ಮಡಿಕೇರಿ, ಫೆ. ೩ : ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು. ತಹಶೀಲ್ದಾರರು ಮತ್ತು ತಾ.ಪಂ.ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್‌ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಜಾನುವಾರುಗಳಿಗೆ ಮೇವು ಪೂರೈಕೆ ಸಂಬAಧಿಸಿದAತೆ ಪಶು ಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಮಾಹಿತಿ ನೀಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಇ ಸುರೇಶ್ ಕುಮಾರ್ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬAಧಿಸಿದAತೆ ಮಾಹಿತಿಯಿತ್ತರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ತಹಶೀಲ್ದಾರ್‌ರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ, ತಾ.ಪಂ. ಇಓಗಳಾದ ಶೇಖರ್, ಅಪ್ಪಣ್ಣ ಅವರು ಕುಡಿಯುವ ನೀರು ಪೂರೈಕೆಗೆ ಸಿದ್ಧತೆ ಬಗ್ಗೆ ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ, ಪೌರಾಯುಕ್ತ ವಿಜಯ್, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಹೇಮಂತ್ ಕುಮಾರ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಕಾರ್ಮಿಕ ಅಧಿಕಾರಿ ಹರ್ಷವರ್ಧನ ಇದ್ದರು.