಾನಿಗಳಾದ ಉದಿಯಂಡ ಡಿ. ಚಂಗಪ್ಪ, ಕೆ. ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭಾಷಣ ನಡೆಯಿತು. ಈ ಸಂದರ್ಭ ಉದಿಯಂಡ ಚಂಗಪ್ಪ, ಪ್ರಕಾಶ್, ಡಾ. ಶೈಲಜಾ ನಲಿಕಲಿ ಕೊಠಡಿಗೆ ಸೌಜನ್ಯ ಬಳಗದಿಂದ ನಿರ್ಮಿಸಿರುವ ನೆಲಹಾಸು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನೆರೆದಿರುವವರನ್ನು ಶಾಲಾ ಮುಖ್ಯಶಿಕ್ಷಕಿ ಶಾಂತಿಕುಮಾರಿ, ಪಿ.ಎಂ. ಸ್ವಾಗತಿಸಿದರು. ದಿನದ ಮಹತ್ವವನ್ನು ವತ್ಸಲಾ ತಿಳಿಸಿಕೊಟ್ಟರು. ದತ್ತಿನಿಧಿ ಬಹುಮಾನ ವಿತರಣೆಯನ್ನು ಶಾಲಾ ಶಿಕ್ಷಕಿ ಬಬಿತಾ ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಕೆ.ಎಂ. ವಿಮಲ ಮಾಡಿ, ಶೋಭ ವಂದಿಸಿದರು.
ಸಿದ್ದಾಪುರ ಪ್ರೌಢಶಾಲೆ ಸಂಪಾಜೆ: ಸಂಪಾಜೆ ಪದವಿಪೂರ್ವ ಕಾಲೇಜು ಹಾಗೂ ಲಯನ್ಸ್ ಕ್ಲಬ್ ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಎಂ. ಶಂಕರ ನಾರಾಯಣ ಭಟ್ ಧ್ವಜಾರೋಹಣ ಮಾಡಿ, ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಯು.ಬಿ. ಚಕ್ರಪಾಣಿ, ಸಂಸ್ಥೆಯ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಸಂಪಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮ್ಮದ್ ಹನೀಫ್ ಎಸ್.ಕೆ., ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಯೋಗೇಶ್ವರ ಹಾಗೂ ಕ್ಲಬ್ನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಲೋಕ್ಯಾನಾಯ್ಕ್ ಬಿ. ಸ್ವಾಗತಿಸಿದರು. ಮುಖ್ಯಶಿಕ್ಷಕ ಎ. ಐತ್ತಪ್ಪ ವಂದಿಸಿದರು. ಸಂಸ್ಥೆಯ ಎಲ್ಲಾ ಬೋಧಕ-ಬೋಧಕೇತರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮದಲಾಪುರ ಶಾಲೆಮಡಿಕೇರಿ: ಕಡಗದಾಳು ಸಮೀಪದ ಶ್ರೀ ಬೊಟ್ಲಪ್ಪ ಯುವ ಸಂಘದ ವತಿಯಿಂದ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಧ್ವಜಾರೋಹಣವನ್ನು ಯುವ ಸಂಘದ ಮಹಿಳಾ ಉಪಾಧ್ಯಕ್ಷೆ ದೀಪ ಉದಯಕುಮಾರ್ ನೆರವೇರಿಸಿದರು. ಇವರೊಂದಿಗೆ ಯುವ ಸಂಘದ ಉಪಾಧ್ಯಕ್ಷ ಎಂ.ಎನ್. ಹರೀಶ್ ಕುಮಾರ್ ಉಪಸ್ಥಿತರಿದ್ದರು. ಗಣರಾಜ್ಯೋತ್ಸವದ ಬಗ್ಗೆ ಯುವ ಸಂಘದ ಖಜಾಂಚಿ ಅವಿನಾಶ್ ಬೊಟ್ಲಪ್ಪ ಮಾತನಾಡಿದರು.
ಸಂತ ಅನ್ನಮ್ಮ ವಿದ್ಯಾಸಂಸ್ಥೆ ಮಡಿಕೇರಿ: ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಚೇಂದAಡ ಜಿ. ಪೊನ್ನಪ್ಪ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಖಜಾಂಚಿ ಅಲ್ಲಪಂಡ ಎ. ಉತ್ತಪ್ಪ ಧ್ವಜಾರೋಹಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿ ಕಾರ್ಯನಿರ್ವಾಹಕ ಕರ್ನಂಡ ಎನ್. ಬೊಳ್ಳಮ್ಮ ಆಗಮಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಬಿ.ಎಸ್. ಪೂಣಚ್ಚ ಮಾತನಾಡಿ, ಸಂವಿಧಾನದ ಆಶಯಗಳ ಬಗ್ಗೆ ಮಾಹಿತಿಯಿತ್ತರು.
