ಸೋಮವಾರಪೇಟೆ, ಫೆ. ೪: ನಿರಂತರ ಕಲಿಕೆಯಿಂದ ಮಾತ್ರ ಸಾಧನೆಯ ಮೆಟ್ಟಿಲೇರಲು ಸಾಧ್ಯ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ಗಳು ನಿರಂತರ ಅಭ್ಯಾಸದ ಮೂಲಕ ಜ್ಞಾನ ಸಂಪಾದಿಸಿಕೊAಡಲ್ಲಿ ಸಮಾಜ ದಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳ ಬಹುದು ಎಂದು ಶಾಸಕ ಡಾ. ಮಂಥರ್ ಗೌಡ ಅಭಿಪ್ರಾಯಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕಾಲೇಜು ವಾರ್ಷಿ ಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ನಾನಾ ತರಹದ ಪ್ರತಿಭೆಯಿರುತ್ತದೆ. ತಮ್ಮ ಪ್ರತಿಭೆಯನ್ನು ತೋರಿಸಲು ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧಾ ಕಾರ್ಯಕ್ರಮಗಳನ್ನು ಉಪಯೋಗಿಸಿ ಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮಲ್ಲೇ ಕೀಳರಿಮೆ ಬೆಳೆಸಿಕೊಂಡರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಷ್ಟವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಂತದಲ್ಲಿ ವಿವಿಧ ಚರ್ಚಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ಸಂವಹನ ಕಲೆಯನ್ನು ರೂಢಿಸಿ ಕೊಂಡರೆ ಪದವಿ ಹಾಗೂ ಸ್ನಾತಕೋತ್ತರ ವ್ಯಾಸಂಗ ಮಾಡುವ ಸಂದರ್ಭ ಹೆಚ್ಚಿನ ಅಂಕಗಳಿಸಲು ಸಾಧ್ಯವಾಗುವುದರೊಂದಿಗೆ, ನೌಕರಿ ಗಿಟ್ಟಿಸಲು ಸಹಾಯವಾಗುತ್ತದೆ ಎಂದು ಹೇಳಿದರು.
ಕಲಿಕೆಯ ದಿನಗಳಲ್ಲಿ ಧೂಮಪಾನ, ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು. ಪೋಷಕರು ನಿಮ್ಮ ಮೇಲೆ ಕನಸು ಕಟ್ಟಿಕೊಂಡಿರು ತ್ತಾರೆ. ಅವರ ಕನಸು ನನಸು ಮಾಡುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ಬುದ್ದಿವಾದ ಹೇಳಿದರು. ಪೋಷಕರು ಮತ್ತು ಶಿಕ್ಷಕರು ಸಮಾನವಾಗಿ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬುದ್ದಿ ಹೇಳುವುದರಿಂದ ಎಷ್ಟೋ ಮಕ್ಕಳನ್ನು ಸರಿ ದಾರಿಗೆ ತರಬಹುದು. ಪ್ರತಿದಿನ ಪಾಠ ಕೇಳಿ ಮನನ ಮಾಡಿಕೊಳ್ಳುವುದರಿಂದ ಜ್ಞಾಪಕಶಕ್ತಿ ಹೆಚ್ಚುತ್ತದೆ. ಪರೀಕ್ಷೆ ಅತ್ಯಂತ ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ವತಿಯಿಂದ ಆರ್ಥಿಕವಾಗಿ ಹಿಂದು ಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಸ್ಥಾಪನೆ ಮಾಡಿರುವ ‘ಆಸರೆ’ ಹೆಸರಿನ ದತ್ತಿನಿಧಿಗೆ ಶಾಸಕರು ವಾರ್ಷಿಕ ೨೦ ಸಾವಿರ ರೂ.ಗಳನ್ನು ನೀಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ಎ. ಲಾರೆನ್ಸ್ ಮಾತನಾಡಿ, ಈಗಾಗಲೇ ದಾನಿಗಳು ೧.೫೦ ಲಕ್ಷ ರೂ.ನಷ್ಟು ದೇಣಿಗೆ ನೀಡಿದ್ದಾರೆ. ಮುಂದಿನ ಸಾಲಿನಿಂದ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ತೆರೆಯಲು ಚರ್ಚೆ ನಡೆಯುತ್ತಿದ್ದು, ಶಾಸಕರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಎಂದು ಹೇಳಿದರು.
ಪದವಿಪೂರ್ವ ಕಾಲೇಜು ಹಾಗೂ ಮಾದರಿ ಪ್ರಾಥಮಿಕ ಶಾಲೆಗೆ ಸುಮಾರು ೧೩ ಎಕರೆ ಜಾಗವನ್ನು ದಾನ ಮಾಡಿದ ಚೌಡ್ಲು ಗ್ರಾಮದ ದಿ. ಸಿ.ಕೆ. ಕಾಳಪ್ಪ ಅವರ ಮೊಮ್ಮಗ ಸುಮೇಧಾ ರಾಘವ್ ಅವರನ್ನು ಸನ್ಮಾನಿಸ ಲಾಯಿತು. ಕಬಡ್ಡಿಯಲ್ಲಿ ರಾಜ್ಯಮಟ್ಟ ದಲ್ಲಿ ಸಾಧನೆ ತೋರಿದ ಮಹಮ್ಮದ್ ಫೈಜ್, ಎಸ್.ಎಂ. ದರ್ಶನ್, ಅಬ್ದುಲ್ ರಾಜಿಕ್ ಅವರನ್ನು ಗೌರವಿಸಲಾಯಿತು.
ಶೈಕ್ಷಣಿಕ ಸಾಲಿನಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಎಂ. ಬಿಂದು, ಖತೀಜತ್ ಸಿರಿನ್ಶಾನ, ಸಿ.ವಿ. ರಶ್ಮಿ, ಧನುಷ್, ಕೆ.ಹೆಚ್. ಕಿರ್ತನ್ ಅವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ವಿವಿಧ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಾದ ಅಮಿಷಿತ್, ಸ್ನೇಹ, ಶಿಫಾ, ಕಿಶೋರ್ ಕುಮಾರ್, ನವನೀತ್, ಟಿಸ್ಮಾ, ಮೊನಿಕಾ, ವಿದ್ಯಾ, ಮದನ್ ಅವರುಗಳಿಗೆ ಬಹುಮಾನ ನೀಡಲಾಯಿತು.
ವೇದಿಕೆಯಲ್ಲಿ ಬಿಇಓ ಎಸ್. ಭಾಗ್ಯಮ್ಮ, ಕಾಲೇಜು ಪ್ರಾಂಶುಪಾಲ ಬಿ.ಎಂ. ಬೆಳ್ಳಿಯಪ್ಪ, ಪ್ರೌಢಶಾಲಾ ಪ್ರಬಾರ ಉಪ ಪ್ರಾಂಶುಪಾಲೆ ಹೇಮಲತಾ, ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ನಿವೃತ್ತ ಶಿಕ್ಷಕರಾದ ಹೆಚ್.ಎಂ. ರಮೇಶ್, ಜೆ.ಸಿ. ಶೇಖರ್, ವಕೀಲರಾದ ಹೆಚ್.ಸಿ. ನಾಗೇಶ್, ಬಿ.ಇ. ಜಯೇಂದ್ರ, ಹೆಚ್.ಆರ್. ಸುರೇಶ್ ಉಪಸ್ಥಿತರಿದ್ದರು.