ಕೂಡಿಗೆ, ಫೆ. ೧: ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಪೋಷಕರ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು.

ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಶಿಕ್ಷಕ ಎಸ್.ಎ. ಯೋಗೇಶ್, ದಾನಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಶಾಲಾ ಪ್ರಗತಿಗೆ ನೀಡುತ್ತಿರುವ ಸಹಕಾರದ ಬಗ್ಗೆ ವಿವರಿಸಿದರು. ಶಾಲೆಯಲ್ಲಿ ಈಗ ಎಲ್.ಕೆ.ಜಿ. ತೆರೆದಿದ್ದು, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಯು.ಕೆ.ಜಿ. ಆರಂಭಿಸಲಾಗುವುದು ಎಂದರು.

ಕೂಡುಮAಗಳೂರು ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಗ್ರಾ.ಪA. ಮಾಜಿ ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ಪೋಷಕರು ತಮ್ಮ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್, ಕೂಡುಮಂಗಳೂರು ಗ್ರಾ.ಪಂ. ಮಾಜಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಜೆ. ಫಿಲೋಮಿನಾ, ಚಂದ್ರು ಮೂಡ್ಲಿಗೌಡ, ಗೌರಮ್ಮ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಕೂಡಿಗೆ ಸರ್ಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಡಯಟ್ ಸಂಸ್ಥೆಯ ಉಪನ್ಯಾಸಕ ಸಿದ್ದೇಶ್ ಕುಮಾರ್, ಸಿಆರ್‌ಪಿ ಕೆ. ಶಾಂತಕುಮಾರ್, ನಿವೃತ್ತ ಮುಖ್ಯ ಶಿಕ್ಷಕ, ನಿವೃತ್ತ ಶಿಕ್ಷಕರಾದ ಎಂ.ರAಗಸ್ವಾಮಿ, ರಾಜೇಗೌಡ, ಆರೋಗ್ಯ ಇಲಾಖೆಯ ನಿವೃತ್ತ ನೌಕರ ಹೈದರಾಲಿ, ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ.ಎ. ಗುರುಪ್ರಸಾದ್, ಟಿ..ಎಸ್. ಗುರುಪ್ರಸಾದ್, ಪ್ರಮುಖರಾದ ವಿ.ಎ. ಧರ್ಮ, ಕೆ.ಪಿ. ಗಿರೀಶ್, ಹರೀಶ್, ಕುಮಾರ್, ಆನಂದ, ಕೆ. ವಸಂತ ಇತರರು ಇದ್ದರು. ವಿದ್ಯಾರ್ಥಿಗಳಾದ ಹರ್ಷಿತಾ ಮತ್ತು ತಂಡ ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಎಸ್.ಎ. ಯೋಗೇಶ್ ಸ್ವಾಗತಿಸಿದರು. ಸಿಆರ್‌ಪಿ ಕೆ. ಶಾಂತಕುಮಾರ್ ನಿರೂಪಿಸಿದರು, ಶಿಕ್ಷಕ ಹೆಚ್.ಟಿ. ನಾಗರಾಜ್ ವಂದಿಸಿದರು.