ಐಗೂರು, ಫೆ. ೩: ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಗ್ರಾಮಕ್ಕೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯ ಪ್ರಾಥಮಿಕ ಶಾಲಾ ಮಕ್ಕಳು, ಶಿಕ್ಷಕ ವೃಂದ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಸ್ವಾಗತಿಸಿದರು.
ನೋಡಲ್ ಅಧಿಕಾರಿ ಪಶುವೈದ್ಯ ಇಲಾಖೆಯ ವೈದ್ಯ ಡಾ. ಸತೀಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್ ಜಾಥಾ ನೇತೃತ್ವ ವಹಿಸಿದ್ದರು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಮೆರವಣಿಗೆ ಹೊರಟು ಸಭಾ ಕಾರ್ಯಕ್ರಮ ನಡೆಯಿತು. ಸಂವಿಧಾನದ ಮಹತ್ವವನ್ನು ಕುರಿತು ಶಿಕ್ಷಕ ವಿನು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕÀರ್ ದೇಶಕ್ಕೆ ಸಂವಿಧಾನವನ್ನು ರಚಿಸಿ ಶ್ರೇಷ್ಠತೆಯನ್ನು ಮೆರೆದಿದ್ದಾರೆ ಎಂದರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ ಮತ್ತು ಸದಸ್ಯ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕÀರ್ ದೇಶಕ್ಕೆ ಸಂವಿಧಾನವನ್ನು ರಚಿಸಿ ಶ್ರೇಷ್ಠತೆಯನ್ನು ಮೆರೆದಿದ್ದಾರೆ ಎಂದರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ ಮತ್ತು ಸದಸ್ಯ ರಮೇಶ್ ಮಾತನಾಡಿದರು. ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜೇನುಕುರುಬ ಜನಾಂಗದಿAದ ನೃತ್ಯ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್, ಗ್ರಾ.ಪಂ. ಸದಸ್ಯರಾದ ಭೋಜಮ್ಮ, ಪದ್ಮನಾಭ , ರಮೇಶ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.