ಮಡಿಕೇರಿ, ಫೆ. ೩: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬAಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮ ಅನುಷ್ಠಾನದಲ್ಲಿ ಶೇ. ೧೦೦ ರಷ್ಟು ಪ್ರಗತಿ ಸಾಧಿಸಬೇಕೆಂದು ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸಬೇಕು. ಪ್ರಗತಿ ಸಾಧಿಸದಿದ್ದಲ್ಲಿ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಖಜಾನೆಗೆ ಬಿಲ್ಲು ಸಲ್ಲಿಸಲು ಕೊನೆಯ ದಿನ ಹತ್ತಿರ ಬರುತ್ತಿದೆ. ಆದ್ದರಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ವಿದ್ಯುತ್, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ವೈದ್ಯಕೀಯ ಶಿಕ್ಷಣ, ಸಣ್ಣ ನೀರಾವರಿ, ವಸತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೈಮಗ್ಗ ಜವಳಿ, ಕಾರ್ಮಿಕ, ಲೋಕೋಪಯೋಗಿ, ಅರಣ್ಯ, ನಗರಾಭಿವೃದ್ಧಿ, ಸಾರಿಗೆ, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಆಯುಷ್, ಸಣ್ಣ ನೀರಾವರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉನ್ನತ ಶಿಕ್ಷಣ, ಕಂದಾಯ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದರು.