ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ೭೫ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಅಧ್ಯಕ್ಷ ಭಾಸ್ಕರ್ ನಾಯಕ್ ದಿನದ ಮಹತ್ವದ ಕುರಿತು ಮಾತನಾಡಿದರು.
ಈ ಸಂದರ್ಭ ಸದಸ್ಯೆ ಫಿಲೋಮಿನಾ, ಅಭಿವೃದ್ಧಿ ಅಧಿಕಾರಿ ಸಂತೋಷ್, ಕಾರ್ಯದರ್ಶಿ ಮಮತ, ಅವಿನಾಶ್, ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕೂಡಿಗೆ ಗ್ರಾಮ ಪಂಚಾಯಿತಿ
ಕೂಡಿಗೆ: ಗಣರಾಜ್ಯೋತ್ಸವ ಅಂಗವಾಗಿ ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಕೆ.ಟಿ. ಗಿರೀಶ್ ೭೫ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ಮಂಜಳಾ, ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಶನಿವಾರಸಂತೆ ಸುಪ್ರಜ ಗುರುಕುಲ ಶಾಲೆಮುಳ್ಳೂರು: ಸಮೀಪದ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿAದ ಆಚರಿಸಲಾಯಿತು. ಬೆಳಿಗ್ಗೆ ೧೦ ಗಂಟೆಗೆ ಶಾಲೆಯ ಹಿರಿಯ ಶಿಕ್ಷಕಿ ಆಶಾ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಯೋಗೇಶ್ ಗಣರಾಜ್ಯೋತ್ಸವದÀ ಮಹತ್ವ ಕುರಿತಂತೆ ವಿದ್ಯಾರ್ಥಿಗಳಿಗೆ ಸಮಗ್ರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ ಮಾತನಾಡಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಗಾಯನ, ದಿನದ ಮಹತ್ವ ಕುರಿತು ಭಾಷಣ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನವನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ಪೋಷಕರು ಹಾಜರಿದ್ದರು.
ಲ್ಯಾಂಪ್ಸ್ ಅಕಾಡೆಮಿ ತಿತಿಮತಿ ಮಡಿಕೇರಿ: ಲ್ಯಾಂಪ್ಸ್ ಅಕಾಡೆಮಿ ತಿತಿಮತಿ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಸ್ಥಾಪಕರು ಮತ್ತು ಅಧ್ಯಕ್ಷರು ಪಿ.ವಿ. ಶಬರೀಶ್, ಕಾರ್ಯದರ್ಶಿ ಸುಮನ್ ಎಂ.ಆರ್. ಮತ್ತು ಮುಖ್ಯೋಪಾಧ್ಯಾಯ ಅಪೊಲೀನ್ ಡಿಸೋಜ ಉಪಸ್ಥಿತರಿದ್ದರು.
ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಚೆಯ್ಯಂಡಾಣೆ: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೫ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ಕರಡ ಇದರ ಅಧ್ಯಕ್ಷ ಬೇಪಡಿಯಂಡ ಬಿದ್ದಪ್ಪ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಉಪಾಧ್ಯಕ್ಷೆ ಮಂಜುಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ಬೇಪಡಿಯಂಡ ವಿಲೀನ್ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು, ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು, ಈ ಸಂದರ್ಭ ವಿದ್ಯಾರ್ಥಿಗಳು ಪ್ರಾರ್ಥಿಸಿದರೆ, ಸ್ವಾಗತವನ್ನು ಮುಖ್ಯ ಶಿಕ್ಷಕಿ ಡಿ.ಕೆ. ಲೀಲಾವತಿ, ವಂದನೆಯನ್ನು ಬಿ.ಎ. ದಮಯಂತಿ ನಿರ್ವಹಿಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಈಶ್ವರಿ, ಎಸ್ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.