ಮರಗೋಡು: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ಮರಗೋಡು ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಗತ ನೀಡಲಾಯಿತು.
ಗ್ರಾಮದ ಯುವಕರು ಬೈಕ್ ಜಾಥಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಳಶದೊಂದಿಗೆ, ಸಾರ್ವಜನಿಕರು, ವಿದ್ಯಾರ್ಥಿಗಳು ಭವ್ಯ ಸ್ವಾಗತ ನೀಡಿದರು. ಸಾರ್ವಜನಿಕ ಸಭೆಯನ್ನು ಮರಗೋಡು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. “ಸಂವಿಧಾನ" ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿ ಕೃಷ್ಣ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂವಿಧಾನದ ಜಾಥಾ ಮಹತ್ವದ ಕುರಿತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಡಿಓ ಚಂದ್ರಮೌಳಿ, ಕಾರ್ಯದರ್ಶಿ ತೇಜಸ್ ಕುಮಾರ್, ಅಂಗನವಾಡಿ, ಆಶಾ ಕಾರ್ಯಕರ್ತರು, ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ವಿಭಾಗಗಳಲ್ಲಿ ನಡೆಸಲಾದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಾಗತ ಕೋರಿದರು. ಶಿಕ್ಷಕಿ ರಾಜೇಶ್ವರಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಮೂರ್ನಾಡು: ಸಂವಿಧಾನ ದಿನಾಚರಣೆಯ ಪ್ರಯುಕ್ತ ಜಾಗೃತಿ ಜಾಥಾಕ್ಕೆ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು, ವಿದ್ಯಾರ್ಥಿಗಳು ಸ್ವಾಗತ ನೀಡಿದರು.
ಸಾರ್ವಜನಿಕ ಸಭೆಯನ್ನು ಮೂರ್ನಾಡು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನದ ಮಹತ್ವದ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ. ಚಂದ್ರಮೌಳಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖ್ಯೋಪಾಧ್ಯಾಯಿನಿ ಪುಷ್ಪವತಿ ಹಾಜರಿದ್ದರು.
ಸಂವಿಧಾನ ಜಾಥಾದ ಮಹತ್ವದ ಕುರಿತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಡಿಓ ಚಂದ್ರಮೌಳಿ, ಅಂಗನವಾಡಿ ಆಶಾ ಕಾರ್ಯಕರ್ತರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಭಾಗವಹಿಸಿದ್ದರು. ವಿವಿಧ ವಿಭಾಗಗಳಲ್ಲಿ ನಡೆಸಲಾದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕಿ ಪುಷ್ಪಾವತಿ ಬಿ.ಎನ್. ಸ್ವಾಗತ ಕೋರಿದರು. ಶಿಕ್ಷಕಿ ಗೌತಮಿ ಬಿ.ಎನ್. ನಿರೂಪಣೆ ಮಾಡಿದರು. ಶಿಕ್ಷಕಿ ಪ್ರೇಮಲತಾ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ನಿಶಾ ಪೊನ್ನಮ್ಮ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಸುಂಟಿಕೊಪ್ಪದಲ್ಲಿ ಸ್ವಾಗತ ಸುಂಟಿಕೊಪ್ಪ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಹಾಗೂ ಅಧಿಕಾರಿಗಳು ಸ್ವಾಗತ ಕೋರಿದರು. ನಂತರ ಶಾಲಾ ಮಕ್ಕಳು ಘೋಷಣೆಯೊಂದಿಗೆ ಪಟ್ಟಣದಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ದೇಶದ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾ ಸಭೆಯನ್ನು ಉದ್ದೇಶಿಸಿ ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ಸಿ.ಯು. ಸರಳ ಮಾತನಾಡಿ,, ಭಾರತದ ಸಂವಿಧಾನ ಜಗತ್ತಿನ ಶೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು ಇದು ಲಿಖಿತ ಸಂವಿಧಾನವಾಗಿದೆ. ಮೂಲತಃ ೩೯೫ ವಿಧಿಗಳು ೮ ಪರಿಚ್ಚೇದಗಳು ಮತ್ತು ೨೨ ಭಾಗಗÀಳಲ್ಲಿ ಸಂವಿಧಾನವನ್ನು ಬರೆಯಲಾಗಿದ್ದು ಕಾಲಕಾಲಕ್ಕೆ ಮಾಡಿದ ತಿದ್ದುಪಡಿಗಳ ಹಿನ್ನೆಲೆಯಲ್ಲಿ ಸಂವಿಧಾನ ಹೆಚ್ಚು ಪರಿಷ್ಕೃತವು ಸ್ಪಷ್ಟತೆಯನ್ನು ಹೊಂದಿದೆ ಎಂದು ಬಣ್ಣಿಸಿದರು. ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು, ಕರ್ತವ್ಯದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದ್ದು, ನಾವೆಲ್ಲ್ಲರೂ ಪ್ರಜಾಪ್ರಭುತ್ವ ರಾಷ್ಟçದಲ್ಲಿ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಬ್ಬೀರ್, ರಫೀಕ್ಖಾನ್ ಹಾಗೂ ಪಿ.ಎಫ್. ಸಬಾಸ್ಟೀನ್ ಅವರುಗಳು ಭಾರತದ ಸಂವಿಧಾನ ಕುರಿತು ಮಾತನಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಸಂವಿಧಾನದ ಮಹತ್ವತೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯ ಅದ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್ ವಹಿಸಿದ್ದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಹಾಗೂ ಸಾಂಕ್ಯ ಅಧಿಕಾರಿ ನಾರಾಯಣ್ ಅವರುಗಳು ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಭಾರತದ ಸಂವಿಧಾನದ ಪ್ರತಿಜ್ಞೆ ಬೋಧಿಸಿದರು.
ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಂಭಾಗದಿAದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಚಾಲನೆ ನೀಡುವ ಮೂಲಕ ಸಂವಿಧಾನ ಜಾಗೃತಿ ರಥದೊಂದಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ ಸಂವಿಧಾನ ಘೋಷವಾಕ್ಯದೊಂದಿಗೆ ಮೆರವಣಿಗೆಯಲ್ಲಿ ತೆರಳಿದ್ದರು. ವೇದಿಕೆ ಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ, ಐ. ಸೋಮನಾಥ, ನಾಗರತ್ನ ಸುರೇಶ್, ಲೆಕ್ಕಾಪರಿಶೋಧಕಿ ಚಂದ್ರಕಲಾ, ಸಂಧ್ಯಾ, ಶ್ರೀನಿವಾಸ್, ಡಿ.ಎಂ. ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆಯರು ಇದ್ದರು. ಭಾರತ ಸಂವಿಧಾನದ ವಿಷಯದ ಕುರಿತು ಶಾಲಾ-ಕಾಲೇಜು ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ವಿಜೇತ ಮಕ್ಕಳಿಗೆ ಪ್ರಸಂಶನಾ ಪತ್ರವನ್ನು ನೀಡಲಾಯಿತು.