ಚೇಂದAಡ ಜಿ. ಪೊನ್ನಪ್ಪ ಮಾತನಾಡಿ, ವಿದ್ಯಾರ್ಥಿಗಳು ಗುರು-ಹಿರಿಯರಿಗೆ ಹಾಗೂ ಜನ್ಮ ನೀಡಿದ ತಂದೆ-ತಾಯಿಗೆ ಹಾಗೂ ದೇಶಕ್ಕೆ ಸದಾ ಗೌರವ ನೀಡಬೇಕೆಂದರು.
ಶಾಲಾ ಆಡಳಿತ ಮಂಡಳಿ ಆಡಳಿತಾಧಿಕಾರಿ ಪಿ.ಎ. ಲಕ್ಷಿö್ಮÃನಾರಾಯಣ, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಜರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಸ್ವಾಗತಿಸಿದರು. ವೈ. ಪ್ರಮೀಳಾ ಕುಮಾರಿ ನಿರೂಪಿಸಿ, ಶಿಕ್ಷಕಿ ಎಸ್. ನಂದಿನಿ ವಂದಿಸಿದರು.
ಕ್ರೀಡೋತ್ಸವದಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸುಂಟಿಕೊಪ್ಪ ಆಟೋ ಚಾಲಕರ-ಮಾಲೀಕರ ಸಂಘ ಸಿದ್ದಾಪುರ: ಸಿದ್ದಾಪುರ ಪ್ರೌಢಶಾಲೆಯಲ್ಲಿ ನೂತನವಾಗಿ ಮರು ನಿರ್ಮಾಣಗೊಂಡ ಧ್ವಜಸ್ತಂಭದ ದಾನಿ ಪೆರುಬಾಯಿ ರಾಜಕುಮಾರ್ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ವಕೀಲ ವೆಂಕಟೇಶ್, ಶಾಲೆಯ ಅಧ್ಯಕ್ಷ ಕುಶಾಲಪ್ಪ, ಕಾರ್ಯದರ್ಶಿ ಅಚ್ಚಯ್ಯ, ಸದಸ್ಯರುಗಳಾದ ಸುಬ್ಬಯ್ಯ, ನಾಣಯ್ಯ, ಉಜ್ವಲ್, ಡೈನ ಸೋಮಯ್ಯ, ಮುಖ್ಯ ಶಿಕ್ಷಕರು ಅಧ್ಯಾಪಕರು, ಪೋಷಕರು, ಮಕ್ಕಳು ಹಾಜರಿದ್ದರು.ಕೂಡಿಗೆ: ಇಲ್ಲಿಗೆ ಸಮೀಪದ ಮದಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಎಂ. ರೇಣುಕಾ ನೆರವೇರಿಸಿದರು. ನಂತರ ದಿನದ ಮಹತ್ವವನ್ನು ಕೂಡಿಗೆ ಕ್ಲಸ್ಟರ್ನ ಸಿ.ಆರ್.ಪಿ. ಶಾಂತಕುಮಾರ್ ತಿಳಿಸಿದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ನಂತರ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಚಿಮ್ಮಿ ಸೇರಿದಂತೆ ಸದಸ್ಯರು, ಸಹ ಶಿಕ್ಷಕರಾದ ಆರಿಫಾಭಾನು, ಗ್ರಾಯಿತ್ರಿ, ವೀಣಾ, ಮಧುಸೂದನ್, ದೈಹಿಕ ಶಿಕ್ಷಣ ಶಿಕ್ಷಕ ಸುಂದರ್, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ವೀರಾಜಪೇಟೆ: ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಧ್ವಜಾರೋಹಣವನ್ನು ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಗಣರಾಜ್ಯೋತ್ಸವದ ಸಂದೇಶ ನೀಡಿದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ಮಾತನಾಡಿ, ನಮ್ಮ ಸಂವಿಧಾನವು ನಮ್ಮ ಹೆಮ್ಮೆಯಾಗಿದ್ದು ಅದನ್ನು ವಿವಿಧ ರಾಷ್ಟçಗಳ ಅಲಿಖಿತ ಸಂವಿಧಾನವನ್ನು ಪರಿಶೀಲಿಸಿ ರಚಿಸಲಾಗಿದೆ. ಭಾರತವು ಬೃಹತ್ ಪ್ರಜಾಪ್ರಭುತ್ವ ರಾಷ್ಟçವೂ ಆಗಿದೆ. ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಗೌರವಿಸಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಮೂಡಿಸಬೇಕು. ಪ್ರಸ್ತುತದಲ್ಲಿ ಇರುವ ಜಾತೀಯತೆ, ಮತಾಂಧತೆ ಮುಂತಾದವು ಆತಂಕಕಾರಿಯಾಗಿದ್ದು, ನಾವೆಲ್ಲರೂ ಸಮಾನರು ಎಂಬ ತತ್ವ ಪಾಲಿಸಬೇಕಿದೆ ಎಂದು ಹೇಳಿದರು.
