ಕೂಡಿಗೆ, ಫೆ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೨-೨೩ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮತ್ತು ೧೫ನೇ ಹಣಕಾಸು ಯೋಜನೆ ಕಾಮಗಾರಿಗಳು ನಡೆದಿರುವ ಹಿನ್ನೆಲೆಯಲ್ಲಿ ಅದರ ಲೆಕ್ಕಪತ್ರವನ್ನು ಗ್ರಾಮ ಸಭೆಯ ಮೂಲಕ ಮಂಡನೆ ಮಾಡಲಾಯಿತು. ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕಾಮಗಾರಿಗಳ ಅನುಮೋದನೆ ಪಡೆಯಲಾಯಿತು. ಲೆಕ್ಕಪತ್ರಗಳ ವರದಿಯನ್ನು ಉದ್ಯೋಗ ಖಾತರಿ ತಾಲೂಕು ಸಂಯೋಜಕ ದಿನೇಶ್ ಮಂಡನೆ ಮಾಡಿದರು.
ನೋಡಲ್ ಅಧಿಕಾರಿಯಾಗಿ ಕೂಡಿಗೆಯ ಜಿಲ್ಲಾ ಕೋಳಿ ಸಾಕಾಣಿಕೆ ಕೇಂದ್ರದ ಉಪ ನಿರ್ದೇಶಕ ಡಾ. ನಾಗರಾಜ್ ಹಾಜರಿದ್ದರು. ಕಾಮಗಾರಿಗಳು ನಡೆದ ಕೆಲವು ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಉದ್ದೇಶ, ವೈಯಕ್ತಿಕ ಕಾಮಗಾರಿಗಳ ಮಾಹಿತಿ ಸೇರಿದಂತೆ ಯಾರೆಲ್ಲಾ ವೈಯಕ್ತಿಕ ಕಾಮಗಾರಿಗಳ ಲಾಭ ಪಡೆಯಬಹುದು ಎಂಬುದರ ಮತ್ತು ಎಲ್ಲಾ ವಾರ್ಡ್ಗಳಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಮಾಹಿತಿ ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಕೆ.ಕೆ. ಭೋಗಪ್ಪ, ಫಿಲೋಮಿನಾ, ಗೌರಮ್ಮ, ಚೈತ್ರ ಮಂಜುನಾಥ, ಷಂಶುದ್ದೀನ್, ಮಂಜುನಾಥ, ಸುರೇಶ್, ಹರೀಶ್, ಗಿರೀಶ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.