ನಾಪೋಕ್ಲು: ಕೊಡಗು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ ಸಂವಿಧಾನ ಅನುಷ್ಠಾನಗೊಂಡು ೭೫ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಕತ್ತೂರು ಕುವೆಂಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಭವ್ಯ ಸ್ವಾಗತ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಕತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್ ಬಿ.ಆರ್., ಉಪಾಧ್ಯಕ್ಷೆ ವಿಜಯಲಕ್ಷಿö್ಮ ಹೆಚ್.ಆರ್., ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಂಜಲಿ, ಸಿಬ್ಬಂದಿ ವರ್ಗದವರು, ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಭವಾನಿ, ಶಿಕ್ಷಕಿಯರಾದ ಚಂದ್ರಿಕಾ, ಜಯಶ್ರೀ, ಶಾಲಾ ವಿದ್ಯಾರ್ಥಿಗಳು, ಸ್ವಸಹಾಯ ಸಂಘದ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ, ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಂಪಾಜೆ ಹೋಬಳಿಯ ನೋಡಲ್ ಅಧಿಕಾರಿ ಎನ್.ಪಿ. ಹೇಮ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಬಳಿಕ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ವಿಭಾಗಗಳಲ್ಲಿ ನಡೆಸಲಾದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ಚೆಯ್ಯಂಡಾಣೆ: ಸಂವಿಧಾನ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದ ವತಿಯಿಂದ ಸಂವಿಧಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಚೆಯ್ಯಂಡಾಣೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಚೆಯ್ಯಂಡಾಣೆ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕಿ ಸತ್ಯಮ್ಮ ಸಂವಿಧಾನ ರಚನೆ ಮತ್ತು ಅದರ ಆಶಯಗಳ ಕುರಿತು ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಸಂವಿಧಾನ ಜಾಥಾ ಕಾರ್ಯಕ್ರಮದ ಕುರಿತು ವಿವರಿಸಿದರು. ಬಳಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಕುರಿತು ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಕ್ಲಸ್ಟರ್ ಸಿಆರ್‌ಪಿ ಉಷಾ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ, ಜಯಪ್ರದ, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಶಿಕ್ಷಕ ವೃಂದ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಕಕ್ಕಬೆ-ಕುAಜಿಲ ಗ್ರಾಮ ಪಂಚಾಯಿತಿ ನಾಪೋಕ್ಲು: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮೀಪದ ಕಕ್ಕಬೆ-ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಈ ಸಂದರ್ಭ ಕಕ್ಕಬೆಯ ಆಟೋ ಚಾಲಕರು ಆಟೋ ಮೆರವಣಿಗೆ ನಡೆಸಿ ಜಾಗೃತಿ ಜಾಥಾಕ್ಕೆ ಸ್ವಾಗತ ಕೋರಿ ಗಮನ ಸೆಳೆದರು. ಬಳಿಕ ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘ ದ ಸಭಾಂಗಣದಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಪಿ.ಎಲ್. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಬೀನಾ ಸುಚಿತ್ರ, ಪಂಚಾಯಿತಿ ಸದಸ್ಯರಾದ ಹರೀಶ್ ಮೊಣ್ಣಪ್ಪ, ಕುಂಡAಡ ರಜಾಕ್, ಬಷೀರ್, ಇಂದಿರಾ, ಶೈಲಾ, ಲೀಲಾವತಿ, ಬೋಪಣ್ಣ, ಸಫೀಯಾ, ಕುಡಿಯರ ಮುತ್ತಪ್ಪ, ಗ್ರಾಮ ಅಭಿವೃದ್ಧಿ ಅಧಿಕಾರಿ ಅಶೋಕ್ ಇನ್ನಿತರರು ಉಪಸ್ಥಿತರಿದ್ದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಛದ್ಮವೇಷ, ಭಾಷಣ, ಪ್ರಬಂಧ, ನೃತ್ಯ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು. ಸಂವಿಧಾನದ ರಚನೆ, ಆಶಯಗಳ ಕುರಿತು ಶಿಕ್ಷಕಿ ರಜಿನಾ ಮತ್ತು ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡಿ, ಜಾಥಾದ ಸಮಗ್ರ ಮಾಹಿತಿಯನ್ನು ನೀಡಿದರುದರು.

ಪಿಡಿಓ ಆಶೋಕ್ ಸ್ವಾಗತಿಸಿದರು. ಕೆ.ಪಿ. ಬಾಣೆ ಶಾಲೆಯ ಶಿಕ್ಷಕ ಗಣೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.