ಈ ಸಂದರ್ಭ ಪದವಿ ಪ್ರಾಂಶುಪಾಲೆ ತೃಪ್ತಿ, ಮುಖ್ಯೋಪಾಧ್ಯಾಯರಾದ ಬೆನ್ನಿ ಜೋಸೆಫ್, ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಉಪನ್ಯಾಸಕರು ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಆರ್ಥಿಕವಾಗಿ ದುರ್ಬಲರಾಗಿರುವ ಆಟೋ ಚಾಲಕರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.
ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಸುಂಟಿಕೊಪ್ಪ ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದ ರಜತ ಮಹೋತ್ಸವ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಸುಂಟಿಕೊಪ್ಪ ಜನತೆಯ ಪರವಾಗಿ ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್ ಸಲ್ಲಿಸಿದ ಮನವಿ ಪತ್ರಕ್ಕೆ ಉತ್ತರಿಸಿದ ಶಾಸಕರು ಬಸವನಹಳ್ಳಿಯಲ್ಲಿ ಕೆಎಸ್ಆರ್ಟಿಸಿ ಡಿಪೋ ಪ್ರಾರಂಭಕ್ಕೆ ಭೂಮಿಪೂಜೆ ನೇರವೇರಿದ್ದು, ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ಹೇಳಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯನ್ನು ಜನಸಂಖ್ಯೆ ಆಧಾರದ ಮೇರೆ ಕಾನೂನಿನ ಚೌಕಟ್ಟಿನಲ್ಲಿ ಪುರಸಭೆ ಮಾಡುವ ಬಗ್ಗೆ ಸರಕಾರದೊಂದಿಗೆ ವ್ಯಹರಿಸಲಾಗುವುದು. ಸುಂಟಿಕೊಪ್ಪ ಆಸ್ಪತ್ರೆಯನ್ನು ಮೇಲ್ದೆರ್ಜೆಗೇರಿಸುವ ಬದಲು ಒಳ್ಳೆಯ ವೈದ್ಯರನ್ನು ನೇಮಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ನುಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್ ಮಾತನಾಡಿ. ಆಟೋ ಚಾಲಕರ ಸೇವೆಯ ಬಗ್ಗೆ ಶ್ಲಾಘಿಸಿದರು. ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್ಕುಮಾರ್ ಮಾತನಾಡಿ, ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಒದಗಿಸಿಕೊಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ದಾನಿ ಹರಪಳ್ಳಿ ರವೀಂದ್ರ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಾಸಕ ಮಂಥರ್ ಗೌಡ ಅವರನ್ನು ಸನ್ಮಾನಿಸಲಾಯಿತು. ೬೦ ವರ್ಷ ಮೇಲ್ಪಟ್ಟ ಹಿರಿಯ ಆಟೋ ಚಾಲಕರು ಮತ್ತು ಮಾಲೀಕರುಗಳಾದ ಸಂಜೀವ, ಕುಂಞಮಹ್ಮದ್, ಮೊಣ್ಣು, ಹಮೀದ್ ಹಾಗೂ ಸ್ಥಾಪಕ ಅಧ್ಯಕ್ಷ ಗ್ಯಾಬ್ರಿಯಲ್ ಡಿಸೋಜ, ಸ್ಥಾಪಕ ಕಾರ್ಯದರ್ಶಿ ವಿಶ್ವನಾಥ್ ಪೂಜಾರಿ, ಹಾಲಿ ಅಧ್ಯಕ್ಷೆ ಎ.ಎಂ. ಶರೀಫ್ ಅವರುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್. ಸಬಾಸ್ಟೀನ್, ಬಿ.ಎಂ. ಸುರೇಶ್, ಐ. ಸೋಮನಾಥ್, ಆಲಿಕುಟ್ಟಿ, ರಫೀಕ್ ಖಾನ್, ಮಂಜುಳ, ವಸಂತಿ, ಶಾಂತಿ, ನಾಗರತ್ನ, ಮಂಗಳಾ, ಗೀತಾ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಇ.ಕರೀಂ, ತಾ.ಪಂ. ಮಾಜಿ ಸದಸ್ಯೆ ಓಡಿಯಪ್ಪನ ವಿಮಲಾವತಿ ಸುಧೀಶ್, ಭಾರತೀಯ ಹಾಕಿ ತರಬೇತುದಾರರಾದ ಅಂಕಿತ ಸುರೇಶ್, ಆಟೋ ಚಾಲಕರ ಸಂಘದ ಹಾಲಿ ಅಧ್ಯಕ್ಷ ಎ.ಎಂ. ಶರೀಫ್, ಪ್ರಧಾನ ಕಾರ್ಯದರ್ಶಿ ಸಿ.ಎ. ಸಚಿನ್ ಹಾಗೂ ಪದಾಧಿಕಾರಿಗಳು ಮತ್ತಿತರರು ಇದ್ದರು.*ಗೋಣಿಕೊಪ್ಪ: ಅರುವತೋಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ೭೫ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಹರೀಶ್ ತವನ್ಕರ್ ನೆರವೇರಿಸಿದರು. ಕನ್ನಡ ಉಪನ್ಯಾಸಕ *ಗೋಣಿಕೊಪ್ಪ: ಅರುವತೋಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ೭೫ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಹರೀಶ್ ತವನ್ಕರ್ ನೆರವೇರಿಸಿದರು. ಕನ್ನಡ ಉಪನ್ಯಾಸಕ *ಗೋಣಿಕೊಪ್ಪ: ಅರುವತೋಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ೭೫ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಹರೀಶ್ ತವನ್ಕರ್ ನೆರವೇರಿಸಿದರು. ಕನ್ನಡ ಉಪನ್ಯಾಸಕ ಮಡಿಕೇರಿ: ಮಡಿಕೇರಿ ಮಹದೇವಪೇಟೆಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಡಾವಣೆಯ ಡಾ. ಅಬ್ದುಲ್ ಕಲಾಂ ಸೌಹಾರ್ದ ಸಮಿತಿಯ ಆಶ್ರಯದಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು.
ಬೆಳಿಗ್ಗೆ ೯ ಗಂಟೆಗೆ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಸಾದಿಕ್ (ಸಾಧು) ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನಗರಸಭೆ ಸದಸ್ಯ ಅಮೀನ್ ಮೊಹಿಸಿನ್ ಧ್ವಜಾರೋಹಣ ಮಾಡಿದರು.
ಬಳಿಕ ಬಡಾವಣೆಯ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಮಿತಿ ಪದಾಧಿಕಾರಿಗಳಾದ ಎಂ.ಎ. ನಾಸಿರ್, ಬಿ.ಪಿ. ಗುರುಕಿರಣ್, ಎಂ.ಎ. ನಜೀರ್, ಪಾಡೆಯಂಡ ಮಣಿ ಮಡಿಕೇರಿ: ಮಡಿಕೇರಿ ಮಹದೇವಪೇಟೆಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಡಾವಣೆಯ ಡಾ. ಅಬ್ದುಲ್ ಕಲಾಂ ಸೌಹಾರ್ದ ಸಮಿತಿಯ ಆಶ್ರಯದಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು.
ಬೆಳಿಗ್ಗೆ ೯ ಗಂಟೆಗೆ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಸಾದಿಕ್ (ಸಾಧು) ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನಗರಸಭೆ ಸದಸ್ಯ ಅಮೀನ್ ಮೊಹಿಸಿನ್ ಧ್ವಜಾರೋಹಣ ಮಾಡಿದರು.
ಬಳಿಕ ಬಡಾವಣೆಯ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಮಿತಿ ಪದಾಧಿಕಾರಿಗಳಾದ ಎಂ.ಎ. ನಾಸಿರ್, ಬಿ.ಪಿ. ಗುರುಕಿರಣ್, ಎಂ.ಎ. ನಜೀರ್, ಪಾಡೆಯಂಡ ಮಣಿ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಾದ ಆದ್ಯಾ ಜಿ. ವರ್ಣೇಕರ್ ಹಾಗೂ ಶಿಫಾ ಫಾತಿಮಾ ಸಂವಿಧಾನ ಕುರಿತಾದ ಭಾಷಣ ಮಾಡಿದರು. ವೇದಿಕೆಯಲ್ಲಿ ಎಂ.ಬಿ. ಮಹಮ್ಮದ್ ಕೌಸರ್, ರಾಜೀವ ಬೌವಡಿ, ಕೆ.ಟಿ. ಮಂದಣ್ಣ (ಜಾಲಿ), ಪಿ.ವೈ. ಜಕ್ರಿಯಾ, ಸ್ಥಳೀಯ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಪ್ರಿಯಾ ಗುರುಕಿರಣ್, ಶಿಕ್ಷಕಿ ಸುಮಿತ್ರಾ, ಸೀತಾ ಪ್ರಕಾಶ್, ಎಂ.ವಿ. ಅಜಾಜ್, ಬಿ.ಎಂ. ಹರೀಶ್ ಮುಂತಾದವರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಬೈ.ಶ್ರೀ. ಪ್ರಕಾಶ್ ಸ್ವಾಗತಿಸಿದರು. ಉಪಾಧ್ಯಕ್ಷ ಟಿ.ಆರ್. ಜೀವನ್ ಸ್ವಾಗತಿಸಿದರು. ಎಲ್ಲರಿಗೂ ಸಿಹಿ ಹಂಚಲಾಯಿತು.ಸುAಟಿಕೊಪ್ಪ: ನಮ್ಮ ದೇಶ ರಾಜರ ಆಳ್ವಿಕೆ ಮತ್ತು ವಿದೇಶಿಯ ಆಳ್ವಿಕೆಗೆ ಒಳಪಟ್ಟಿದ್ದಾಗ ಅಲ್ಲಿ ಸರ್ವಾಧಿಕಾರ ಮನೆ ಮಾಡಿತ್ತು. ಸ್ವಾತಂತ್ರö್ಯದ ನಂತರ ಜನರಿಂದ ಜನರಿಗಾಗಿ ಮತ್ತು ಜನರಿಗೋಸ್ಕರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಂಡುಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಹೇಳಿದರು.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ, ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಿಕೆಯಾಗುವ ನಿಟ್ಟಿನಲ್ಲಿ ಲಿಖಿತ ಸಂವಿಧಾನವನ್ನು ರಚಿಸಲಾಯಿತು. ಈ ಸಂವಿಧಾನವು ಕೈ ಬರಹದ ರೂಪದಲ್ಲಿದ್ದು, ಪಾರ್ಲಿಮೆಂಟಿನ ಗ್ರಂಥಾಲಾಯದಲ್ಲಿ ಶಾಶ್ವತವಾಗಿ ಸಂರಕ್ಷಿಸಿಡಲಾಗಿದೆ. ೧೯೫೦ ಜನವರಿ ೨೬ ರಂದು ಸಂವಿಧಾನ ಹೇಗೆ ಬಂದಿದೆ ಅದರ ಸದ್ಭಳಕೆ ಒಂದು ರಾಷ್ಟಿçÃಯ ಹಬ್ಬವನ್ನಾಗಿ ಆಚರಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಪೊಲೀಸ್ ಇಲಾಖೆಯಿಂದ ರಾಷ್ಟçಧ್ವಜಕ್ಕೆ ಗೌರವ ರಕ್ಷೆ ಅರ್ಪಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್ ಧ್ವಜಾರೋಹಣ ನೇರವೇರಿಸಿದರು. ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಪುಟಾಣಿ ವಿದ್ಯಾರ್ಥಿಗಳ ಭಾರತಾಂಬೆಗೆ ನಮನ ಸಲ್ಲಿಸುವ ಅಂಗ ಸಾಧನೆಯ ನೃತ್ಯ ಜನಮನ ರಂಜಿಸಿತು. ಅಧ್ಯಕ್ಷೆಯನ್ನು ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್. ಸಬಾಸ್ಟೀನ್, ಬಿ.ಎಂ. ಸುರೇಶ್, ಸೋಮನಾಥ್, ಆಲಿಕುಟ್ಟಿ, ಶಬ್ಬೀರ್, ರಫೀಕ್ ಖಾನ್, ಮಂಜುಳ, ಹಸೀನಾ, ವಸಂತಿ, ಶಾಂತಿ, ನಾಗರತ್ನ, ರೇಷ್ಮ, ಚೆÃಂಬರ್ ಆಫ್ ಕಾರ್ಮಸ್ ಅಧ್ಯಕ್ಷ ಡಿ. ನರಸಿಂಹ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಇ. ಕರೀಂ, ಮಾಜಿ ಉಪಾಧ್ಯಕ್ಷರುಗಳಾದ ನಳಿನಿ ಲೋಕೇಶ್, ಬಿ.ಕೆ. ಮೋಹನ್, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಕಾರ್ಯದರ್ಶಿ ರಹೆನಾ ಫೈರೋಜ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸೇಲ್ವರಾಜ್, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಹೀದ್ಜಾನ್, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸ್ತಿçÃಶಕ್ತಿ ಸಂಘದ ಸದಸ್ಯರು ಮತ್ತಿತರರು ಇದ್ದರು.