ಸೋಮವಾರಪೇಟೆ, ಫೆ. ೩: ತಾಲೂಕಿನ ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಎದುರು ಸ್ವಾಗತಿಸಲಾಯಿತು.
ಸಂವಿಧಾನ ಜಾಗೃತಿ ರಥದೊಂ ದಿಗೆ ವಿವಿಧ ಇಲಾಖೆಯ ಅಧಿಕಾರಿ ಗಳು, ಶಾಲಾ ಕಾಲೇಜು ವಿದ್ಯಾರ್ಥಿ ಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾ ಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.
ನಂತರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಮಾತ ನಾಡಿ, ಭಾರತದಲ್ಲಿ ಲಿಖಿತ ಸಂವಿಧಾನ ಇದ್ದು ಜನರು ಪ್ರಜಾಪ್ರಭುತ್ವ ರಾಷ್ಟçದಲ್ಲಿ ಸಂವಿಧಾನದ ಆಶಯಗಳಿಗೆ ಅನುಗುಣ ವಾಗಿ ನಮ್ಮ ಹಕ್ಕು ಮತ್ತು ಕರ್ತವ್ಯ ಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು. ಐಗೂರು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಕೆ. ಉಮೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಇದ್ದರು.
ಇಂದು ಪಟ್ಟಣದಲ್ಲಿ ಜಾಥಾ: ರಾಜ್ಯ ಸರ್ಕಾರದ ಆದೇಶದಂತೆ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರದ ಮೆರವಣಿಗೆ ತಾ.೪ರಂದು (ಇಂದು) ಪಟ್ಟಣದಲ್ಲಿ ನಡೆಯಲಿದೆ. ಬೆಳಿಗ್ಗೆ ೯ ಗಂಟೆಗೆ ಕಕ್ಕೆಹೊಳೆ ಜಂಕ್ಷನ್ ನಿಂದ ಸ್ತಬ್ಧ ಚಿತ್ರ ಸಹಿತ ಜಾಥಾ ಹೊರಟು, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಾಗಲಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆಯ ನಂತರ ಪಟ್ಟಣದ ಜೇಸೀ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಪ.ಪಂ. ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ.