ನಾಪೋಕ್ಲು, ಫೆ. ೩: ರಾಜ್ಯ ಸರ್ಕಾ ರದ ಮಹತ್ವಕಾಂಕ್ಷಿ ಕಾರ್ಯ ಕ್ರಮವಾದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಎಮ್ಮೆಮಾಡು, ಬಲ್ಲಮಾ ವಟಿ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು. ವಿವಿಧೆಡೆ ನಡೆದ ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸ್ಥಳೀಯ ಪೊಲೀಸ್ ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಸದಸ್ಯ ಕುಲ್ಲೇಟಿರ ಅರುಣ್ ಬೇಬ, ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ, ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ ಎಂ.ಎಸ್., ಗ್ರಾಮ ಪಂಚಾಯಿತಿ ಸದಸ್ಯರಾದ ಮಾಚೆಟಿರ ಕುಸು ಕುಶಾಲಪ್ಪ, ಟಿ.ಎ. ಮಹಮ್ಮದ್, ಯಶೋಧ ಕಟ್ಟಿ, ಗಂಗಮ್ಮ, ಲಲಿತ ಪಾಲ್ಗೊಂಡಿದ್ದರು. ಕೆಪಿಎಸ್ ಶಾಲೆಯ ಶಿಕ್ಷಕಿ ಉಷಾರಾಣಿ ಸಂವಿಧಾನದ ರಚನೆ ಆಶಯಗಳ ಕುರಿತು ಮಾತನಾಡಿ ದರು. ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡಿ, ಜಾಥಾದ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪ್ರಮಾಣ ವಚನ ಸ್ವೀಕರಿಸಲಾಯಿತು.

ಇದಕ್ಕೂ ಮುನ್ನ ನಾಪೋಕ್ಲು ಬಸ್ ನಿಲ್ದಾಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ಸದಸ್ಯರು ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಆನಂತರ ಸ್ಕೌಟ್ಸ್ ಗೈಡ್ಸ್ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಪಟ್ಟಣದ ಮುಖ್ಯ ಬೀದಿಗಾಗಿ ಪೊಲೀಸ್ ಮೈದಾನಕ್ಕೆ ಸಾಗಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯ ಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಶಾಲೆಗಳ ಶಿಕ್ಷಕ ವೃಂದ ವಿದ್ಯಾರ್ಥಿ ಗಳು ಪಾಲ್ಗೊಂಡಿದ್ದರು. ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ರಸಪ್ರಶ್ನೆ ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.